Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ಗುಣಮಟ್ಟದ ಶಿಕ್ಷಣ ನೀಡುವುದೇ...

ಯಾದಗಿರಿ | ಗುಣಮಟ್ಟದ ಶಿಕ್ಷಣ ನೀಡುವುದೇ ನಮ್ಮ ಆದ್ಯ ಕರ್ತವ್ಯ : ಶರಣಬಸವ ಪ್ರೊ.ಬಿರಾದರ್

ವಾರ್ತಾಭಾರತಿವಾರ್ತಾಭಾರತಿ15 Aug 2025 5:15 PM IST
share
ಯಾದಗಿರಿ | ಗುಣಮಟ್ಟದ ಶಿಕ್ಷಣ ನೀಡುವುದೇ ನಮ್ಮ ಆದ್ಯ ಕರ್ತವ್ಯ : ಶರಣಬಸವ ಪ್ರೊ.ಬಿರಾದರ್

ಯಾದಗಿರಿ: ಗ್ರಾಮಗಳ ಏಳಿಗೆಯೇ ದೇಶದ ಏಳಿಗೆ ಎಂಬ ಗಾಂಧೀಜಿಯವರ ಕಲ್ಪನೆ ಮೈಗೂಡಿಸಿಕೊಂಡು ಗ್ರಾಮೀಣ ಭಾಗದಲ್ಲಿ ಅತ್ಯುತ್ತಮ ಶಿಕ್ಷಕರನ್ನು ನೇಮಿಸಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದು ನಮ್ಮ ಆದ್ಯ ಕರ್ತವ್ಯವಾಗಿದೆ ಎಂದು ಸೈದಾಪುರ ಗ್ರಾಮದ ಯುನೈಟೆಡ್ ಪಬ್ಲಿಕ್ ಶಾಲೆಯ ಅಧ್ಯಕ್ಷ ಶರಣಬಸವ ಪೊಲೀಸ್ ಬಿರಾದರ್ ಅವರು ಹೇಳಿದರು.

ಜಿಲ್ಲೆಯ ಶಹಾಪುರ ತಾಲೂಕಿನ ಸೈದಾಪುರ ಗ್ರಾಮದ ಯುನೈಟೆಡ್ ಪಬ್ಲಿಕ್ ಶಾಲೆಯಲ್ಲಿ 79 ನೇ ಸ್ವಾತಂತ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಯಾದಗಿರಿ ಜಿಲ್ಲೆಯು ಶಿಕ್ಷಣದಲ್ಲಿ ಹಿಂದುಳಿದ ಕಾರಣ ನಮ್ಮ ಮಕ್ಕಳು ಬೆಂಗಳೂರು, ಮಂಗಳೂರು ಭಾಗದ ಮಕ್ಕಳೊಂದಿಗೆ ಸ್ಪರ್ಧಿಸಲು ಹರಸಾಹಸ ಪಡುವಂತಾಗಿದೆ. ಆದ್ದರಿಂದ ನಾವು ಉತ್ತಮ ಮೂಲ ಸೌಕರ್ಯ ಒದಗಿಸಿ, ಪ್ರತಿಭಾನ್ವಿತ ಶಿಕ್ಷಕರನ್ನು ನೇಮಿಸಿ, ಮಕ್ಕಳ ಮನಸ್ಸಿಗೆ ನಾಟುವಂತೆ ಶಿಕ್ಷಣ ನೀಡಲು ಮುಂದಾಗಿದ್ದೇವೆ. ಪೋಷಕರ ಮತ್ತು ಈ ಭಾಗದ ಜನರ ಸಹಾಯ ಸಹಕಾರ ಅವಶ್ಯಕವಾಗಿದೆ ಎಂದು ಮಾರ್ಮಿಕವಾಗಿ ನುಡಿದರು.

ಮುಖ್ಯ ಅತಿಥಿಯಾಗಿ ಮಾತನಾಡಿದ ಗುತ್ತಿಗೆದಾರ ಶೇಖರ್ ದೊರೆ ಅವರು, ಈ ಭಾಗದಲ್ಲಿ ಪ್ರತಿಭಾನ್ವಿತರಿಗೆ ಕೊರತೆ ಇಲ್ಲ. ಆದರೆ ಪೋಷಕರು ಮಕ್ಕಳಿಗೆ ಉತ್ತಮ ಶಿಕ್ಷಣದ ವಾತಾವರಣ ನಿರ್ಮಿಸಬೇಕು. ಜಾತಿ, ಧರ್ಮ ಮತ್ತು ಮೂಡನಂಬಿಕೆ ಸೇರಿ ಅನಾವಶ್ಯಕ ವಿಷಯಗಳಲ್ಲೇ ಇಂದಿನ ಪಕ್ಷಗಳು ಮುಳುಗಿದ್ದು, ನಮ್ಮ ತೆರಿಗೆ ಹಣ ಕೇವಲ ಜನಪ್ರತಿನಿಧಿಗಳ ಪಾಲಾಗುತ್ತಿದೆ ಎಂದು ತಿಳಿಸಿದರು.

ಶಾಲಾ ಆಡಳಿತ ಮಂಡಳಿ ಏರ್ಪಡಿಸಿದ್ದ ಬರವಣಿಗೆ, ಕ್ರೀಡೆ, ಕಲಾ ಕಾರ್ಯಕ್ರಮ ಸೇರಿ ವಿವಿಧ ಸ್ಪರ್ಧೆಗಳಲ್ಲಿ ಭಾಗಿಯಾದ ಮಕ್ಕಳಿಗೆ ಪದಕ ನೀಡಿ ಸನ್ಮಾನಿಸಿದರು. ಕಾರ್ಯಕ್ರಮವನ್ನು ಶಿಕ್ಷಕರಾದ ಶಿಲ್ಪಾ ಕೇರಳ ನಿರೂಪಿಸಿದರು, ಸಿದ್ದಾರೂಢ ನಡಕೂರ ಸ್ವಾಗತಿಸಿದರು, ಯಶೋಧಾ ವಂದಿಸಿದರು.

ಈ ಸಂದರ್ಭದಲ್ಲಿ ಸ್ವಾತಿ ಕಲಬುರಗಿ, ರವಿ ರಾಜಾಪುರ, ದೇವರಡ್ಡಿ ಎನ್ ಲಖನಾಪುರ, ಸಿದ್ದಣ್ಣ ಕಾಡ ಮಗೇರಾ, ನಿಂಗಣ್ಣಗೌಡ ಪೊಲೀಸ್ ಬಿರಾದರ್, ಪತ್ರಕರ್ತ ಚನ್ನಬಸಪ್ಪ ಬಿ. ದೊಡ್ಡಮನಿ, ನಯುಮ್ ಮಲ್ಲಿಕ್, ಶಾಂತಗೌಡ ಪಾಟೀಲ್, ಸಂಗನಬಸಪ್ಪ ಹಾದಿಮನಿ, ಆರಿಫ್, ಶಾಲಾ ಮುಖ್ಯ ಗುರುಗಳಾದ ಅಪರ್ಣಾ ಕೇರಳ, ಕಾರ್ಯದರ್ಶಿ ಶಿವಲಿಂಗಮ್ಮ ಎಸ್ ಹಾಗೂ ಮಕ್ಕಳು ಪೋಷಕರು ಸೇರಿದಂತೆ ಇತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X