ಯಾದಗಿರಿ | ಭಾರತ-ಪಾಕಿಸ್ತಾನ ಸಂಘರ್ಷ : ಜಿಲ್ಲಾಡಳಿತ ನೀಡುವ ಅಧಿಕೃತ ಮಾಹಿತಿಯನ್ನು ಅವಲಂಬಿಸಿ: ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ.

ಡಾ.ಸುಶೀಲಾ ಬಿ.
ಯಾದಗಿರಿ : ಭಾರತ ಮತ್ತು ಪಾಕಿಸ್ತಾನದ ಮಧ್ಯೆ ಯುದ್ಧ ಭೀತಿ ಉಂಟಾಗಿರುವ ಹಿನ್ನಲೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸೂಚನೆ ಮೇರೆಗೆ ಜಿಲ್ಲೆಯಲ್ಲಿ ಸಾರ್ವಜನಿಕರು ಸುಳ್ಳು ಸುದ್ದಿಗಳಿಗೆ ಕಿವಿಕೊಡದೆ ಜಿಲ್ಲಾಡಳಿತ ನೀಡುವ ಅಧಿಕೃತವಾಗಿ ಮಾಹಿತಿಯನ್ನು ಅವಲಂಬಿಸಬೇಕು. ಸಾರ್ವಜನಿಕರಿಗೆ ಬೇಕಾಗುವ ಅಗತ್ಯ ವಸ್ತಗಳ ಬೆಲೆಯನ್ನು ಅನಗತ್ಯವಾಗಿ ಹೆಚ್ಚಳ ಮಾಡುವ ಪ್ರಯತ್ನಗಳು ಮಾಡಿದ್ದಲ್ಲಿ ಕಾನೂನು ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದೆಂದು ಜಿಲ್ಲಾಧಿಕಾರಿಗಳಾದ ಡಾ.ಸುಶೀಲಾ ಬಿ. ಅವರು ತಿಳಿಸಿದ್ದಾರೆ.
ಸಾರ್ವಜನಿಕರು ಯಾರು ಅನಾವಶ್ಯಕವಾಗಿ ಸಾಮಾಜಿಕ ಮಾಧ್ಯಮದಲ್ಲಿ ಸುಳ್ಳುಸುದ್ದಿ ಹರಡಕೂಡದು. ಒಂದು ವೇಳೆ ಹರಡಿದಲ್ಲಿ ಅಂತಹವರ ವಿರುದ್ಧ ಕಾನೂನು ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು.
ಪ್ರಸ್ತುತ ಇರುವ ಸಂದಿಗ್ಧ ಪರಿಸ್ಥಿತಿಯಲ್ಲಿ ಸಾರ್ವಜನಿಕರಾಗಲಿ, ಸಂಘ-ಸಂಸ್ಥೆಗಳಾಗಲಿ ಈ ಸಂದರ್ಭವನ್ನು ದುರುಪಯೋಗ ಮಾಡಿಕೊಂಡು ಅನಾವಶ್ಯಕವಾಗಿ ಸಾರ್ವಜನಿಕರಿಗೆ ಬೇಕಾಗುವ ವಸ್ತುಗಳ ಬೆಲೆ ಹೆಚ್ಚಿಸತಕ್ಕದಲ್ಲ. ನಾಗರಿಕರ ರಕ್ಷಣೆಯ ಭಾಗವಾಗಿ ಸಾರ್ವಜನಿಕರು ದೊಡ್ಡ ಪ್ರಮಾಣದ ಸಮಾರಂಭ ಮಾಡುವುದಾಗಲಿ, ಸಾರ್ವಜನಿಕ ಸ್ಥಳಗಳಿಗೆ ಹೋಗುವುದನ್ನು ಮಾಡಬಾರದು. ಅಲ್ಲದೆ ಪ್ರಸ್ತುತ ಸಂದಿಗ್ದ ಪರಿಸ್ಥಿತಿಯಲ್ಲಿ ಸಾರ್ವಜನಿಕರಿಗೆ ತೊಂದರೆಯಾದಲ್ಲಿ 24*7 ತುರ್ತು ಸಹಾಯವಾಣಿ ಸಂಖ್ಯೆ: 08473-253950ಗೆ ಸಂಪರ್ಕಿಸುವಂತೆ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







