ಯಾದಗಿರಿ | ನೂತನ ಜಿಲ್ಲಾಧಿಕಾರಿಯಾಗಿ ಭೋಯಾರ್ ಹರ್ಷಲ್ ನಾರಾಯಣರಾವ್ ಅಧಿಕಾರ ಸ್ವೀಕಾರ

ಯಾದಗಿರಿ: ಯಾದಗಿರಿಯ ನೂತನ ಜಿಲ್ಲಾಧಿಕಾರಿಯಾಗಿ ಭೋಯಾರ್ ಹರ್ಷಲ್ ನಾರಾಯಣರಾವ್ ಅವರು ಇಂದು ಅಧಿಕಾರ ವಹಿಸಿಕೊಂಡಿದ್ದಾರೆ. ನಿರ್ಗಮಿತ ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ. ಅವರು ಅಧಿಕಾರ ಹಸ್ತಾಂತರಿಸಿದರು.
ನೂತನ ಜಿಲ್ಲಾಧಿಕಾರಿಗಳಾದ ಭೋಯಾರ್ ಹರ್ಷಲ್ ನಾರಾಯಣರಾವ್ ಮೂಲತಃ ಮಹಾರಾಷ್ಟ್ರ ರಾಜ್ಯದವರಾಗಿದ್ದು, ವರದಾ ಇವರ ಜನ್ಮಸ್ಥಳವಾಗಿದೆ.
ಸವನೂರ್, ಚಾಮರಾಜನಗರ, ವಿಜಯನಗರದಲ್ಲಿ ಸಹಾಯಕ ಆಯುಕ್ತರಾಗಿ ಹಾಗೂ ಬೆಳಗಾವಿ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾಗಿ, ಅಟಲ್ ಜಿ ಜನಸ್ನೇಹಿ ಕೇಂದ್ರದ ನಿರ್ದೇಶಕರಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ.
ನಿರ್ಗಮಿತ ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ. ಅವರು ಕಲಬುರಗಿಯ ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ವರ್ಗಾವಣೆಗೊಂಡಿದ್ದಾರೆ.
Next Story





