ಯಾದಗಿರಿ | ಸಿಎಂ ಬದಲಾವಣೆ ಮಾಡುವುದಾದರೆ ದಲಿತರನ್ನು ಸಿಎಂ ಮಾಡಿ : ದಲಿತ ಸಂಘಟನೆಗಳ ಒಕ್ಕೂಟ ಆಗ್ರಹ

ಯಾದಗಿರಿ: ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿ ಬಗ್ಗೆ ಚರ್ಚೆ ನಡೆಯುತ್ತಿದೆ. ಕಾಂಗ್ರೆಸ್ ಹೈಕಮಾಂಡ್ ಸಿಎಂ ಬದಲಾವಣೆಗೆ ಮುಂದಾದರೆ ಪಕ್ಷದಲ್ಲಿ ಇರುವ ದಲಿತ ಸಮುದಾಯದ ಅತ್ಯಂತ ಹಿರಿಯ ನಾಯಕ, ಸಚಿವರಲ್ಲಿ ಒಬ್ಬರನ್ನು ಸಿಎಂ ಮಾಡಬೇಕು ಎಂದು ದಲಿತ ಸಂಘಟನೆಗಳ ಒಕ್ಕೂಟದ ಮುಖಂಡರು ಆಗ್ರಹಿಸಿದ್ದಾರೆ. ಒಂದು ವೇಳೆ ಸಿದ್ದರಾಮಯ್ಯ ಅವರನ್ನೇ ಮುಂದುವರಿಸಿದರೂ ನಮಗೆ ಯಾವುದೇ ತಕರಾರು ಇಲ್ಲ ಎಂಬ ಸಂದೇಶವನ್ನು ರವಾನಿಸಿದ್ದಾರೆ.
ಶುಕ್ರವಾರ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರ್ ಪಿಐ ರಾಜ್ಯ ನಾಯಕ ಎ.ಬಿ. ಹೊಸಮನಿ, ಸ್ವಾತಂತ್ರ್ಯ ದೊರೆತು ಎಂಟು ದಶಕಗಳು ಸಮೀಪಿಸುತ್ತಿದ್ದರೂ ಇದುವರೆಗೂ ದಲಿತರಿಗೆ ಸಿಎಂ ಆಗುವ ಅವಕಾಶ ಸಿಕ್ಕಿಲ್ಲ. ಈಗ ಏನಾದರೂ ಸಿದ್ದರಾಮಯ್ಯ ಅವರನ್ನು ಬದಲಿಸಿದರೇ ಆ ಸ್ಥಾನಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಚಿವರಾದ ಡಾ.ಪರಮೇಶ್ವರ್, ಸತೀಶ್ ಜಾರಕಿಹೋಳಿ, ಡಾ.ಎಚ್.ಸಿ ಮಹಾದೇವಪ್ಪ ಅವರಲ್ಲಿ ಒಬ್ಬರನ್ನು ಸಿಎಂ ಮಾಡಬೇಕೆಂದು ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಅನ್ನು ಒತ್ತಾಯಿಸಿದರು.
Next Story





