ಯಾದಗಿರಿ | ಆಟೋ ಪಲ್ಟಿ : ಓರ್ವ ಮೃತ್ಯು, ಮೂವರಿಗೆ ಗಂಭೀರ ಗಾಯ

ಯಾದಗಿರಿ : ಆಟೋ ಪಲ್ಟಿಯಾಗಿ ಓರ್ವ ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಬಂದಳ್ಳಿ ಗ್ರಾಮದ ಬಳಿ ನಡೆದಿದೆ.
ಮನೆ ಉದ್ಘಾಟನೆ ಹಿನ್ನೆಲೆಯಲ್ಲಿ ಭಜನೆಗಾಗಿ ಯಾದಗಿರಿ ನಗರಕ್ಕೆ ಬಂದಿದ್ದ ಭಜನಾ ತಂಡವೊಂದು, ಕಾರ್ಯಕ್ರಮ ಮುಗಿಸಿ ತಮ್ಮ ಊರಿಗೆ ವಾಪಸ್ ತೆರಳುತ್ತಿದ್ದ ವೇಳೆ ಹಂದಿಯೊಂದು ಏಕಾಏಕಿ ಅಡ್ಡಬಂದಿದ್ದು, ಆಟೋ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎನ್ನಲಾಗಿದೆ.
ಆಟೋ ಪಲ್ಟಿಯಾಗಿ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ತಕ್ಷಣವೇ ಯಾದಗಿರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಯಾದಗಿರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





