Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. Yadgiri | ಸಮಾನತೆಯ ಸಮಾಜ ನಿರ್ಮಾಣಕ್ಕೆ...

Yadgiri | ಸಮಾನತೆಯ ಸಮಾಜ ನಿರ್ಮಾಣಕ್ಕೆ ಅಂಬೇಡ್ಕರ್ ಅವರ ಧಮ್ಮ ಚಿಂತನೆಗಳು ದಾರಿದೀಪ: ಮರೆಪ್ಪ ಚಟ್ಟೇರಕರ್

70ನೇ ಧಮ್ಮ ಚಕ್ರ ಪರಿವರ್ತನಾ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ14 Oct 2026 5:40 PM IST
share
Yadgiri | ಸಮಾನತೆಯ ಸಮಾಜ ನಿರ್ಮಾಣಕ್ಕೆ ಅಂಬೇಡ್ಕರ್ ಅವರ ಧಮ್ಮ ಚಿಂತನೆಗಳು ದಾರಿದೀಪ: ಮರೆಪ್ಪ ಚಟ್ಟೇರಕರ್

ಯಾದಗಿರಿ: ಜಾತಿ ಅಸಮಾನತೆ, ಶೋಷಣೆ ಮತ್ತು ಮೌಢ್ಯಕ್ಕೆ ಪರ್ಯಾಯವಾಗಿ ಸಮಾನತೆ, ವೈಜ್ಞಾನಿಕ ಚಿಂತನೆ ಹಾಗೂ ಮಾನವೀಯ ಮೌಲ್ಯಗಳನ್ನು ಸಾರುವ ಬೌದ್ಧ ಧಮ್ಮವನ್ನು ಡಾ. ಬಿ.ಆರ್. ಅಂಬೇಡ್ಕರ್ ಅವರು ಸ್ವೀಕರಿಸಿದ್ದು, ಸಾಮಾಜಿಕ ಪರಿವರ್ತನೆಯ ಇತಿಹಾಸದಲ್ಲಿ ಮಹತ್ವದ ಮೈಲಿಗಲ್ಲಾಗಿದೆ ಎಂದು ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಮರೆಪ್ಪ ಚಟ್ಟೇರಕರ್ ಹೇಳಿದರು.

ನಗರದ ಅಂಬೇಡ್ಕರ್ ವೃತ್ತದ ಬಳಿ ಬುಧವಾರ ಆಯೋಜಿಸಿದ್ದ 70ನೇ ಧಮ್ಮ ಚಕ್ರ ಪರಿವರ್ತನಾ ದಿನಾಚರಣೆಯಲ್ಲಿ ಮಾತನಾಡಿದ ಅವರು, “ನಾನು ಹಿಂದುವಾಗಿ ಹುಟ್ಟಿದ್ದೇನೆ, ಆದರೆ ಹಿಂದುವಾಗಿ ಸಾಯುವುದಿಲ್ಲ” ಎಂದು ಪ್ರತಿಜ್ಞೆ ಮಾಡಿದ್ದ ಅಂಬೇಡ್ಕರ್ ಅವರು ವಿವಿಧ ಧರ್ಮಗಳ ಕುರಿತು ಆಳವಾದ ಅಧ್ಯಯನ ನಡೆಸಿ, 1956ರ ಅಕ್ಟೋಬರ್ 14ರಂದು ನಾಗಪುರದಲ್ಲಿ ಸುಮಾರು ಐದು ಲಕ್ಷ ಅನುಯಾಯಿಗಳೊಂದಿಗೆ ಬೌದ್ಧ ಧಮ್ಮ ಸ್ವೀಕರಿಸಿದರು. ಈ ಮೂಲಕ ಸಮಾನತೆ, ಸ್ವಾತಂತ್ರ್ಯ ಮತ್ತು ಸಹೋದರತ್ವದ ತತ್ವಗಳನ್ನು ಜನಸಾಮಾನ್ಯರಿಗೆ ಪರಿಚಯಿಸಿದರು ಎಂದು ತಿಳಿಸಿದರು.

ಅಂಬೇಡ್ಕರ್ ಅವರ ಧಮ್ಮ ಸ್ವೀಕಾರದ ಸ್ಮರಣಾರ್ಥ ಪ್ರತಿ ವರ್ಷ ವಿಜಯದಶಮಿಯ ಸಂದರ್ಭದಲ್ಲಿ ನಾಗಪುರ ಸೇರಿದಂತೆ ದೇಶದ ವಿವಿಧೆಡೆ ಧಮ್ಮ ಚಕ್ರ ಪರಿವರ್ತನಾ ದಿನವನ್ನು ಆಚರಿಸಲಾಗುತ್ತದೆ. ಬೌದ್ಧ ಧಮ್ಮದ ಪ್ರಜ್ಞೆ, ಶೀಲ ಮತ್ತು ಕರುಣೆಯ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದರ ಜತೆಗೆ, ಅಂಬೇಡ್ಕರ್ ಅವರ ಆಶಯದಂತೆ ಸಮಾನತೆಯ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಧಮ್ಮಚಾರಿ ನಿಂಗಪ್ಪ ಕೊಲ್ಲೂರಕರ್ ಅವರು ಬುದ್ಧ ವಂದನೆ ನೆರವೇರಿಸಿದರು. ಅಂಬೇಡ್ಕರ್ ಅವರು ಬೌದ್ಧ ಧಮ್ಮ ಸ್ವೀಕರಿಸುವ ಸಂದರ್ಭದಲ್ಲಿ ಸ್ವೀಕರಿಸಿದ 22 ಪ್ರತಿಜ್ಞೆಗಳ ಮಹತ್ವವನ್ನು ಸ್ಮರಿಸಲಾಯಿತು.

ಕಾರ್ಯಕ್ರಮದಲ್ಲಿ ಹಿರಿಯ ಉಪಾಸಕರಾದ ಡಾ. ಭಗವಂತ ಅನವಾರ, ಗೋಪಾಲ ತೇಳಗೆರಿ, ಪರಶುರಾಮ ಮುಸ್ಟೂರಕರ್, ಮಲ್ಲಯ್ಯ ಈಟೇ, ಮಲ್ಲಿಕಾರ್ಜುನ ಕುರಕುಂಬಳಕರ್, ಬಸಲಿಂಗಪ್ಪ ಕುರಕುಂಬಳಕರ್, ಮಲ್ಲಪ್ಪ ಕುರಕುಂಬಳಕರ್, ಭಾಗಪ್ಪ ಗುರುಸಣಗಿ, ದೇವೇಂದ್ರಪ್ಪ ಈಟೇ, ಸುರೇಶ ಬೊಂಬನ್, ಚಂದ್ರಕಾಂತ ಚಲವಾದಿ, ನಿಂಗಪ್ಪ ಬೀರನಾಳ, ಹುಲಗಪ್ಪ ಒಡೆಯರ್, ಶ್ರೀಮಂತ ಚಿನ್ನಾಕರ್, ಆಂಜನೇಯ ಈಟೇ, ನಾಗು ಈಟೇ, ಸಿದ್ರಾಮಪ್ಪ ಮಾಡಗಿ, ಮಂಜುನಾಥ ಗುರುಸಣಗಿ ಹಾಗೂ ವಿಜಯಕುಮಾರ ಆಶನಾಳ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags

SocietyAmbedkarYadgiri
share
ವಾರ್ತಾಭಾರತಿ
ವಾರ್ತಾಭಾರತಿ
Next Story
X