Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ: ಸೂಕ್ತ ಸಾರಿಗೆ ಬಸ್‌ಗಳ...

ಯಾದಗಿರಿ: ಸೂಕ್ತ ಸಾರಿಗೆ ಬಸ್‌ಗಳ ಸೌಕರ್ಯಕ್ಕೆ ಆಗ್ರಹಿಸಿ ವಿಧ್ಯಾರ್ಥಿಗಳ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ30 July 2026 8:57 PM IST
share
ಯಾದಗಿರಿ: ಸೂಕ್ತ ಸಾರಿಗೆ ಬಸ್‌ಗಳ ಸೌಕರ್ಯಕ್ಕೆ ಆಗ್ರಹಿಸಿ ವಿಧ್ಯಾರ್ಥಿಗಳ ಪ್ರತಿಭಟನೆ

ಯಾದಗಿರಿ: ತಾಲ್ಲೂಕಿನ ಹತ್ತಿಕುಣಿ ಗ್ರಾಮ ದೊಡ್ಡದಾಗಿದ್ದು, ಹೋಬಳಿ ಕೇಂದ್ರವಾಗಿದೆ, ಇಲ್ಲಿಂದ ದಿನಾಲೂ ಬೆಳಿಗ್ಗೆ ಯಾದಗಿರಿ ನಗರದ ವಿವಿಧ ಶಾಲಾ-ಕಾಲೇಜುಗಳಿಗೆ ಸಹಸ್ರಾರು ವಿಧ್ಯಾರ್ಥಿಗಳು ತೆರಳುತ್ತಾರೆ. ಆದರೆ ಕಳೆದ 15 ದಿನಗಳಿಂದ ಸೂಕ್ತ ಬಸ್ ಸೌಕರ್ಯವಿಲ್ಲದೆ ತೊಂದರೆ ಅನುಭವಿಸಿ ಕೊನೆಗೆ ಆಕ್ರೋಶಗೊಂಡು ಯಾದಗಿರಿ-ಸೇಡಂ ರಾಜ್ಯ ಹೆದ್ದಾರಿ ರಸ್ತೆ ಹತ್ತಿಕುಣಿಯಲ್ಲಿ 2 ಗಂಟೆಗಳ ಕಾಲ ವಿದ್ಯಾರ್ಥಿಗಳು ವಾಹನಗಳನ್ನು ತಡೆದು ಪ್ರತಿಭಟನೆ ನಡೆಸಿದರು.

ಪ್ರತಿದಿನ ಕಲ್ಯಾಣ ಕರ್ನಾಟಕ ಸಾರಿಗೆ ಇಲಾಖೆಯ ಬಸ್‌ಗಳು ಯಾದಗಿರಿಯಿಂದ ಸೇಡಂ ಇನ್ನಿತರ ಗ್ರಾಮಗಳಿಗೆ ಬಸ್‌ಗಳು ಹೋಗಿ ಬರುತ್ತಿದ್ದವು. ಸದಾ ಬಸ್‌ಗಳು ಜನರಿಂದ ತುಂಬಿರುತ್ತವೆ, ಪರಿಣಾಮ ಚಾಲಕರು ಹತ್ತಿಕುಣಿಯಲ್ಲಿ ಬಸ್‌ಗಳನ್ನು ನಿಲ್ಲಿಸದೇ ಯಾದಗಿರಿಗೆ ಬರುತ್ತಾರೆ. ಇದರಿಂದ ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ಶಾಲಾ-ಕಾಲೇಜುಗಳಿಗೆ ತೆರಳಲು ಸಾಧ್ಯವಾಗುತ್ತಿಲ್ಲ. ಇದರಿಂದ ನಮ್ಮ ವಿದ್ಯಾಭ್ಯಾಸಕ್ಕೆ ತೊಂದರೆಯಾಗಿದೆ ಎಂದು ವಿದ್ಯಾರ್ಥಿಗಳು ಅಳಲು ತೋಡಿಕೊಂಡರು.

ವಿದ್ಯಾರ್ಥಿಗಳ ಹಲವಾರು ದಿನಗಳ ತೊಂದರೆಗಳನ್ನು ಗಮನಿಸಿದ ಗ್ರಾಮದ ಮುಖಂಡರಾದ ಶರಣಪ್ಪಗೌಡ ಮಾಲಿ ಪಾಟೀಲ್, ಭೀಮರಡ್ಡಿ ರಾಂಪೂರಹಳ್ಳಿ, ವೆಂಕಟರಡ್ಡಿ ಕೌಳೂರ, ನಾಗಪ್ಪ ಗೋಪಾಳಪುರ, ಅಂಬು ನಾಯಕ, ಮಲ್ಲಿಕಾರ್ಜುನ ಕನ್ನಡಿ, ಹಣಮಂತ ನಾಯಕ, ಶರಣು ಗಡೇದ ಇತರರು ಪ್ರತಿಭಟನೆಗೆ ಸಾಥ್ ನೀಡಿದರು.

ವಿಷಯ ತಿಳಿದು ಗ್ರಾಮೀಣ ಪೊಲೀಸ್ ಠಾಣೆ ಪಿಎಸ್‌ಐ ವಿರೇಶ, ಸಾರಿಗೆ ಇಲಾಖೆ ಇನ್ಸಪೆಕ್ಟರ್ ಬಸಣ್ಣಗೌಡ ಇನ್ನೊಂದು ಬಸ್ ತೆಗೆದುಕೊಂಡು ಗ್ರಾಮಕ್ಕೆ ಆಗಮಿಸಿ, ವಿಧ್ಯಾರ್ಥಿಗಳ ಹಾಗೂ ಗ್ರಾಮದ ಮುಖಂಡರ ಜೊತೆ ಮಾತುಕತೆ ನಡೆಸಿ, ವಿದ್ಯಾರ್ಥಿಗಳ ಬೇಡಿಕೆ ಈಡೇರಿಸಲಾಗುವುದು ಎಂದು ಭರವಸೆ ನೀಡಿದರು.

Tags

YadgirStudents Protest
share
ವಾರ್ತಾಭಾರತಿ
ವಾರ್ತಾಭಾರತಿ
Next Story
X