Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ಕೃಷ್ಣಾ ಅಚ್ಚುಕಟ್ಟು ಪ್ರದೇಶದ...

ಯಾದಗಿರಿ | ಕೃಷ್ಣಾ ಅಚ್ಚುಕಟ್ಟು ಪ್ರದೇಶದ ರೈತರ ಹೊಲಗಳಿಗೆ ನೀರು ಬೀಡುವಂತೆ ಆಗ್ರಹಿಸಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ2 April 2025 7:40 PM IST
share
Photo of Protest

ಯಾದಗಿರಿ : ಕೃಷ್ಣಾ ಅಚ್ಚುಕಟ್ಟು ಪ್ರದೇಶ ರೈತರ ಹೊಲಗಳಿಗೆ ಏ.15 ರ ವರೆಗೆ ನಾರಾಯಣಪುರ ಜಲಾಶಯದಿಂದ ನೀರು ಹರಿಸಬೇಕೆಂದು ಆಗ್ರಹಿಸಿ ಸಂಘಟನೆಗಳ ಒಕ್ಕೂಟದಿಂದ ಬುಧವಾರ ಕರೆ ನೀಡಿದ್ದ ಯಾದಗಿರಿ ಬಂದ್ ಶಾಂತಿಯುತವಾಗಿ ನಡೆಯಿತು.

ರಾಜ್ಯ ರೈತ ಸಂಘ, ಕರ್ನಾಟಕ ರಕ್ಷಣಾ ವೇದಿಕೆ, ಕರ್ನಾಟಕ ಪ್ರಾಂತ ರೈತ ಸಂಘ, ಎಐಕೆಕೆಎಂಎಸ್ ಜಿಲ್ಲಾ ಸಂಘಟನೆ, ದಲಿತ ಸಂಘರ್ಷ ಸಮಿತಿ ಹೀಗೆ ವಿವಿಧ ಸಂಘಟನೆಗಳು ಸರ್ವ ಸಂಘಟನೆ ಒಕ್ಕೂಟದ ಹೆಸರಲ್ಲಿ ಕರೆ ನೀಡಿದ್ದ ಬಂದ್ ಗೆ ಸಾರ್ವಜನಿಕರು, ವ್ಯಾಪಾಸ್ಥರು ಸಂಪೂರ್ಣ ಬೆಂಬಲ‌ ನೀಡುವ‌ ಮೂಲಕ ಜಿಲ್ಲೆಯ ರೈತರ ಜೊತೆ ನಾವಿದ್ದೆವೆ ಎಂಬ ಸಂದೇಶ ರವಾನಿಸಿದರು.

ಬೆಳಗ್ಗೆ 6 ಗಂಟೆಯಿಂದಲೇ ಕರವೇ, ಇತರ ಸಂಘಟನೆಗಳ ಮುಖಂಡರು ನಗರದ ಎಲ್ಲಡೆ ಸಂಚರಿಸಿ ಬಂದ್ ಗೆ ಸಹಕರಿಸಬೇಕೆಂದು ಮನವಿ ಮಾಡಿದರು. ಜಿಲ್ಲೆಯ ವಿವಿಧಡೆಯ ಜನರು ಇಲ್ಲಿನ ಕೋರ್ಟ್ ಸಮೀಪದ ಮೇಡೋಡಿಸ್ಟ್ ಚರ್ಚ ಬಳಿ ಜಮಾಗೊಂಡು ಅಲ್ಲಿಂದ ನೇತಾಜಿ ಸುಭಾಷಚಂದ್ರ ಸರ್ಕಲ್ ವರೆಗೂ ಮೆರವಣಿಗೆ ಆಗಮಿಸಿ ಅಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ಆರಂಭಿಸಿದರು.

ಒಂದಡೆ ಬಿಸಿಲು ಏರುತ್ತಿದ್ದರೇ ಇನ್ನೊಂದಡೆ ಸರ್ಕಲ್ ನಲ್ಲಿ ಅಪಾರ ಪ್ರಮಾಣದಲ್ಲಿ‌ ಜನರು ಜಮಾಯಿಸಿ ಬೇಡಿಕೆಗಳಿಗೆ ಆಗ್ರಹಿಸಿ ರಾಜ್ಯ ಸರ್ಕಾರದ ವಿರುದ್ದ ಘೋಷಣೆ ಕೂಗಿದರು. ವಿವಿಧ ಸಂಘಟನೆಗಳ ಮುಖಂಡರಾದ ಶರಣಗೌಡ ಗೂಗಲ್, ದಾವಲ್ ಸಾಬ್ ನದಾಫ್, ಸೈದಪ್ಪ ಕೊಲ್ಲೂರ್, ಅನೀತಾ ಹಿರೇಮಠ, ಬಸವರಾಜ, ಮಾಯಾ ಸುರಪುರ, ಗುಂಡಪ್ಪ ಕಲಬುರಗಿ, ಭೀಮಶಾ ದಫೆದಾರ್ ಸೇರಿದಂತೆ ಅನೇಕರು ಮಾತನಾಡಿದರು.

