Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. Yadgiri | ಅಸ್ಪೃಶ್ಯತೆ ಆರೋಪ: ಸೂಗೂರ...

Yadgiri | ಅಸ್ಪೃಶ್ಯತೆ ಆರೋಪ: ಸೂಗೂರ ಗ್ರಾಮಕ್ಕೆ ಜಿಲ್ಲಾಧಿಕಾರಿ, ಎಸ್ಪಿ ಭೇಟಿ

ವಾರ್ತಾಭಾರತಿವಾರ್ತಾಭಾರತಿ3 Nov 2026 9:50 PM IST
share
Yadgiri | ಅಸ್ಪೃಶ್ಯತೆ ಆರೋಪ: ಸೂಗೂರ ಗ್ರಾಮಕ್ಕೆ ಜಿಲ್ಲಾಧಿಕಾರಿ, ಎಸ್ಪಿ ಭೇಟಿ

ಯಾದಗಿರಿ: ಸುರಪುರ ತಾಲೂಕಿನ ಸೂಗೂರ ಗ್ರಾಮದಲ್ಲಿ ದಲಿತರಿಗೆ ಹೋಟೆಲ್ ಹಾಗೂ ದೇವಸ್ಥಾನ ಪ್ರವೇಶ ನಿರಾಕರಿಸುವ ಮೂಲಕ ಅಸ್ಪೃಶ್ಯತೆ ಆಚರಿಸಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಂಗಳವಾರ ಗ್ರಾಮಕ್ಕೆ ಭೇಟಿ ನೀಡಿ ಸಾರ್ವಜನಿಕರ ಸಭೆ ನಡೆಸಿದರು.

ನವೆಂಬರ್ 1ರಂದು ‘ವಾರ್ತಾಭಾರತಿ’ಯಲ್ಲಿ ಪ್ರಕಟವಾದ ವರದಿಯ ಬೆನ್ನಲ್ಲೇ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿದ್ದಾರೆ. ಈಗಾಗಲೇ ಈ ಘಟನೆಗೆ ಸಂಬಂಧಿಸಿದಂತೆ ಸುರಪುರ ಪೊಲೀಸ್ ಠಾಣೆಯಲ್ಲಿ 13 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.

ಗ್ರಾಮದಲ್ಲಿ ಸಾರ್ವಜನಿಕರೊಂದಿಗೆ ಸಭೆ ನಡೆಸಿದ ಜಿಲ್ಲಾಧಿಕಾರಿ ರಾಹುಲ್ ಪಾಂಡ್ವೆ ಮಾತನಾಡಿ, ಅಸ್ಪೃಶ್ಯತೆ ಒಂದು ಅನಿಷ್ಟ ಸಾಮಾಜಿಕ ಪಿಡುಗಾಗಿದ್ದು, ಸಂವಿಧಾನ ವಿರೋಧಿ ಆಚರಣೆಯಾಗಿದೆ. ಗ್ರಾಮದಲ್ಲಿ ಇಂತಹ ಘಟನೆ ನಡೆದಿರುವುದು ಗಮನಕ್ಕೆ ಬಂದಿದೆ. ಇನ್ನು ಮುಂದೆ ದಲಿತರಿಗೆ ಹೋಟೆಲ್, ದೇವಸ್ಥಾನ ಸೇರಿದಂತೆ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಪ್ರವೇಶ ನಿರಾಕರಿಸುವಂತಿಲ್ಲ. ಇಂತಹ ಕೃತ್ಯಗಳು ಮರುಕಳಿಸಿದರೆ ಸಂಬಂಧಪಟ್ಟವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಗ್ರಾಮಸ್ಥರೆಲ್ಲರೂ ಜಾತಿಭೇದ ಮರೆತು ಪರಸ್ಪರ ಅನ್ಯೋನ್ಯತೆ, ಸಹಬಾಳ್ವೆ ಹಾಗೂ ಸೌಹಾರ್ದತೆಯಿಂದ ಬದುಕಬೇಕು. ಸಮಾಜದಲ್ಲಿ ಪ್ರತಿಯೊಬ್ಬರಿಗೂ ಸಮಾನ ಗೌರವ ನೀಡಬೇಕು ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್ ಮಾತನಾಡಿ, ಸಂವಿಧಾನದ ಅಡಿಯಲ್ಲಿ ಪ್ರತಿಯೊಬ್ಬರಿಗೂ ಸಮಾನ ಹಕ್ಕುಗಳಿವೆ. ಜಾತಿಯ ಆಧಾರದ ಮೇಲೆ ಯಾರಿಗೂ ತಾರತಮ್ಯ ಮಾಡುವ ಹಕ್ಕಿಲ್ಲ. ಹೋಟೆಲ್, ದೇವಸ್ಥಾನ ಅಥವಾ ಇತರೆ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಪ್ರವೇಶ ನಿರಾಕರಿಸುವುದು ಕಂಡುಬಂದರೆ ಅಂತಹವರ ವಿರುದ್ಧ ಕಾನೂನು ರೀತಿ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸಭೆಯ ಬಳಿಕ ಜಿಲ್ಲಾಧಿಕಾರಿ, ಎಸ್ಪಿ ಸೇರಿದಂತೆ ಅಧಿಕಾರಿಗಳು ಗ್ರಾಮಸ್ಥರೊಂದಿಗೆ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದರು. ಈ ಮೂಲಕ ಗ್ರಾಮದಲ್ಲಿ ಜಾತಿಭೇದವಿಲ್ಲದೆ ಎಲ್ಲರೂ ಸಮಾನವಾಗಿ ಬದುಕುವ ವಾತಾವರಣ ನಿರ್ಮಿಸುವ ಸಂದೇಶ ನೀಡಿದರು.

ಈ ಸಂದರ್ಭದಲ್ಲಿ ಡಿವೈಎಸ್ಪಿ ಸೇರಿದಂತೆ ಪೊಲೀಸ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Tags

UntouchabilityYadgiri
share
ವಾರ್ತಾಭಾರತಿ
ವಾರ್ತಾಭಾರತಿ
Next Story
X