Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. Yadgiri | ಗ್ರಾಮೀಣ ಪ್ರದೇಶಗಳಲ್ಲಿ...

Yadgiri | ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮ ಮದ್ಯ ಮಾರಾಟ ತಡೆಗಟ್ಟಲು ಮನವಿ

ವಾರ್ತಾಭಾರತಿವಾರ್ತಾಭಾರತಿ20 July 2026 7:20 PM IST
share
Yadgiri | ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮ ಮದ್ಯ ಮಾರಾಟ ತಡೆಗಟ್ಟಲು ಮನವಿ

ಯಾದಗಿರಿ: ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ವೈನ್ ಶಾಪ್‌ಗಳು ಹಾಗೂ ಬಾರ್‌ಗಳಿಂದ ಅಕ್ರಮವಾಗಿ ಮದ್ಯ ಸಾಗಾಟ ಮತ್ತು ಮಾರಾಟ ನಡೆಯುತ್ತಿದೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಕಾರ್ಮಿಕ ಸೇನೆ ಜಿಲ್ಲಾ ಘಟಕದ ಪದಾಧಿಕಾರಿಗಳು ಅಬಕಾರಿ ಇಲಾಖೆಗೆ ಮನವಿ ಸಲ್ಲಿಸಿದರು.

ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ಸಂಘದ ಜಿಲ್ಲಾ ಅಧ್ಯಕ್ಷ ಪೋಲಪ್ಪ ಎಂ. ನಾರಾಯಣೋರ್, ಜಿಲ್ಲೆಯ ಕೆಲವು ವೈನ್ ಶಾಪ್‌ಗಳು ಹಾಗೂ ಬಾರ್‌ಗಳಿಂದ ಟಂಟಂ, ದ್ವಿಚಕ್ರ ವಾಹನ ಸೇರಿದಂತೆ ವಿವಿಧ ವಾಹನಗಳ ಮೂಲಕ ಗ್ರಾಮೀಣ ಪ್ರದೇಶಗಳಿಗೆ ಅಕ್ರಮವಾಗಿ ಮದ್ಯ ಸಾಗಿಸಿ ಮಾರಾಟ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಗ್ರಾಮಗಳಲ್ಲಿನ ಹೋಟೆಲ್‌ಗಳು, ಅಂಗಡಿಗಳು ಹಾಗೂ ಇತರೆ ಸ್ಥಳಗಳಲ್ಲಿ ಅಕ್ರಮ ಮದ್ಯ ಮಾರಾಟ ನಡೆಯುತ್ತಿರುವುದರಿಂದ ಸಾರ್ವಜನಿಕರ ಜೀವನದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಮದ್ಯದ ದುಶ್ಚಟದಿಂದ ಅನೇಕ ಕುಟುಂಬಗಳು ಸಂಕಷ್ಟಕ್ಕೆ ಸಿಲುಕುತ್ತಿದ್ದು, ಮಹಿಳೆಯರು ತೊಂದರೆ ಅನುಭವಿಸುತ್ತಿದ್ದಾರೆ. ಯುವಕರು ಹಾಗೂ ಮಕ್ಕಳು ಕೂಡ ದುಶ್ಚಟಕ್ಕೆ ಒಳಗಾಗುವ ಅಪಾಯ ಹೆಚ್ಚಾಗಿದೆ ಎಂದು ಅವರು ಹೇಳಿದರು.

ಮದ್ಯ ಸೇವಿಸಿ ವಾಹನ ಚಲಾಯಿಸುವುದರಿಂದ ರಸ್ತೆ ಅಪಘಾತಗಳ ಸಂಖ್ಯೆಯೂ ಹೆಚ್ಚಾಗುತ್ತಿದ್ದು, ಅಕ್ರಮ ಮದ್ಯ ಸಾಗಾಟ ಮತ್ತು ಮಾರಾಟಕ್ಕೆ ತಕ್ಷಣ ಕಡಿವಾಣ ಹಾಕಬೇಕು. ಅಕ್ರಮ ಚಟುವಟಿಕೆಗಳಲ್ಲಿ ತೊಡಗಿರುವ ವೈನ್ ಶಾಪ್‌ಗಳು ಹಾಗೂ ಬಾರ್‌ಗಳ ವಿರುದ್ಧ ಕಠಿಣ ಕ್ರಮ ಕೈಗೊಂಡು, ಅಗತ್ಯವಿದ್ದರೆ ಅವುಗಳ ಪರವಾನಗಿಯನ್ನು ರದ್ದುಪಡಿಸಬೇಕು ಎಂದು ಆಗ್ರಹಿಸಿದರು.

ಈ ಕುರಿತು ಅಬಕಾರಿ ಇಲಾಖೆ ಸೂಕ್ತ ಕ್ರಮ ಕೈಗೊಳ್ಳದಿದ್ದರೆ, ಅಕ್ರಮ ಮದ್ಯ ಸಾಗಾಟ ನಡೆಸುವ ವಾಹನಗಳ ಜಿಪಿಎಸ್ ಮಾಹಿತಿ ಸೇರಿದಂತೆ ಅಗತ್ಯ ದಾಖಲೆಗಳೊಂದಿಗೆ ಲೋಕಾಯುಕ್ತರಿಗೆ ದೂರು ಸಲ್ಲಿಸಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಕಾರ್ಮಿಕ ಸೇನೆ ಎಚ್ಚರಿಕೆ ನೀಡಿದೆ.

ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಹುಲಿಬೆಟ್ಟ ಯಾದಗಿರಿ ತಾಲೂಕ ನೂತನ ಅಧ್ಯಕ್ಷ ಭೀಮರಾಯ ಬಾವುರ್ ಮಲ್ಲಿಕಾರ್ಜುನ ಮುಷ್ಟುರ, ಚಂದ್ರಶೇಖರ್ ಎಚ್, ಲಕ್ಷ್ಮಣ ಹಡಪದ್, ಹಣಮಂತ ದಾಸರು, ಮಲ್ಲು ಟೈಲರ್, ಇದ್ದರು

Tags

Yadgiri
share
ವಾರ್ತಾಭಾರತಿ
ವಾರ್ತಾಭಾರತಿ
Next Story
X