ಯಾದಗಿರಿ | ಶರಣರ ವಿಚಾರಧಾರೆ ಬದುಕಿಗೆ ದಾರಿದೀಪವಾಗಿದೆ : ಅಪರ ಜಿಲ್ಲಾಧಿಕಾರಿ ರಮೇಶ್ ಕೋಲಾರ್

ಯಾದಗಿರಿ: ಶರಣರ ವಿಚಾರಧಾರೆ ಬದುಕಿಗೆ ದಾರಿದೀಪವಾಗಿದ್ದು, ನುಲಿಯಾ ಚಂದಯ್ಯನವರ ಆದರ್ಶಗಳನ್ನು ಪಾಲಿಸುವುದರ ಜೊತೆಗೆ ಅವರು ಹಾಕಿಕೊಟ್ಟ ಮಾರ್ಗದಲ್ಲಿ ಮುನ್ನಡೆಯಬೇಕು. ವಚನ ವಿಚಾರಗಳನ್ನು ಅನುಷ್ಠಾನಕ್ಕೆ ತರಬೇಕು ಎಂದು ಅಪರ ಜಿಲ್ಲಾಧಿಕಾರಿ ರಮೇಶ್ ಕೋಲಾರ್ ಅವರು ಅಭಿಪ್ರಾಯಪಟ್ಟರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆ ಹಾಗೂ ನುಲಿಯ ಚಂದಯ್ಯ ಜಯಂತ್ಯೋತ್ಸವ ಸಮಿತಿ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ನಡೆದ ನುಲಿಯ ಚಂದಯ್ಯ ಜಯಂತ್ಯೋತ್ಸವ ಕಾರ್ಯಕ್ರಮಕ್ಕೆ ದೀಪ ಬೆಳಗಿಸಿ, ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ವಿಶೇಷ ಉಪನ್ಯಾಸಕರಾಗಿ ಆಗಮಿಸಿದ ಸುಭಾಶ್ಚಂದ್ರ ಕೌಲಗಿ ಮಾತನಾಡಿದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಉತ್ತರಾದೇವಿ ಮಠಪತಿ, ಪಿಎಸ್ಐ ನಾಗಮ್ಮ ಸೇರಿದಂತೆ ಸಮಾಜದ ಮುಖಂಡರು ಇನ್ನಿತರರು ಉಪಸ್ಥಿತರಿದ್ದರು.
Next Story





