Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ಅಖಿಲ ಭಾರತ ಶರಣ ಸಾಹಿತ್ಯ...

ಯಾದಗಿರಿ | ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಪದಾಧಿಕಾರಿಗಳ ನೇಮಕ

ಶರಣ ಸಾಹಿತ್ಯ ರಚನೆಗೆ ನೆರವು ನೀಡಲಾಗುವುದು : ಸಿದ್ದಪ್ಪ ಹೊಟ್ಟಿ

ವಾರ್ತಾಭಾರತಿವಾರ್ತಾಭಾರತಿ21 May 2025 5:36 PM IST
share
ಯಾದಗಿರಿ | ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಪದಾಧಿಕಾರಿಗಳ ನೇಮಕ

ಸುರಪುರ: ಜಿಲ್ಲೆಯಲ್ಲಿ ಶರಣ ಸಾಹಿತ್ಯದ ಯಾವುದೇ ರೀತಿಯ ಚಟುವಟಿಕೆಗಳು ಹಾಗೂ ಆಧುನಿಕ ವಚನಗಳ ಕೃತಿ ಪ್ರಕಟಣೆ ಸೇರಿದಂತೆ ಶರಣ ಸಾಹಿತ್ಯಕ್ಕೆ ಎಲ್ಲ ರೀತಿಯ ನೆರವನ್ನು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ನೀಡಲಿದೆ ಎಂದು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಜಿಲ್ಲಾ ಅಧ್ಯಕ್ಷ ಸಿದ್ದಪ್ಪ ಹೊಟ್ಟಿ ತಿಳಿಸಿದರು.

ನಗರದ ರಂಗಂಪೇಟೆಯ ಬಸವಪ್ರಭು ಕೇಂದ್ರದಲ್ಲಿ ನಡೆದ ಪರಿಷತ್ತಿನ ತಾಲೂಕು ಘಟಕದ ನೂತನ ಪದಾಧಿಕಾರಿಗಳ ನೇಮಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಶರಣ ಸಾಹಿತ್ಯ ಉತ್ತಮ ಸಮಾಜ ನಿರ್ಮಾಣಕ್ಕೆ ತುಂಬಾ ಅಗತ್ಯವಾಗಿದೆ. ಈಗಾಗಲೇ ಜಿಲ್ಲೆಯಲ್ಲಿ ಅನೇಕ ಜನ ಶರಣ ಸಾಹಿತಿಗಳನ್ನು ಗುರುತಿಸಿ ಅವರ ಪುಸ್ತಕಗಳನ್ನು ಪ್ರಕಟಿಸುವ ಕಾರ್ಯವನ್ನು ಪರಿಷತ್ತು ಮಾಡುತ್ತಿದ್ದು, ಇನ್ನೂ ಹೆಚ್ಚಿನ ಕಾರ್ಯ ಮಾಡಲಿದ್ದೇವೆ. ಇಂದು ತಾಲೂಕು ಘಟಕದ ಅಧ್ಯಕ್ಷರಾದ ರಾಜು ಕುಂಬಾರ ಹಾಗೂ ಅವರ ತಂಡಕ್ಕೆ ಎಲ್ಲ ರೀತಿಯ ನೆರವು ನೀಡಲಾಗುವುದು, ತಾಲೂಕಿನಲ್ಲಿ ಶರಣ ಸಾಹಿತ್ಯವನ್ನು ಮನೆ ಮನೆಗೆ ತಲುಪಿಸುವ ಕೆಲಸ ಮಾಡುವಂತೆ ಸಲಹೆ ನೀಡಿದರು.

ಕಾರ್ಯಕ್ರಮ ಉದ್ಘಾಟಿಸಿದ ಪರಿಷತ್ತಿನ ರಾಷ್ಟ್ರೀಯ ಹಿರಿಯ ಉಪಾಧ್ಯಕ್ಷರಾದ ಅಪ್ಪಾರಾವ್ ಅಕ್ಕೋಣಿ ಮಾತನಾಡಿ, ಸುತ್ತೂರಿನ ರಾಜೇಂದ್ರ ದೇಶಿಕೇಂದ್ರ ಸ್ವಾಮೀಜಿಗಳಿಂದ ಆರಂಭಗೊಂಡಿರುವ ಪರಿಷತ್ತು ಇಂದು ಕೇವಲ ಕರ್ನಾಟಕ ಮಾತ್ರವಲ್ಲದೆ, ಹೊರ ನಾಡು ಮತ್ತು ವಿದೇಶಗಳಲ್ಲೂ ತನ್ನ ಶಾಖೆಗಳನ್ನು ಹೊಂದಿದೆ ಎಂದರು.

ಪರಿಷತ್ತಿನ ಯುವ ಘಟಕದ ರಾಜ್ಯ ಸಂಚಾಲಕ ಪ್ರಕಾಶ ಅಂಗಡಿ ಕನ್ನೆಳ್ಳಿ ಮಾತನಾಡಿದರು. ವೇದಿಕೆಯಲ್ಲಿ ತಾಲೂಕು ವೀರಶೈವ ಲಿಂಗಾಯತ ಸಮಿತಿ ಅಧ್ಯಕ್ಷ ಸುರೇಶ ಸಜ್ಜನ್, ಉಪನ್ಯಾಸಕ ಅಬ್ದುಲ್ ಕರೀಂ ಕನ್ಯೆಕೋಳೂರ, ಶಿವಶರಣಪ್ಪ ಹೆಡಗಿನಾಳ ಉಪಸ್ಥಿತರಿದ್ದರು.

ನೂತನ ಅಧ್ಯಕ್ಷರಾಗಿ ನೇಮಕಗೊಂಡು ಪತ್ರಕರ್ತ ರಾಜು ಕುಂಬಾರ ಮಾತನಾಡಿದರು. ಜಗದೀಶ ಪಾಟೀಲ್, ಸೋಮರಾಯ ಶಖಾಪುರ, ಅಮರೇಶ ಕುಂಬಾರ, ರವಿಗೌಡ ಹೆಮನೂರ, ಸಿದ್ದಣಗೌಡ ಹೆಬ್ಬಾಳ, ಕದಳಿ ಮಹಿಳಾ ವೇದಿಕೆ ಅದ್ಯಕ್ಷೆ ನೀಲಾಂಬಿಕಾ ಪಾಟೀಲ್, ಸಂಗಣ್ಣ ತುಂಬಗಿ ಕೆಂಭಾವಿ,ದೇವಿಂದ್ರ ಕರಡಕಲ್, ಅಪ್ಪು ಸೂಗೂರ, ಹಣಮಂತ್ರಾಯ ದೇವತ್ಕಲ್, ಶ್ರೀಕಾಂತ ರತ್ತಾಳ ಸೇರಿದಂತೆ ಅನೇಕರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X