Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ: ಯುಜಿಡಿ ತ್ಯಾಜ್ಯ ಸಂಸ್ಕರಣಾ...

ಯಾದಗಿರಿ: ಯುಜಿಡಿ ತ್ಯಾಜ್ಯ ಸಂಸ್ಕರಣಾ ಘಟಕ ಸ್ಥಳಾಂತರಿಸಲು ಆಗ್ರಹಿಸಿ ಧರಣಿ

ವಾರ್ತಾಭಾರತಿವಾರ್ತಾಭಾರತಿ5 Oct 2026 7:10 PM IST
share
ಯಾದಗಿರಿ: ಯುಜಿಡಿ ತ್ಯಾಜ್ಯ ಸಂಸ್ಕರಣಾ ಘಟಕ ಸ್ಥಳಾಂತರಿಸಲು ಆಗ್ರಹಿಸಿ ಧರಣಿ

ಯಾದಗಿರಿ: ಗ್ರಾಮದ ಸಮೀಪದಲ್ಲಿ ಕೈಗೊಳ್ಳಲಾಗುತ್ತಿರುವ ಒಳಚರಂಡಿ ತ್ಯಾಜ್ಯ ಶುದ್ಧೀಕರಣ ಘಟಕ ಕಾಮಗಾರಿಗೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿ ಕೂಡಲೇ ಘಟಕವನ್ನು ಗ್ರಾಮದಿಂದ ದೂರಕ್ಕೆ ಸ್ಥಳಾಂತರಿಸುವಂತೆ ಆಗ್ರಹಿಸಿ ಜಯ ಕರ್ನಾಟಕ ಸೇನೆ ಜಿಲ್ಲಾ ಘಟಕದ ನೇತೃತ್ವದಲ್ಲಿ ತಾಲೂಕಿನ ಎಂ. ಹೊಸಳ್ಳಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಮಾತನಾಡಿದ ಜಯ ಕರ್ನಾಟಕ ಸೇನೆ ಜಿಲ್ಲಾದ್ಯಕ್ಷ ಮಲ್ಲಿಕಾರ್ಜುನ ಜಲ್ಲಪ್ಪನೋರ್, ಯಾದಗಿರಿ ತಾಲೂಕಿನ ಎಂ. ಹೊಸಳ್ಳಿ ಗ್ರಾಮದ ಸಮೀಪದಲ್ಲೇ ತ್ಯಾಜ್ಯ ಶುದ್ಧಿಕರಣ ಘಟಕ ನಿರ್ಮಾಣ ಮಾಡುತ್ತಿರುವುದಕ್ಕೆ ಗ್ರಾಮಸ್ಥರು ಈಗಾಗಲೇ 4-5 ವರ್ಷಗಳಿಂದಲೇ ವಿರೋಧ ಮಾಡುತ್ತಲೇ ಬಂದಿದ್ದರೂ ಸರ್ಕಾರ ಹಾಗೂ ನಗರಸಭೆಯವರು ರೈತರ ಗ್ರಾಮಸ್ಥರ ಅಳಲಿಗೆ ಕಿವಿಗೊಡದೇ ಈದೀಗ ಕಾಮಗಾರಿ ಮತ್ತಮ್ಮೆ ಮುಂದುವರೆಸುತ್ತಿರುವುದು ಸರಿಯಲ್ಲ. ಮುಂಬರುವ ದಿನಗಳಲ್ಲಿ ಉದ್ದೇಶಿತ ಯುಜಿಡಿ ತ್ಯಾಜ್ಯ ಶುದ್ಧಿಕರಣ ಘಟಕ ಗ್ರಾಮದ ಮಧ್ಯದಲ್ಲಿ ಸೇರುವ ಸಾಧ್ಯತೆ ಇದೆ. ಅಲ್ಲದೇ ಈ ಘಟಕ ಗ್ರಾಮದ 100 ಮೀಟರ್ ಅಂತರದಲ್ಲಿಯೇ ಹೊಸ ಲೇಔಟ್ ಗಳು ಆಗುತ್ತಿವೆ. ಇದರಿಂದ ಗ್ರಾಮದ ಸಮೀಪ ಪ್ಲಾಂಟ್ ಆಗುವುದರಿಂದ ಜನರ ಆರೋಗ್ಯ, ಪರಿಸರ ಹಾಗೂ ಜನ ಜೀವನದ ಮೇಲೆ ಪ್ರಭಾವ ಬೀರಲಿದೆ ಎಂದರು.

