Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. Yadgiri | ಭೀಮಾ ನದಿಗೆ ಪ್ರತಿದಿನ 10.3...

Yadgiri | ಭೀಮಾ ನದಿಗೆ ಪ್ರತಿದಿನ 10.3 ಎಂಎಲ್‌ಡಿ ತ್ಯಾಜ್ಯ ನೀರು: ತಡೆಗೆ ಮರೆಪ್ಪ ಚಟ್ಟರಕರ್ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ16 Oct 2026 7:42 PM IST
share
Yadgiri | ಭೀಮಾ ನದಿಗೆ ಪ್ರತಿದಿನ 10.3 ಎಂಎಲ್‌ಡಿ ತ್ಯಾಜ್ಯ ನೀರು: ತಡೆಗೆ ಮರೆಪ್ಪ ಚಟ್ಟರಕರ್ ಆಗ್ರಹ

ಯಾದಗಿರಿ: ನಗರದ ತ್ಯಾಜ್ಯ ನೀರು ಸಂಸ್ಕರಣೆಯಿಲ್ಲದೆ ನೇರವಾಗಿ ಭೀಮಾ ನದಿಗೆ ಹರಿದು ಸೇರುತ್ತಿದ್ದು, ಪ್ರತಿದಿನ ಸುಮಾರು 10.3 ಎಂಎಲ್‌ಡಿ ತ್ಯಾಜ್ಯ ನೀರು ನದಿ ಸೇರುತ್ತಿದೆ. ಜಲಮಾಲಿನ್ಯ ತಡೆಗೆ ತಕ್ಷಣ ಕ್ರಮ ಕೈಗೊಳ್ಳಬೇಕು ಹಾಗೂ ಯಾದಗಿರಿ ನಗರದಲ್ಲಿ ಒಳಚರಂಡಿ ವ್ಯವಸ್ಥೆ (ಯುಜಿಡಿ) ಮತ್ತು ತ್ಯಾಜ್ಯ ನೀರು ಸಂಸ್ಕರಣಾ ಘಟಕ (ಎಸ್‌ಟಿಪಿ) ಯೋಜನೆಗಳಿಗೆ ಆದ್ಯತೆ ನೀಡಬೇಕು ಎಂದು ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಮರೆಪ್ಪ ಚಟ್ಟರಕರ್ ಒತ್ತಾಯಿಸಿದ್ದಾರೆ.

ಈ ಕುರಿತು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ಅವರು, ನಗರದಲ್ಲಿ ವೈಜ್ಞಾನಿಕ ಒಳಚರಂಡಿ ವ್ಯವಸ್ಥೆ ಇಲ್ಲದಿರುವುದರಿಂದ ತ್ಯಾಜ್ಯ ನೀರು ನೇರವಾಗಿ ನದಿಗೆ ಸೇರುತ್ತಿದೆ. ಇದರಿಂದ ಜಲಮಾಲಿನ್ಯ ಉಂಟಾಗುವುದರ ಜತೆಗೆ ಪರಿಸರದ ಮೇಲೂ ದುಷ್ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಯುಜಿಡಿ ವ್ಯವಸ್ಥೆಯ ಮೂಲಕ ತ್ಯಾಜ್ಯ ನೀರನ್ನು ಸಂಗ್ರಹಿಸಿ, ಎಸ್‌ಟಿಪಿ ಘಟಕದಲ್ಲಿ ವೈಜ್ಞಾನಿಕವಾಗಿ ಸಂಸ್ಕರಿಸಿದ ಬಳಿಕ ವಿಲೇವಾರಿ ಮಾಡುವ ವ್ಯವಸ್ಥೆ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ತ್ಯಾಜ್ಯ ನೀರಿನಿಂದ ದುರ್ವಾಸನೆ, ಸೊಳ್ಳೆಗಳ ಹಾವಳಿ ಹಾಗೂ ಪರಿಸರ ಮಾಲಿನ್ಯ ಹೆಚ್ಚಾಗುವ ಆತಂಕವಿದೆ. ಸಮರ್ಪಕ ಒಳಚರಂಡಿ ವ್ಯವಸ್ಥೆ ಕಲ್ಪಿಸುವುದರಿಂದ ನಗರದ ನೈರ್ಮಲ್ಯ ಸುಧಾರಿಸುವುದರ ಜತೆಗೆ ಸಾರ್ವಜನಿಕರ ಆರೋಗ್ಯವನ್ನೂ ರಕ್ಷಿಸಬಹುದು. ರಾಷ್ಟ್ರೀಯ ಹಸಿರು ನ್ಯಾಯಾಧಿಕರಣದ ನಿರ್ದೇಶನಗಳ ಹಿನ್ನೆಲೆಯಲ್ಲಿ ತ್ಯಾಜ್ಯ ನೀರಿನ ವೈಜ್ಞಾನಿಕ ಸಂಸ್ಕರಣೆ ಮತ್ತು ವಿಲೇವಾರಿಗೆ ಸಂಬಂಧಪಟ್ಟ ಅಧಿಕಾರಿಗಳು ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಗೋಪಾಲ ತೇಳಗೇರಿ, ಭೀಮರಾಯ ಹೊಸ್ಮನಿ, ಸೈದಪ್ಪ ಕೂಲೂರ್, ಪರಶುರಾಮ ಒಡೆಯರ್, ಬಾಲರಾಜ ಖಾನಪೂರ, ಹೊನ್ನಪ್ಪ ನಾಟೇಕಾರ್, ಸಂತೋಷ ಹುರಸಗುಂಡಗಿ, ಮಲ್ಲಿಕಾರ್ಜುನ ಅನಕಸೂಗೂರ, ಹಣಮಂತ ಗುರಸಣಗಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Tags

Yadgiri
share
ವಾರ್ತಾಭಾರತಿ
ವಾರ್ತಾಭಾರತಿ
Next Story
X