ಯಾದಗಿರಿ | ಕರವೇ ಕಾರ್ಯಾಲಯದಲ್ಲಿ ಹೇಮರೆಡ್ಡಿ ಮಲ್ಲಮ್ಮರವರ 603ನೇ ಜಯಂತಿ ಆಚರಣೆ

ಯಾದಗಿರಿ : ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆಯುತ್ತಿರುವ ಕಾರಣ ಇಂದು ನಗರದ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಕಾರ್ಯಾಲಯದಲ್ಲಿ ಮಹಾಸ್ವಾಧಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮರವರ 603ನೇ ಜಯಂತಿಯನ್ನು ಸರಳವಾಗಿ ಆಚರಣೆ ಮಾಡಲಾಯಿತು.
ಈ ವೇಳೆ ಕರವೇ ಜಿಲ್ಲಾಧ್ಯಕ್ಷರಾದ ಟಿ.ಎನ್.ಭೀಮುನಾಯಕ ಅವರು ಮಾತನಾಡಿ, 14ನೇ ಶತಮಾನದಲ್ಲಿ ಶ್ರೀಶೈಲದ ದಕ್ಷಿಣಕ್ಕಿರುವ ವೆಲ್ಲಟೂರು ಜಿಲ್ಲೆಗೆ ಸೇರಿದ ರಾಮಪುರದ ರಾಮರೆಡ್ಡಿ-ಗೌರಮ್ಮ ದಂಪತಿಗಳಿಗೆ ಶ್ರೀಶೈಲ ಚನ್ನಮಲ್ಲಿಕಾರ್ಜುನನ ಕೃಪೆಯಿಂದ ಜನಿಸಿದ ಹೆಣ್ಣು ಮಗುವೇ ಹೇಮರೆಡ್ಡಿ ಮಲ್ಲಮ್ಮ. ಇವರು ಬಾಲ್ಯದಿಂದಲೂ ಶ್ರೀಶೈಲ ಚನ್ನಮಲ್ಲಿಕಾರ್ಜುನನನ್ನೇ ಆರಾಧ್ಯ ದೈವವೆಂದು ಪರಿಭಾವಿಸಿ, ಕಡೆಯಲ್ಲಿ ದೇವರನ್ನೇ ಸಾಕ್ಷಾತ್ಕರಿಸಿಕೊಂಡವಳು. "ಶಿವ ಕರೆದ ಕಾಲಕ್ಕೆ ಮ್ಯಾಲಕ ಹೋಗಾಗ, ನಾಕು ಮಂದಿ ಕಳುಸಾಕ ಬರುವಂಗ ಇರಬೇಕು" ಎನ್ನುವ ಈಕೆಯ ಬಾಳು ಪವಿತ್ರ ಮೌಲ್ಯಗಳ, ಆದರ್ಶದ, ಅತ್ಯಮೂಲ್ಯ ಕಣಜವಾಗಿದೆಂದು ಹೇಳಿದರು.
ಈ ಸಂಧರ್ಭದಲ್ಲಿ ಕರವೇ ಮುಖಂಡರಾದ ಸಾಹೇಬಗೌಡ ನಾಯಕ ಗೌಡಗೇರಾ, ವಿಶ್ವರಾಜ ಪಾಟೀಲ್, ಸಿದ್ದಪ್ಪ ಕೂಯಿಲುರು, ವಿಜಯಕುಮಾರ ರಾಠೋಡ, ಬಸವರಾಜ ಚಾಮ, ಜನಾರ್ಧನ ಬಡಿಗೇರಾ, ಮಹೇಶ ಠಾಣಗುಂದಿ, ಕಾಶಿನಾಥ ನಾನೇಕ, ಸಿದ್ದಯ್ಯ ಸ್ವಾಮಿ ಹಿರೇಮಠ, ಮಲ್ಲೇಶ ನಾಯಕ, ಮರೆಪ್ಪ ಕಡ್ಡಿ, ಹಣಮಂತ ದೊರೆ, ನಾಗರಾಜ ಪಿಲ್ಲಿ, ರಮೇಶ.ಡಿ.ನಾಯಕ ಹಾಗೂ ಇನ್ನೂ ಅನೇಕ ಕರವೇ ಕಾರ್ಯಕರ್ತರರು ಭಾಗಿಯಾಗಿದ್ದರು.