Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. Yadgiri | ಪತ್ರಕರ್ತನ ಅಪಹರಣ ಆರೋಪ :...

Yadgiri | ಪತ್ರಕರ್ತನ ಅಪಹರಣ ಆರೋಪ : ಪ್ರಕರಣ ದಾಖಲು

ವಾರ್ತಾಭಾರತಿವಾರ್ತಾಭಾರತಿ8 Aug 2026 8:49 PM IST
share
Yadgiri | ಪತ್ರಕರ್ತನ ಅಪಹರಣ ಆರೋಪ : ಪ್ರಕರಣ ದಾಖಲು
ಪೊಲೀಸ್‌ ಸಿಬ್ಬಂದಿ ವಿರುದ್ಧ ಕುಟುಂಬಸ್ಥರ ಶಂಕೆ

ಯಾದಗಿರಿ : ನಗರದ ಲುಂಬಿನಿ ಗಾರ್ಡನ್‌ ಬಳಿ ಪತ್ರಕರ್ತನೊಬ್ಬರನ್ನು ಕಾರಿನಲ್ಲಿ ಬಲವಂತವಾಗಿ ಕರೆದೊಯ್ದಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ಯಾದಗಿರಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಶಿಧರ ಕಾಲೊನಿ ಹೊಸಳ್ಳಿ ಕ್ರಾಸ್‌ ನಿವಾಸಿ ಹಾಗೂ ‘ಕ್ರಾಂತಿ’ ಪತ್ರಿಕೆಯ ಪತ್ರಕರ್ತ ಸಾಗರ ಪ್ರೇಮಕುಮಾರ ದೇಸಾಯಿ (35) ಅಪಹರಣಕ್ಕೊಳಗಾದವರು ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಶನಿವಾರ ಬೆಳಿಗ್ಗೆ 11.30ರ ಸುಮಾರಿಗೆ ಮನೆಯಿಂದ ಸ್ಕೂಟಿಯಲ್ಲಿ ಹೊರಟಿದ್ದ ಸಾಗರ ಅವರು, 11.45ರಿಂದ 11.50ರ ನಡುವೆ ಲುಂಬಿನಿ ಗಾರ್ಡನ್‌ ಬಳಿ ತೆರಳುತ್ತಿದ್ದಾಗ ಕಾರಿನಲ್ಲಿ ಬಂದ ಮೂವರು ವ್ಯಕ್ತಿಗಳು ಸ್ಕೂಟಿಗೆ ಅಡ್ಡಗಟ್ಟಿ ನಿಲ್ಲಿಸಿದ್ದಾರೆ. ಬಳಿಕ ಕಾರಿನಿಂದ ಇಳಿದವರು ಸಾಗರ ಅವರ ಮೇಲೆ ಹಲ್ಲೆಗೆ ಯತ್ನಿಸಿ, ಸ್ಕೂಟಿಯನ್ನು ಬದಿಗೆ ತಳ್ಳಿ, ಅವರನ್ನು ಬಲವಂತವಾಗಿ ಕಾರಿನಲ್ಲಿ ಕರೆದೊಯ್ದಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಘಟನೆಯನ್ನು ಗಮನಿಸಿದ ಹೋಂ ಗಾರ್ಡ್‌ ವಿಶ್ವ ಅವರು 112 ಪೊಲೀಸ್‌ ಸೇವೆಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಮಧ್ಯಾಹ್ನ ಕುಟುಂಬಸ್ಥರಿಗೆ ವಿಷಯ ತಿಳಿದಿದ್ದು, ಸಾಗರ ಅವರ ಸಹೋದರ ಭೀಮಾಶಂಕರ ಹಾಗೂ ಸಂಬಂಧಿಕರು ಸ್ಥಳಕ್ಕೆ ತೆರಳಿ ಸುತ್ತಮುತ್ತಲಿನ ಪ್ರದೇಶಗಳ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದಾರೆ. ಪೊಲೀಸರು ಕೂಡ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ, ಸಾಗರ ಅವರ ಪತ್ತೆಗೆ ಶೋಧ ಕಾರ್ಯ ಕೈಗೊಂಡಿದ್ದಾರೆ.

ಪೊಲೀಸ್‌ ಸಿಬ್ಬಂದಿ ವಿರುದ್ಧ ಶಂಕೆ :

ಸಾಗರ ಅವರಿಗೆ ವಿಜಯಪುರ ಜಿಲ್ಲೆಯಲ್ಲಿ ಪೊಲೀಸ್‌ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸುರೇಶ ಪೂಜಾರ ಎಂಬವರು ಪದೇಪದೇ ದೂರವಾಣಿ ಕರೆ ಮಾಡಿ ಕಿರುಕುಳ ನೀಡುತ್ತಿದ್ದರು ಎಂದು ದೂರುದಾರರು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸುರೇಶ ಪೂಜಾರ ಹಾಗೂ ಅವರ ಸಹಚರರು ಅಪಹರಣ ಕೃತ್ಯದಲ್ಲಿ ಭಾಗಿಯಾಗಿರಬಹುದೆಂಬ ಶಂಕೆಯನ್ನು ಕುಟುಂಬಸ್ಥರು ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಯಾದಗಿರಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಸಾಗರ ಅವರ ಪತ್ತೆಗೆ ಕ್ರಮ ಕೈಗೊಂಡಿದ್ದು, ಘಟನೆಯ ಹಿಂದಿರುವ ಕಾರಣ ಹಾಗೂ ಆರೋಪಿಗಳ ಕುರಿತು ಮಾಹಿತಿ ಕಲೆಹಾಕುತ್ತಿದ್ದಾರೆ.

Tags

JournalistYadgiri
share
ವಾರ್ತಾಭಾರತಿ
ವಾರ್ತಾಭಾರತಿ
Next Story
X