ಯಾದಗಿರಿ | ಕೆಕೆಆರ್‌ಡಿಬಿ ಮ್ಯಾಕ್ರೋ ಯೋಜನೆಯಡಿ ನಗರದಲ್ಲಿ ಅಭಿವೃದ್ಧಿ ಕಾರ್ಯಗಳಲ್ಲಿ ಭ್ರಷ್ಟಾಚಾರ : ಕರವೇ ಆರೋಪ

ಯಾದಗಿರಿ : ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದಿಂದ ನಗರದಲ್ಲಿ ಕೆಕೆಆರ್‌ಡಿಬಿಯ ಮ್ಯಾಕ್ರೋ ಯೋಜನೆಯಡಿ ಕೈಗೆತ್ತಿಕೊಂಡ ಕಾಮಗಾರಿಗಳು ಸಂಪೂರ್ಣ ಕಳಪೆಯಾಗಿದ್ದು, ಅವ್ಯವಹಾರ ನಡೆಯುತ್ತಿದೆ. ಈ ಕಾಮಗಾರಿಗಳ ಸಂಪೂರ್ಣ ತನಿಖೆ ನಡೆಸುವಂತೆ ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹಿಸಿದರು.
ಈ ಕುರಿತು ಹೇಳಿಕೆ ನೀಡಿರುವ ಜಿಲ್ಲಾಧ್ಯಕ್ಷ ಟಿ.ಎನ್. ಭೀಮುನಾಯಕ, ಕೆಕೆಆರ್‌ಡಿಬಿ ಯೋಜನೆಯ ಎಲ್ಲ ಕಾಮಗಾರಿಗಳು ಅದರಲ್ಲೂ ನಗರದಲ್ಲಿ ನಡೆದಿರುವ ರಸ್ತೆ ವಿಭಜಕ ನಿರ್ಮಾಣ ಕಾಮಗಾರಿಯು ಸಂಪೂರ್ಣ ಅವ್ಯವಸ್ಥೆಯಿಂದ ಕೂಡಿದೆ. ಕಾಮಗಾರಿ ನಿರ್ವಹಣೆ ಮಾಡುವಾಗ ಕೈಗೊಳ್ಳಬೇಕಾದ ಯಾವುದೇ ಕ್ರಮಗಳು ಕೈಗೊಳ್ಳದೇ ಇರುವುದರಿಂದ ರಸ್ತೆಯುದ್ದಕ್ಕೂ ಅಧ್ವಾನದಿಂದಾಗಿ ಜನತೆ ಹಿಡಿ ಶಾಪ ಹಾಕುತ್ತಿದ್ದಾರೆ ಎಂದರು.
ಇದೇ ನಿಲುವು ಮುಂದುವರೆಸಿದಲ್ಲಿ ಡಿಸಿ, ಸಿಇಓ ಅವರುಗಳ ವಿರುದ್ಧವೇ ಲೊಕಾಯುಕ್ತರಿಗೆ ದೂರು ಸಲ್ಲಿಸಬೇಕಾಗುತ್ತದೆ ಎಂದು ಅವರು ತಿಳಿಸಿದರು.
ಈ ಕುರಿತು ತಕ್ಷಣ ಕ್ರಮ ಕೈಗೊಂಡು ಎಇಇ ಅವರನ್ನುಅಮಾನತು ಮಾಡಬೇಕು. ಕಾಮಗಾರಿಗಳ ಸಮಗ್ರ ತನಿಖೆ ನಡೆಸಿ ಅವ್ಯವಹಾರ ಬಯಲಿಗೆಳೆಯಬೇಕು. ಇಲ್ಲವಾದಲ್ಲಿ ಭೂ ಸೇನೆ ಕಚೇರಿ ಎದುರಿಗೆ ಪ್ರತಿಭಟನೆ ನಡೆಸಲಾಗುವುದು ಎಂದು ಮಲ್ಲು ಮಾಳಿಕೇರಿ, ಸಿದ್ದುನಾಯಕ ಹತ್ತಿಕುಣಿ, ಅಂಬ್ರೇಷ್ ಹತ್ತಿಮನಿ, ಯಮುನಯ್ಯ ಗುತ್ತೇದಾರ, ಕಾಶಿನಾಥ ನಾನೇಕ, ಜನಾರ್ಧನ ಚಾಮನಳ್ಳಿ ಇನ್ನಿತರರು ಒತ್ತಾಯಿಸಿದ್ದಾರೆ.







