Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ಜನನ, ಮರಣ ನೋಂದಣಿ...

ಯಾದಗಿರಿ | ಜನನ, ಮರಣ ನೋಂದಣಿ ಶೇ.100ರಷ್ಟು ಮಾಡಲು ಜಿಲ್ಲಾಧಿಕಾರಿಗಳಿಂದ ಸೂಚನೆ

ವಾರ್ತಾಭಾರತಿವಾರ್ತಾಭಾರತಿ7 Aug 2025 8:20 PM IST
share
ಯಾದಗಿರಿ | ಜನನ, ಮರಣ ನೋಂದಣಿ ಶೇ.100ರಷ್ಟು ಮಾಡಲು ಜಿಲ್ಲಾಧಿಕಾರಿಗಳಿಂದ ಸೂಚನೆ

ಯಾದಗಿರಿ: ಜಿಲ್ಲೆಯಲ್ಲಿನ ಜನನ, ಮರಣಗಳ ನೋಂದಣಿಯನ್ನು ಶೇ.100ರಷ್ಟು ಆಗುವಂತೆ ನೋಡಿಕೊಳ್ಳಲು ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಜಿಲ್ಲಾ ಮಟ್ಟದ ಜನನ, ಮರಣ ನೋಂದಣಿ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಎಲ್ಲ ಸರ್ಕಾರಿ ಆರೋಗ್ಯ ಸಂಸ್ಥೆಗಳಲ್ಲಿ, ಖಾಸಗಿ ಆಸ್ಪತ್ರೆಗಳಲ್ಲಿ ಸಂಭವಿಸುವ ಜನನ, ಮರಣ ಘಟನೆಗಳ ಕುರಿತು ನಿಗಧಿತ ಸಮಯದಲ್ಲಿ ಇ-ಜನ್ಮ ತಂತ್ರಾಂಶದಲ್ಲಿ ಎಂಟ್ರಿ ಮಾಡಲು ಕ್ರಮ ಕೈಗೊಳ್ಳಬೇಕು. ಮರಣಗಳಿಗೆ ಮರಣ ಕಾರಣ ವೈದ್ಯಕೀಯ ಪ್ರಮಾಣ ಪತ್ರ ಕಡ್ಡಾಯವಾಗಿ ಸಲ್ಲಿಸಬೇಕು ಹಾಗೂ ಮರಣೋತ್ತರ ಪರೀಕ್ಷೆ ವರದಿ ಸಂಬಂಧಿಸಿದ ನೋಂದಣಾಧಿಕಾರಿಗಳಿಗೆ ತಪ್ಪದೇ ಸಲ್ಲಿಸುವಂತೆ ಸೂಚಿಸಿದರು.

ಗ್ರಾಮೀಣ ಪ್ರದೇಶದಲ್ಲಿ ಜರುಗುವ ಜನನ, ಮರಣ ನೋಂದಣಿ ಕುರಿತು ಮಾಹಿತಿದಾರರಾದ ಅಂಗನವಾಡಿ ಕಾರ್ಯಕರ್ತೆಯರು, ನೋಂದಣಾಧಿಕಾರಿ ಹಾಗೂ ಉಪನೋಂದಣಾಧಿಕಾರಿಗಳಿಗೆ ಮಾಹಿತಿ ಒದಗಿಸುವಂತೆ ನೋಡಿಕೊಳ್ಳಬೇಕು. ತಾಯಿ ಮಕ್ಕಳ ಆಸ್ಪತ್ರೆ ಸೇರಿದಂತೆ ಅವಶ್ಯಕತೆಗಳಲ್ಲಿ ಸೂಕ್ತ ಜಾಗೃತಿ ಮೂಡಸಬೇಕು. ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಜರಗುವ ಜನನ, ಮರಣಗಳ ಬಗ್ಗೆ ನೋಂದಣಿ ಆಗುವಂತೆ ನೋಡಿಕೊಳ್ಳಲು ಸೂಚಿಸಿದರು.

ಗ್ರಾಮ ಪಂಚಾಯತ್ ಮಟ್ಟದಲ್ಲಿ ಜನನ, ಮರಣ ಘಟನೆಗಳು ಘಟಿಸಿದ 30 ದಿನಗಳವರೆಗಿನ ಘಟನೆಗಳನ್ನು ನೋಂದಾಯಿಸಲು ಗ್ರಾಮ ಪಂಚಾಯತ್ ಕಾರ್ಯದರ್ಶಿಗಳನ್ನು ಜನನ, ಮರಣ ನೋಂದಣಾಧಿಕಾರಿಗಳಾಗಿ ನೇಮಿಸಲಾಗಿದೆ. ನಗರಪ್ರದೇಶಗಳಲ್ಲಿ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್ ಆರೋಗ್ಯ ನಿರೀಕ್ಷಕರು, ನೋಂದಣಾಧಿಕಾರಿಗಳಾಗಿರುತ್ತಾರೆ. ಜನನ, ಮರಣ ಘಟಿಸಿದ 21ದಿನಗಳರೊಳಗೆ ನೋಂದಣಿ ಉಚಿತವಾಗಿರುತ್ತದೆ. 22ರಿಂದ 30ದಿನಗಳರೊಳಗೆ ನೋಂದಣಿಗೆ 20 ರೂ. ಇದೆ, ಜನನ ಮರಣ ಘಟಿಸಿದ 31ರಿಂದ 365 ದಿನಗಳರೊಳಗೆ ನೋಂದಣಿಗೆ(ಸಕ್ಷಮ ಪ್ರಾಧಿಕಾರದ ಅನುಮತಿ ನಂತರ) 50 ರೂ. ಶುಲ್ಕವಿದ್ದು, ಜನನ, ಮರಣ ಘಟಿಸಿದ 365 ದಿನಗಳ ನಂತರ(ಜೆ ಎಮ್.ಎಫ್.ಸಿ ನ್ಯಾಯಾಲಯದ ಆದೇಶದ ನಂತರ) ನೋಂದಣಿಗೆ ಅವಕಾಶವಿದ್ದು, ಜನನ,ಮರಣದ ಹೆಚ್ಚುವರಿ ಪ್ರತಿಗಾಗಿ 50 ರೂ. ಇದೆ. ಈ ಕುರಿತು ಸಾರ್ವಜನಿಕರಿಗೆ ತಿಳಿಹೇಳಲು, ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಲು ಜಿಲ್ಲಾಧಿಕಾರಿಗಳು ಸೂಚಿಸಿದರು.

ಸಭೆಯಲ್ಲಿ ಸಂಖ್ಯಾ ಸಂಗ್ರಹಣಾಧಿಕಾರಿ ಕಚೇರಿಯ ನಾಗರಾಜ ಅವರು ಸಮಗ್ರ ಮಾಹಿತಿ ನೀಡಿದರು. ಜಿ.ಪಂ ಸಿಇಓ ಲವೀಶ್ ಒರಡಿಯಾ, ಅಪರ ಜಿಲ್ಲಾಧಿಕಾರಿ ರಮೇಶ ಕೋಲಾರ, ಸಂಖ್ಯಾ ಸಂಗ್ರಹಣಾಧಿಕಾರಿ ಕಚೇರಿಯ ಸಹಾಯಕ ನಿರ್ದೇಶಕ ಪ್ರಶಾಂತ ಕುಮಾರ್, ಸಹಾಯಕ ಸಾಂಖ್ಯಿಕ ಅಧಿಕಾರಿ ನಾಗರಾಜ್ ನಾಗೂರ ಅವಶ್ಯಕ ಮಾಹಿತಿ ನೀಡಿದರು. ಸಭೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X