Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ಭೂಮಿಯನ್ನು ಸರಕಾರಿ...

ಯಾದಗಿರಿ | ಭೂಮಿಯನ್ನು ಸರಕಾರಿ ಬೆಲೆಯಲ್ಲಿ ಖರೀದಿಸಿ ವಿಕಲಚೇತನರಿಗೆ ನಿವೇಶನ ಹಂಚಿಕೆ ; ಜೀವನ ಕಟ್ಟಿಮನಿ

ವಾರ್ತಾಭಾರತಿವಾರ್ತಾಭಾರತಿ26 March 2025 9:43 PM IST
share
Photo of Metting

ಸುರಪುರ : ನಗರಸಭೆ ವ್ಯಾಪ್ತಿಯ ಒಳಗಡೆ ಇರುವ ಭೂಮಿಯನ್ನು ಸರಕಾರಿ ಬೆಲೆಯಲ್ಲಿ ನೀಡಿದರೆ ನಗರೋತ್ಥಾನ ಯೋಜನೆ ಅಡಿಯಲ್ಲಿ ಖರೀದಿಸಿ ವಿಕಲಚೇತನರಿಗೆ ಶೇ.5ರಷ್ಟು ಮೀಸಲಿನಡಿ ನಿವೇಶನ ಹಂಚಿಕೆ ಮಾಡಿಕೊಡಲಾಗುವುದು ಎಂದು ನಗರಸಭೆ ಪೌರಾಯುಕ್ತ ಜೀವನ ಕಟ್ಟಿಮನಿ ಹೇಳಿದರು.

ನಗರಸಭೆ ಸಭಾಂಗಣದಲ್ಲಿ ನಡೆದ ವಿಕಲಚೇತನರ ಸಮನ್ವಯ ವಿಶೇಷ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ನಗರಸಭೆಗೆ 31 ವಾರ್ಡ್ ಗಳಲ್ಲಿರುವ ವಿಕಲಚೇತನರ ಸಂಪೂರ್ಣ ಮಾಹಿತಿಯಿರಬೇಕು. ಇದನ್ನು ಸಂಗ್ರಹಿಸಿ ನೀಡದಿದ್ದರೆ ಜಿಲ್ಲಾಧಿಕಾರಿಗೆ ಕ್ರಮಕ್ಕಾಗಿ ಪತ್ರ ಬರೆಯಲಾಗುವುದು ಎಂಬುದಾಗಿ ಅಂಗವಿಕಲರ ಡಾಟಾ ಸಂಗ್ರಹಿಸುವವರಿಗೆ ಎಚ್ಚರಿಕೆ ನೀಡಿದರು.

ನಗರದ ಬಸ್ ನಿಲ್ದಾಣದ ಶೌಚಾಲಯದಲ್ಲಿ ರ‍್ಯಾಂಪ್ ಮಾಡಲಾಗುವುದು. ಅಂಗವಿಕಲರಿಗೆ ಸಾಮಗ್ರಿಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗುವುದು. ಅನರ್ಹ ಅಂಗವಿಕಲರು ಸರಕಾರಿ ಸೌಲಭ್ಯ ಪಡೆಯುತ್ತಿರುವ ಮನವಿಗಳು ಬಂದಿವೆ. ಇದನ್ನು ತೊಡೆದು ಹಾಕಲು ಶೀಘ್ರದಲ್ಲೇ ತಹಶೀಲ್ದಾರ್ ನೇತೃತ್ವದಲ್ಲಿ ಸಭೆ ಕರೆದು ಅರ್ಹ ಅಂಗವಿಕಲರ ಪಟ್ಟಿ ಮಾಡಲಾಗುವುದು. ಶೇ.75ರಷ್ಟು ಅಂಗವಿಕಲರ ದಾಖಲಾತಿ ಪರಿಶೀಲಿಸಿ ಪ್ರತಿ ತಿಂಗಳು 1,400 ರೂ. ಬರುವಂತೆ ತಹಶೀಲ್ದಾರರಿಗೆ ಮನವಿ ಮಾಡಲಾಗುವುದು ಎಂದು ತಿಳಿಸಿದರು.

ಸಮನ್ವಯ ಸಂಘಟನಾಧಿಕಾರಿ ತಿಪ್ಪಮ್ಮ ಬಿರದಾರ ಮಾತನಾಡಿ, ಅಂಗವಿಕಲರಿಗೆ ಶೇ.5ರಷ್ಟು ಅನುದಾನ ಲಭ್ಯವಿದೆ. ಅದರ ಜತೆಗೆ ಹಲವಾರು ಯೋಜನೆಗಳಿದ್ದು, ಅವುಗಳ ಸೇವೆಯನ್ನು ಒದಗಿಸಿಕೊಡಲಾಗುವುದು ಎಂದರು.

ಜಿಲ್ಲಾ ಎಪಿಡಿ ಸಂಸ್ಥೆಯ ಅಧಿಕಾರಿ ಗಿರೀಶ ಕುಲಕರ್ಣಿ ಮಾತನಾಡಿ, ಸಂಸ್ಥೆ ವತಿಯಿಂದ 3 ಲಕ್ಷ ಅಂಗವಿಕಲರಿಗೆ ಸಹಾಯ ಮಾಡಲಾಗಿದೆ. ಅಂಗವಿಕಲರಿಗೆ ಆರೈಕೆ ಭತ್ಯೆ, ಶೌಚಾಲಯಕ್ಕೆ ರ‍್ಯಾಂಪ್ ವ್ಯವಸ್ಥೆ, ಶೌಚಾಲಯ ವ್ಯವಸ್ಥೆ, ಸಾಲಸೌಲಭ್ಯ ಸೇರಿದಂತೆ ವಿವಿಧ ಸಹಕಾರಗಳನ್ನು ಮಾಡಿಕೊಡಬೇಕು ಎಂದು ಮನವಿ ಮಾಡಿದರು.

ಅಂಗವಿಕಲರ ಒಕ್ಕೂಟದ ಅಧ್ಯಕ್ಷ ಶರಣಪ್ಪ ಬಡಿಗೇರಾ ಮಾತನಾಡಿದರು. ಸಂಪನ್ಮೂಲ ವ್ಯಕ್ತಿ ಗೀತಾ ಸ್ವಾಗತಿಸಿದರು. ಸಮನ್ವಯ ಸಂಘಟನಾಧಿಕಾರಿ ದುರ್ಗಪ್ಪ ನಾಯಕ ನಿರೂಪಿಸಿದರು. ಸಂಪನ್ಮೂಲ ವ್ಯಕ್ತಿ ಸುವರ್ಣ ವಂದಿಸಿದರು.

ಎಇಇ ಶಾಂತಪ್ಪ ಹೊಸೂರ, ನಗರಸಭೆ ನಿರ್ವಾಹಕ ಯಲ್ಲಪ್ಪ ನಾಯಕ, ಆರೋಗ್ಯ ಅಧಿಕಾರಿ ಗುರುಸ್ವಾಮಿ, ಮಹೇಶ, ಮಾಳಪ್ಪ, ಪರಶುರಾಮ, ನಿಂಗಯ್ಯ, ಬಸವಯ್ಯ, ಲಕ್ಷ್ಮೀ, ಯುಆರ್‌ಡಬ್ಲ್ಯೂಂ ಜರೀನಾ ಬೇಗಂ, ಸಿಆರ್‌ಪಿಗಳಾದ ಶ್ರೀದೇವಿ, ಬಸಮ್ಮ, ಮೈನುದ್ದೀನ್ ಸೇರಿದಂತೆ ಇತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X