ಯಾದಗಿರಿ | ಸತತ ಮಳೆಯಿಂದ ರೈತರ ಬೆಳೆ ಹಾನಿ : ಸಮೀಕ್ಷೆ ನಡೆಸಿ ಪರಿಹಾರ ನೀಡುವಂತೆ ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹ

ಯಾದಗಿರಿ: ಸತತ ಮಳೆಯಿಂದಾಗಿ ಜಿಲ್ಲೆಯಾದ್ಯಂತ ರೈತರು ಬೆಳೆದ ಬೆಳೆಗಳು ಹಾನಿಯಾಗಿದ್ದು ಕೂಡಲೇ ಸರಕಾರ ರೈತರ ನೆರವಿಗೆ ಧಾವಿಸಬೇಕು. ತ್ವರಿತವಾಗಿ ಜಂಟಿ ಸಮೀಕ್ಷೆ ಮಾಡಿ ಸೂಕ್ತ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಟಿಎನ್ ಭೀಮುನಾಯಕ ಆಗ್ರಹಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಅವರು, ಖುದ್ದಾಗಿ ಕೊಯಿಲೂರು ಭಾಗದಲ್ಲಿ ರೈತರ ಹೊಲಗಳಿಗೆ ಭೇಟಿ ಕೊಟ್ಟಾಗ ಬೆಳೆ ಹಾನಿಯಾಗಿರುವುದು ಕಂಡು ಬಂದಿದೆ. ಆದ್ದರಿಂದ ಸರಕಾರ ತಕ್ಷಣ ಎಚ್ಚೆತ್ತು ಕಂದಾಯ ಹಾಗೂ ಕೃಷಿ ಇಲಾಖೆಗಳು ಜಂಟಿ ಸಮಿಕ್ಷೆಯನ್ನು ಕೈಗೊಂಡು ನೊಂದ ರೈತರಿಗೆ ತ್ವರಿತವಾಗಿ ಎಕರೆಗೆ 50 ಸಾವಿರದಂತೆ ಪರಿಹಾರ ವಿತರಿಸಲು ಮುಂದಾಗಬೇಕು ಎಂದು ಒತ್ತಾಯಿಸಿದ್ದಾರೆ.
ಈ ವೇಳೆ ಸಿದ್ದು ನಾಯಕ ಹತ್ತಿಕುಣಿ, ಅಂಬ್ರೇಷ್ ಹತ್ತಿಮನಿ, ಸಂತೋಷ ನಿರ್ಮಲಕರ್, ಪ್ರಕಾಶ ಪಾಟೀಲ್ ಜೈಗ್ರಾಮ್, ಯಮುನಯ್ಯ ಗುತ್ತೇದಾರ, ವಿಶ್ವರಾಜ ಪಾಟೀಲ್, ವೆಂಕಟೇಶ ನಾಯಕ ಬೈರಿಮಡ್ಡಿ, ಅಬ್ದುಲ್ ಚಿಗಾನೂರು, ಶರಣಬಸಪ್ಪ ಯಲ್ಹೇರಿ, ಬಸವರಾಜ ಚೆನ್ನೂರು, ಕಾಶಿನಾಥ ಅವರು ಉಪಸ್ಥಿತರಿದ್ದರು.





