Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ನಾಳೆ (ಎ.17) ರಂದು ವಕ್ಫ್...

ಯಾದಗಿರಿ | ನಾಳೆ (ಎ.17) ರಂದು ವಕ್ಫ್ ತಿದ್ದುಪಡಿ ಮಸೂದೆ ವಿರುದ್ಧ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ16 April 2025 12:46 PM IST
share
Photo of Press meet

ಯಾದಗಿರಿ : ವಕ್ಫ್ ತಿದ್ದುಪಡಿ ಮಸೂದೆಯು ಮುಸ್ಲಿಂ ಸಮುದಾಯದ ವಕ್ಫ್ ಆಸ್ತಿಯನ್ನು ಕಬಳಿಸಲು ಕೇಂದ್ರ ಸರಕಾರ ಮಾಡಿದ ಕುತಂತ್ರವಾಗಿದೆ ಎಂದು ಜಂಟಿ ಕ್ರಿಯಾ ಸಮಿತಿ ಕಾರ್ಯಾಧ್ಯಕ್ಷ ವಹೀದಮೀಯಾ ಅವರು ತಿಳಿಸಿದ್ದಾರೆ.

ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ನಡೆದ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ವಕ್ಫ್ ತಿದ್ದುಪಡಿ ಮಸೂದೆಯು ಮುಸ್ಲಿಂ ಸಮುದಾಯದ ಧಾರ್ಮಿಕ ಆಚರಣೆಗಳು ಹಾಗೂ ಅವರ ವೈಯಕ್ತಿಕ ಕಾನೂನುಗಳಿಗೆ ಧಕ್ಕೆ ಉಂಟು ಮಾಡುವುದಾಗಿದೆ. ಕೇಂದ್ರ ಸರ್ಕಾರವು ಈ ಹಕ್ಕನ್ನು ಹತ್ತಿಕ್ಕಲು ಸಮುದಾಯವನ್ನು ಇಕ್ಕಟ್ಟಿಗೆ ಸಿಲುಕಿಸಿ ವಕ್ಫ್ ಆಸ್ತಿಯನ್ನು ಲಪಟಾಯಿಸುವಂತಾಗಿದೆ ಎಂದು ಹೇಳಿದರು ‌

ಈ ವಕ್ಫ್ ಆಸ್ತಿಯ ಸಾವಿರಾರು ವರ್ಷಗಳ ಧಾರ್ಮಿಕ ಇತಿಹಾಸವನ್ನು ಹೊಂದಿದೆ. ವಕ್ಫ್ ಆಸ್ತಿ ಮುಸ್ಲಿಂ ಸಮುದಾಯದ ವ್ಯಕ್ತಿಗಳು / ಸಮಾಜ ಧತ್ತಿ ಮಾದರಿಯಲ್ಲಿ ಆಸ್ತಿಯನ್ನು ದಾನದ ರೂಪದಲ್ಲಿ ಹರಿದು ಬಂದ ಆಸ್ತಿಯಾಗಿದೆ. ಯಾವುದೇ ಸರ್ಕಾರದ ಅಥವಾ ಇತರ ಸಮುದಾಯದ ಆಸ್ತಿಯಲ್ಲಾ, ಇದನ್ನು ಮುಸ್ಲಿಂ ಸಮುದಾಯ ಮಸೀದಿಗಳು, ಖಬುರುಸ್ತಾನ, ದರ್ಗಾ, ಅಶೂರಖಾನಾ ಶಾಲೆಗಳು ಇದಕ್ಕಾಗಿ ಬಳಸಲಾಗುತ್ತದೆ. ಈ ಆಸ್ತಿಯಿಂದ ಬಂದ ಹಣವನ್ನು ಸಮುದಾಯದ ಬಡಜನ ಉದ್ದಾರ ಹಾಗೂ ಇತರ ಸಮಾಜದ ಒಳಿತಿಗಾಗಿ ಬಳಸಲಾಗುತ್ತದೆ. ಇದು ವಕ್ಫ್ ಆಸ್ತಿಯನ್ನು ಮಾರುವಂತಿಲ್ಲ. ಹಾಗೂ ದಾನದ ರೂಪದಲ್ಲಿ ಇತರರಿಗೆ ದಾನವನ್ನು ಸಹ ಮಾಡುವಂತಿಲ್ಲ. ಮುಸ್ಲಿಂ ಸಮುದಾಯದ ಧಾರ್ಮಿಕ ಚಟುವಟಿಕೆಗಳಿಗೆ ಸಹ ಉತ್ತಮ ರೀತಿಯಲ್ಲಿ ಬಳಕೆಯಾಗುತ್ತಿರುವುದು ಎಲ್ಲರಿಗೆ ಗೊತ್ತಿರುವ ಸಂಗತಿಯಾಗಿದೆ.

ಹೊಸ ತಿದ್ದುಪಡಿ ಮಸೂದೆಯಿಂದ ಸರಕಾರವು ಎಲ್ಲಾ ಹಂತದ ಜವಾಬ್ದಾರಿಗಳು ಹಾಗೂ ಅಧಿಕಾರವನ್ನು ವಕ್ಫ್ ಮಂಡಳಿಯಿಂದ ಕಿತ್ತುಕೊಂಡು ತಾವು ಅಧಿಕಾರದಲ್ಲಿ ಹಸ್ತಕ್ಷೇಪವನ್ನು ಮಾಡಿ ನಿರಂಕುಶ ಆಡಳಿತ ನಡೆಸುವ ಹುನ್ನಾರವಾಗಿದೆ. ಇದು ಸಂವಿಧಾನದ ವಿರುದ್ಧವಾದ ಮಸೂದೆಯಾಗಿದೆ. ಸಂವಿಧಾನದ 14ನೇ ವಿಧಿ, 25, 26 ವಿಧಿ ಸಂಪೂರ್ಣವಾದ ದುರುಪಯೋಗವಾಗಿದೆ ಮತ್ತು ಸಂವಿಧಾನಕ್ಕೆ ಮಾರಕವಾಗಿದೆ. ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ ಎಂದರು.

ಈ ಮಸೂದೆಯನ್ನು ತಕ್ಷಣವೇ ಹಿಂಪಡೆಯಬೇಕು ಎಂದು ಒತ್ತಾಯಿಸಿ ಸಾಂಕೇತ ಒಂದು ದಿನದ ಧರಣಿ ಸತ್ಯಾಗ್ರಹವನ್ನು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಎ.17 ರಂದು ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ. ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಜಿಲಾನಿಸಾಬ್ ಅಪಘಾನ, ಅಲಹಜ್ ಗುಲಾಮ ಮಹಿಬೂಬಸಾಬ, ಎಸ್.ಮುಪ್ತಿ ಮುನೀರ ಅಹಮದಸಾಬ,ಸ್ವಾಲೆ ಅಲ್ ಹಾಜರಿ, ಮನಸೂರ ಅಪಘಾನ, ಇರ್ಫಾನ್‌ ಬಾದಲ್, ಡಾ.ರಫೀಕ್ ಸೌದಾಗರ, ಜಿ.ಹಫೀಜ್ ಪಟೇಲ್, ಖಾಜಿ ಇಂತಿಯಾಜುದ್ದೀನ್, ಅಬ್ದುಲ್ ರಜಾಕ್ ಸದ್ದಾಂ ಹುಸೇನ್, ಸೇರಿದಂತೆ ಅನೇಕರು ಇದ್ದರು ‌

share
ವಾರ್ತಾಭಾರತಿ
ವಾರ್ತಾಭಾರತಿ
Next Story
X