ಸಮಸ್ಯೆಯ ಗಂಭೀರತೆಯನ್ನು ಅರಿತು ಕೂಲಂಕಶ ವರದಿ ತರಿಸಿಕೊಂಡು ಕೂಡಲೇ ತ್ಯಾಜ್ಯ ಸಂಸ್ಕರಣಾ ಘಟಕವನ್ನು ಗ್ರಾಮದಿಂದ ಅನತಿ ದೂರದಲ್ಲಿರುವ ಸರ್ಕಾರಿ ಸ್ವಾಮ್ಯದ ಸರ್ಕಾರಿ ಗೈರಾಣ ಜಮೀನಿಗೆ ಸ್ಥಳಾಂತರಿಸಿ ಅನುಕೂಲ ಮಾಡಿಕೊಡಬೇಕು. ಇಲ್ಲವಾದಲ್ಲಿ ನಿತ್ಯ ವಿಷಗಾಳಿ ಸೇವಿಸುವ ಬದಲಿಗೆ ಡಿಸಿ ಕಚೇರಿ ಮುಂದೆ ವಿಷ ಸೇವಿಸಬೇಕಾಗುತ್ತದೆ ಎಂದು ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದರು.

ಮಲ್ಲಿಕಾರ್ಜುನ ಜಲ್ಲಪ್ಪನೋರ್ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸೈದಾಪೂರ ವಲಯ ಅಧ್ಯಕ್ಷ ವೀರೇಶ ಸಜ್ಜನ್ ಕಡೇಚೂರು, ಭೀಮರಡ್ಡಿ ಪೊಲೀಸ್ ಪಾಟೀಲ್, ಬಾಲಪ್ಪ ಟುಬಾಕ್, ಮಲ್ಲರಡ್ಡಿ ಕಾಮರಡ್ಡಿ, ಯಂಕಪ್ಪ ದೊರೆ, ಭರತೇಶ ಪೊ.ಪಾ., ಗುರುಲಿಂಗಯ್ಯ ಸ್ವಾಮಿ, ಭೀಮರಡ್ಡಿ ರಾಜೊಳ್ಳಿ, ಮಲ್ಲು ಚಟ್ನಳ್ಳಿ, ವಿಶ್ವನಾಥರಡ್ಡಿ ಪೊಪಾ., ಜಯರಾಂ ನಾಯ್ಕರ್, ಹೀರಾನಾಯ್ಕ, ದೇವಿಂದ್ರಪ್ಪ ನಾಟೇಕರ್, ಬಸವರಾಜ ಹೊಸಳ್ಳಿ, ಮಹಾದೇವಪ್ಪ, ಕಾಶಪ್ಪ ಜಿನಿಕೇರಿ, ಯೇಸುಮಿತ್ರ ಆಶನಾಳ. ಮಲ್ಲಿಕಾರ್ಜುನ್ ಬಬಲಾದ್, ಶ್ರೀಶೈಲ, ಪಾಂಡು ಅರಕೇರಿ, ಚಂದ್ರು ಕಡೆಚೂರು, ಹುಸೇನಪ್ಪ ಕಡೆಚೂರ್. ಮಣಿ ಸೈದಾಪುರ್, ಸಿದ್ದರಾಮ್ ಹಳೀಗೇರಿ, ಅಂಜು ಚಾಮನಾಳ, ರಫೀಕ್ ಮಸ್ಕನಹಳ್ಳಿ, ಬಂಗಾರಪ್ಪ, ಕರಿಯಪ್ಪ ತಳವಾರ್ ಇನ್ನಿತರರು ಇದ್ದರು.

Tags

Yadgirprotest
share
ವಾರ್ತಾಭಾರತಿ
ವಾರ್ತಾಭಾರತಿ
Next Story
X