Yadgir | ಸಾಮೂಹಿಕ ಅತ್ಯಾಚಾರ ಆರೋಪ : ಇಬ್ಬರು ಆರೋಪಿಗಳ ಬಂಧನ

ಸಾಂದರ್ಭಿಕ ಚಿತ್ರ (PTI)
ಯಾದಗಿರಿ: ತಾಲೂಕಿನ ಗ್ರಾಮವೊಂದರಲ್ಲಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಘಟನೆ ಬೆಳಕಿಗೆ ಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ಠಾಣೆ ಪೊಲೀಸರು ಶನಿವಾರ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಬಸಪ್ಪ (25) ಮತ್ತು ರಡ್ಡೆಪ್ಪ (30) ಎಂದು ಗುರುತಿಸಲಾಗಿದೆ.
ಶುಕ್ರವಾರ ಸಂಜೆ ಬಯಲು ಬಹಿರ್ದೆಸೆಗೆ ತೆರಳಿ ಮನೆಗೆ ಮರಳುತ್ತಿದ್ದ ಮಹಿಳೆಯನ್ನು ಬಸಪ್ಪ ಅಡ್ಡಗಟ್ಟಿ, ತನ್ನ ನಾದಿನಿಯೊಂದಿಗೆ ಪ್ರೀತಿಸುತ್ತಿರುವ ವಿಚಾರವನ್ನು ಕುಟುಂಬದವರಿಗೆ ಏಕೆ ತಿಳಿಸಿದ್ದೆ ಎಂದು ಪ್ರಶ್ನಿಸಿ ಬೆದರಿಕೆ ಹಾಕಿ ಎಳೆದೊಯ್ದಿದ್ದಾನೆ. ನಂತರ ರಡ್ಡೆಪ್ಪನನ್ನು ಸ್ಥಳಕ್ಕೆ ಕರೆಸಿಕೊಂಡು, ಇಬ್ಬರೂ ಸೇರಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ವಿಷಯವನ್ನು ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.
ಈ ಕುರಿತು ಸಂತ್ರಸ್ತ ಮಹಿಳೆ ದೂರು ನೀಡಿದ್ದು, ಮಹಿಳಾ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
Next Story





