Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. Yadgir | ಕೆಂಭಾವಿ ಪುರಸಭೆ ಅಧ್ಯಕ್ಷೆ...

Yadgir | ಕೆಂಭಾವಿ ಪುರಸಭೆ ಅಧ್ಯಕ್ಷೆ ಪ್ರಿಯಾ ರಾಮನಗೌಡ ಪದಚ್ಯುತ

ವಾರ್ತಾಭಾರತಿವಾರ್ತಾಭಾರತಿ13 July 2026 11:30 PM IST
share
Yadgir | ಕೆಂಭಾವಿ ಪುರಸಭೆ ಅಧ್ಯಕ್ಷೆ ಪ್ರಿಯಾ ರಾಮನಗೌಡ ಪದಚ್ಯುತ
ಅವಿಶ್ವಾಸ ನಿರ್ಣಯ ಭಾರಿ ಬಹುಮತದಿಂದ ಅಂಗೀಕಾರ; ಪರ 18, ವಿರೋಧ 1, ತಟಸ್ಥ 1

ಕೆಂಭಾವಿ: ಹಲವು ದಿನಗಳಿಂದ ರಾಜಕೀಯ ಕುತೂಹಲಕ್ಕೆ ಕಾರಣವಾಗಿದ್ದ ಕೆಂಭಾವಿ ಪುರಸಭೆ ಅಧ್ಯಕ್ಷೆ ಪ್ರಿಯಾ ರಾಮನಗೌಡ ಪೊಲೀಸ್ ಪಾಟೀಲ ಅವರ ವಿರುದ್ಧದ ಅವಿಶ್ವಾಸ ನಿರ್ಣಯ ಸೋಮವಾರ ನಡೆದ ವಿಶೇಷ ಸಭೆಯಲ್ಲಿ ಭಾರಿ ಬಹುಮತದಿಂದ ಅಂಗೀಕಾರಗೊಂಡಿದ್ದು, ಅಧ್ಯಕ್ಷೆ ತಮ್ಮ ಸ್ಥಾನ ಕಳೆದುಕೊಂಡಿದ್ದಾರೆ.

ಯಾದಗಿರಿ ಉಪ ವಿಭಾಗಾಧಿಕಾರಿ (ಸಹಾಯಕ ಆಯುಕ್ತ) ಶ್ರೀಧರ ಗೋಟೂರ ಅವರ ಅಧ್ಯಕ್ಷತೆಯಲ್ಲಿ ಕೆಂಭಾವಿ ಪುರಸಭೆ ಸಭಾಂಗಣದಲ್ಲಿ ನಡೆದ ವಿಶೇಷ ಸಭೆಯಲ್ಲಿ ಒಟ್ಟು 20 ಸದಸ್ಯರು ಹಾಜರಿದ್ದರು. ಇವರಲ್ಲಿ 18 ಸದಸ್ಯರು ಅವಿಶ್ವಾಸ ನಿರ್ಣಯದ ಪರವಾಗಿ, ಒಬ್ಬ ಸದಸ್ಯರು ವಿರೋಧವಾಗಿ ಮತ ಚಲಾಯಿಸಿದರೆ, ಮತ್ತೊಬ್ಬ ಸದಸ್ಯರು ತಟಸ್ಥರಾಗಿದ್ದರು.

ಮತದಾನದ ಬಳಿಕ ಅವಿಶ್ವಾಸ ನಿರ್ಣಯ ಅಂಗೀಕಾರಗೊಂಡಿರುವುದಾಗಿ ಘೋಷಿಸಿದ ಸಹಾಯಕ ಆಯುಕ್ತ ಶ್ರೀಧರ ಗೋಟೂರ, "ಇಂದಿನಿಂದ ಜಾರಿಗೆ ಬರುವಂತೆ ಕೆಂಭಾವಿ ಪುರಸಭೆ ಅಧ್ಯಕ್ಷರ ಸ್ಥಾನ ತೆರವಾಗಿದೆ" ಎಂದು ಅಧಿಕೃತವಾಗಿ ಪ್ರಕಟಿಸಿದರು.

ಕೆಂಭಾವಿ ಪುರಸಭೆಯಲ್ಲಿ ಅಧ್ಯಕ್ಷ ಸ್ಥಾನ ಹಂಚಿಕೆ ಕುರಿತ ಒಳಒಪ್ಪಂದದ ವಿಚಾರದಿಂದಲೇ ಕಳೆದ ಕೆಲ ವಾರಗಳಿಂದ ರಾಜಕೀಯ ಬೆಳವಣಿಗೆಗಳು ತೀವ್ರಗೊಂಡಿದ್ದವು. ಒಪ್ಪಂದದಂತೆ ಅಧಿಕಾರಾವಧಿ ಪೂರ್ಣಗೊಂಡ ಬಳಿಕ ಅಧ್ಯಕ್ಷರು ರಾಜೀನಾಮೆ ನೀಡಬೇಕೆಂಬ ಒಪ್ಪಂದವಿದ್ದರೂ, ರಾಜೀನಾಮೆ ಸಲ್ಲಿಸಿ ನಂತರ ಹಿಂಪಡೆದ ಬೆಳವಣಿಗೆ ಕಾಂಗ್ರೆಸ್ ಸದಸ್ಯರ ಅಸಮಾಧಾನಕ್ಕೆ ಕಾರಣವಾಗಿತ್ತು. ಬಳಿಕ 16 ಸದಸ್ಯರು ಅಧ್ಯಕ್ಷೆ ವಿರುದ್ಧ ಅವಿಶ್ವಾಸ ನಿರ್ಣಯದ ಮನವಿ ಸಲ್ಲಿಸಿದ್ದರು.

ಮನವಿಯನ್ನು ಆಧರಿಸಿ ಸಹಾಯಕ ಆಯುಕ್ತರು ವಿಶೇಷ ಸಭೆ ಕರೆದು ಮತದಾನ ನಡೆಸಿದ್ದು, ಭಾರಿ ಬಹುಮತದಿಂದ ಅವಿಶ್ವಾಸ ನಿರ್ಣಯ ಅಂಗೀಕಾರಗೊಂಡಿದೆ.

ಅಧ್ಯಕ್ಷ ಸ್ಥಾನ ತೆರವಾದ ಹಿನ್ನೆಲೆಯಲ್ಲಿ, ಕರ್ನಾಟಕ ಪುರಸಭೆಗಳ ಕಾಯ್ದೆ ಮತ್ತು ನಿಯಮಗಳ ಪ್ರಕಾರ ಮುಂದಿನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯನ್ನು ಶೀಘ್ರದಲ್ಲೇ ಆರಂಭಿಸುವ ಸಾಧ್ಯತೆ ಇದೆ. ಈಗ ಕೆಂಭಾವಿ ಪುರಸಭೆಯ ಮುಂದಿನ ಅಧ್ಯಕ್ಷ ಯಾರು ಎಂಬ ಪ್ರಶ್ನೆ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಭೆಯಲ್ಲಿ ಸುರಪುರ ತಹಸಿಲ್ದಾರ್ ಹುಸೇನಸಾಬ್ ಸರ್ಕವಾಸ್ , ಪುರಸಭೆ ಮುಖ್ಯಾಧಿಕಾರಿ ಪ್ರಕಾಶ್ ಬಾಗ್ಲಿ ಇದ್ದರು.


Tags

YadgirKembhavi Municipal Council
share
ವಾರ್ತಾಭಾರತಿ
ವಾರ್ತಾಭಾರತಿ
Next Story
X