ಪ್ರತಿಭಟನೆಯಲ್ಲಿ ಮಲ್ಲಣ್ಣ ಚಿಂತಿ, ಎಸ್.ಎಂ.ಸಾಗರ್, ಬಸ್ಸುಗೌಡ, ಸಾಂಗ್ಲಿಯಾನ ಹಾಗೂ ಕರವೇ ಪ್ರವೀಣ ಶೇಟ್ಟಿ ಬಣದ ಪದಾಧಿಕಾರಿಗಳು, ಕರ್ನಾಟಕ ಪ್ರಾಂತ ಕೃಷಿ ಕೂಲಿ ಕಾರ್ಮಿಕ ಸಂಘಟನೆ ಪ್ರಮುಖರು, ಸಿಐಟಿಯು ಸಂಘಟನೆ ಕಾರ್ಯಕರ್ತರು ಸೇರಿದಂತೆಯೇ ಅನೇಕರು ಇದ್ದರು.

ಕಳೆದ 15 ದಿನಗಳಿಂದ ನೀರಿಗಾಗಿ ಜಿಲ್ಲೆಯ ವಿವಿಧಡೆ ಹೋರಾಟಗಳು ನಡೆದರೂ ಜಿಲ್ಲೆಯ ಸಚಿವರು, ಶಾಸಕರು ಕ್ಯಾರೆ ಎನ್ನುತ್ತಿಲ್ಲ. ಇವರಿಗೆ ರೈತರ ಹಿತಕ್ಕಿಂತ ಸ್ವಹಿತವೇ ಮುಖ್ಯವಾಗಿದೆ. ನೀರು ಹರಿಸುವವರೆಗೂ ಹೋರಾಟ ನಿಲ್ಲದು.

-ಟಿ.ಎನ್.ಭೀಮು ನಾಯಕ್, ಕರವೇ ಜಿಲ್ಲಾಧ್ಯಕ್ಷ ಯಾದಗಿರಿ

ಕೂಡಲೇ ಸರ್ಕಾರ ನೀರು ಬೀಡದಿದ್ದರೇ ಜಿಲ್ಲೆಯಲ್ಲಿ ರೈತರ ಸಾಮೂಹಿಕ ಆತ್ಮಹತ್ಯೆಗಳು ನಡೆಯುವ ಸಾಧ್ಯತೆಗಳಿವೆ. ಅನ್ನದಾತನ‌ ಕಡೆ ಗಮನ ಹರಿಸಿ.

-ಚನ್ನಪ್ಪ ಆನೆಗುಂದಿ ಶಹಾಪುರ, ಅಧ್ಯಕ್ಷರು, ಪ್ರಾಂತ ರೈತ ಸಂಘ ಯಾದಗಿರಿ.

ನಾರಾಯಣಪುರ ಜಲಾಶಯದ ನೀರು ನಮ್ಮದು, ಕದ್ದು‌ಮುಚ್ಚಿ ತೆಲಂಗಾಣಕ್ಕೆ ನೀರು ಬೀಡುವ‌ ಮೂಲಕ ಅನ್ಯಾಯ ಮಾಡಿದ ಸರ್ಕಾರ ಕೂಡಲೇ ಏ.15 ರವರೆಗೆ ನೀರು ಹರಿಸಬೇಕು.

-ಮಲ್ಲಿಕಾರ್ಜುನ ಸತ್ಯಂಪೇಟೆ, ರಾಜ್ಯ ಉಪಾಧ್ಯಕ್ಷ, ರಾಜ್ಯ ರೈತ ಸಂಘ.

ಇಂತಹ ಮುಖ್ಯವಾದ ಸಮಯದಲ್ಲಿ‌ ನೀರು ಹರಿಸಿದೇ ರೈತರೊಂದಿಗೆ ಚೆಲ್ಲಾಟ ಆಡುತ್ತಿರುವ ಈ ಸರ್ಕಾರಕ್ಕೆ ರೈತರ ಶಾಪ ತಟ್ಟದೇ ಇರದು. ಕಾರಣ ಏನು ನೆಪ ಹೇಳದೇ ಕೂಡಲೇ ನೀರು ಹರಿಸಿ.

-ಮರೆಪ್ಪ ಚಟ್ಟರಕಿಚಟ್ಟೇರಕರ್, ಜಿಲ್ಲಾ ಮುಖಂಡ, ದಸಂಸ ಯಾದಗಿರಿ

ಪರದಾಡಿದ ಪ್ರಯಾಣಿಕರು :

ಬಂದ್ ಬಗ್ಗೆ ಕಳೆದ ಎರಡು ದಿನಗಳಿಂದ ನಗರದ ಎಲ್ಲಡೆ ಸಂಘಟನೆ‌ ಮುಖಂಡರು ಜಾಗೃತಿ ಮೂಡಿಸಿದ್ದರ ಪರಿಣಾಮ ಜನರು ಬುಧವಾರ ಹೆಚ್ಚಿನ ಸಂಖ್ಯೆಯಲ್ಲಿ‌ ಹೊರಗೆ ಬಂದಿರಲಿಲ್ಲ, ಆದರೇ ಬೇರೆ, ಬೇರೆ ಊರುಗಳಿಂದ ಆಗಮಿಸಿದ ಪ್ರಯಾಣಿಕರು ಮತ್ತು ಕೆಲ ಸ್ಥಳಿಯ ಪ್ರಯಾಣಿಕರು ಬಂದ್ ನಿಂದಾಗಿ ಸಕಾಲಕ್ಕೆ ಊರುಗಳಿಗೆ ಮುಟ್ಟಲು ಪರದಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X