Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. Yadgiri | ನ.1ರಂದು ಸನ್ನತಿಯಲ್ಲಿ 5...

Yadgiri | ನ.1ರಂದು ಸನ್ನತಿಯಲ್ಲಿ 5 ಲಕ್ಷ ಜನರ ಬೌದ್ಧ ಧಮ್ಮ ದೀಕ್ಷಾ ಸಮಾರಂಭ : ಬೋಧಿಧಮ್ಮ ಝನ್ ಮಾಂಕ್

ವಾರ್ತಾಭಾರತಿವಾರ್ತಾಭಾರತಿ6 Oct 2026 7:16 PM IST
share
Yadgiri | ನ.1ರಂದು ಸನ್ನತಿಯಲ್ಲಿ 5 ಲಕ್ಷ ಜನರ ಬೌದ್ಧ ಧಮ್ಮ ದೀಕ್ಷಾ ಸಮಾರಂಭ : ಬೋಧಿಧಮ್ಮ ಝನ್ ಮಾಂಕ್

ಯಾದಗಿರಿ: ಡಾ. ಬಿ.ಆರ್. ಅಂಬೇಡ್ಕರ್ ಅವರು ಬೌದ್ಧ ಧಮ್ಮ ಸ್ವೀಕರಿಸಿ 70 ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಸಂವಿಧಾನದ ಆಶಯಗಳ ಆಧಾರದ ಮೇಲೆ ಪ್ರಬುದ್ಧ ಸಮಾಜ ನಿರ್ಮಾಣದ ಸಂಕಲ್ಪದೊಂದಿಗೆ ನ.1ರಂದು ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಐತಿಹಾಸಿಕ ಸನ್ನತಿಯಲ್ಲಿ 5 ಲಕ್ಷ ಜನರ ಬೃಹತ್ ಬೌದ್ಧ ಧಮ್ಮ ದೀಕ್ಷಾ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಬೋಧಿಧಮ್ಮ ಝನ್ ಮಾಂಕ್ ಡಾ. ಶಾಕು ಹೇಳಿದರು.

ನಗರದ ಅಂಬೇಡ್ಕರ್ ವೃತ್ತದ ಬಳಿ ಕರ್ನಾಟಕ ಧಮ್ಮ ಜನಜಾಗೃತಿ ಯಾತ್ರೆಯ ಅಂಗವಾಗಿ ನಡೆದ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ಸನ್ನತಿಯ ಐತಿಹಾಸಿಕ ನೆಲದಲ್ಲಿ ನಡೆಯಲಿರುವ ಧಮ್ಮ ದೀಕ್ಷಾ ಸಮಾರಂಭದಲ್ಲಿ ಸುಮಾರು 5 ಲಕ್ಷ ಉಪಾಸಕ–ಉಪಾಸಿಕೆಯರು, ಅಂಬೇಡ್ಕರ್‌ವಾದಿಗಳು ಹಾಗೂ ಬೌದ್ಧ ಧಮ್ಮದ ಅನುಯಾಯಿಗಳು ಭಾಗವಹಿಸುವ ನಿರೀಕ್ಷೆಯಿದೆ. ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ಕರೆ ನೀಡಿದರು.

ಅಂತರಾಷ್ಟ್ರೀಯ ಬೌದ್ಧ ಯುವ ಸಂಘಟನೆ ಭಾರತ, ಗ್ಲೋಬಲ್ ಡಾ. ಅಂಬೇಡ್ಕರ್ ಬೌದ್ಧ ಮಿಷನ್, ಯುಎಸ್‌ಎ, ಅಖಿಲ ಭಾರತ ಡಾ. ಅಂಬೇಡ್ಕರ್ ಭಿಕ್ಕು ಸಂಘ ಹಾಗೂ ಬೌದ್ಧ ಮಹಾಸ್ತೂಪ ಅಭಿವೃದ್ಧಿ ಮತ್ತು ಸಂರಕ್ಷಣಾ ಸಂಸ್ಥೆ, ಸನ್ನತಿ ಇವರ ಸಂಯುಕ್ತಾಶ್ರಯದಲ್ಲಿ ಕರ್ನಾಟಕ ಧಮ್ಮ ಜನಜಾಗೃತಿ ಯಾತ್ರೆ ನಡೆಯುತ್ತಿದೆ ಎಂದು ತಿಳಿಸಿದರು.

ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಧರ್ಮವನ್ನು ದ್ವೇಷಿಸಿರಲಿಲ್ಲ. ಸಮಾಜದಲ್ಲಿನ ಅಸಮಾನತೆ, ಶೋಷಣೆ ಮತ್ತು ಮೌಢ್ಯಗಳ ವಿರುದ್ಧ ಹೋರಾಡಿದ ಅವರು ಸಮಾನತೆ, ಸ್ವಾತಂತ್ರ್ಯ, ಸಹೋದರತ್ವ ಹಾಗೂ ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸುವ ಬೌದ್ಧ ಧಮ್ಮವನ್ನು ಸ್ವೀಕರಿಸಿದ್ದರು. ನಾಗಪುರದಲ್ಲಿ ಲಕ್ಷಾಂತರ ಅನುಯಾಯಿಗಳೊಂದಿಗೆ ಬೌದ್ಧ ಧಮ್ಮ ಸ್ವೀಕರಿಸುವ ಮೂಲಕ ದೇಶಕ್ಕೆ ಶಾಂತಿ ಮತ್ತು ಸಮಾನತೆಯ ಸಂದೇಶ ನೀಡಿದ್ದರು. ಅವರ ವಿಚಾರಧಾರೆ ಹಾಗೂ ಮಾರ್ಗದಲ್ಲೇ ಇಂದಿನ ಪೀಳಿಗೆ ಸಾಗಬೇಕಿದೆ ಎಂದು ಡಾ. ಶಾಕು ಹೇಳಿದರು.

2001ರಲ್ಲಿ ದಕ್ಷಿಣ ಭಾರತದಲ್ಲಿ ಧಮ್ಮ ಜನಜಾಗೃತಿ ಯಾತ್ರೆ ನಡೆದಿತ್ತು. ಇದೀಗ ಅಂಬೇಡ್ಕರ್ ಅವರು ಬೌದ್ಧ ಧಮ್ಮ ಸ್ವೀಕರಿಸಿ 70 ವರ್ಷಗಳಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಧಮ್ಮದ ಸಂದೇಶವನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ಜನಜಾಗೃತಿ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದರು.

ಈ ಸಂದರ್ಭದಲ್ಲಿ ಭಂತೆ ಸಂಘಪಾಲ್, ಭಿಕ್ಕು ನಾಗಸೇನಾ, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಬಾಬುರಾವ್ ಕಾಡ್ಲೂರ್, ಧಮ್ಮಚಾರೀ ನಿಂಗಪ್ಪ ಕೊಲ್ಲೂರು, ಶಂಕರ್ ಕೊಂಡಿ, ಮರೆಪ್ಪ ಚಟ್ಟೆರಕರ್, ಸಂದೀಪ ಕಟ್ಟಿ, ಮರೆಪ್ಪ ಬುಕ್ಕಲ್, ಧಮ್ಮ ಯಾತ್ರೆ ಸ್ವಾಗತ ಸಮಿತಿ ಅಧ್ಯಕ್ಷ ಗೋಪಾಲ ತೆಳಿಗೇರಿ, ಉಪಾಸಕ ಡಾ. ಭಗವಂತ ಅನವಾರ, ಡಾ. ಸರೋವೋದಯ ಶಿವುಪುತ್ರ, ದೇವೀಂದ್ರಪ್ಪ ಈಟೇ, ಸುರೇಶ ಬೊಮ್ಮನ್, ಸೈದಪ್ಪ ಕೂಲೂರ್, ಚಂದ್ರಕಾಂತ್ ಚಲುವಾದಿ, ಶರಣು ನಾಟೆಕಾರ್, ಮಲ್ಲಿಕಾರ್ಜುನ ಅರಿಕೇರಿ, ನಿಂಗಪ್ಪ ಬೀರನಾಳ, ಮಲ್ಲಿಕಾರ್ಜುನ ಕೆಇಬಿ, ಮಲ್ಲಿಕಾರ್ಜುನ ಈಟೇ, ಭೀಮರಾಯ ಹೊಸಮನಿ, ಮಹಾಂತೇಶ್ ವಡ್ನಳ್ಳಿ, ವಸಂತ್ ಸುಂಗುಲ್, ಸಂಪತ್ ಚಿನ್ನಾಕರ್, ಮರೀಲಿಂಗ ಕುರುಕುಂಬಳ್, ಜೈಭೀಮ್ ಕೊಲ್ಲೂರಕರ್, ವಿಜಯಕುಮಾರ್ ಆಶಾನಾಳ್, ಸಿದ್ರಾಮಪ್ಪ ಚಟ್ಟೆರಕರ್ ಸೇರಿದಂತೆ ಉಪಾಸಕರು ಹಾಗೂ ಉಪಾಸಿಕೆಯರು ಉಪಸ್ಥಿತರಿದ್ದರು.

Tags

BuddhistsYadgiri
share
ವಾರ್ತಾಭಾರತಿ
ವಾರ್ತಾಭಾರತಿ
Next Story
X