Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. Yadgiri | ಜ್ಞಾನೇಶಕುಮಾರ್ ವಜಾಕ್ಕೆ...

Yadgiri | ಜ್ಞಾನೇಶಕುಮಾರ್ ವಜಾಕ್ಕೆ ಆಗ್ರಹಿಸಿ ಡಿಸಿ ಕಚೇರಿ ಮುಂದೆ ದಲಿತ ಸಂಘಟನೆಯಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ16 Oct 2026 7:41 PM IST
share
Yadgiri | ಜ್ಞಾನೇಶಕುಮಾರ್ ವಜಾಕ್ಕೆ ಆಗ್ರಹಿಸಿ ಡಿಸಿ ಕಚೇರಿ ಮುಂದೆ ದಲಿತ ಸಂಘಟನೆಯಿಂದ ಪ್ರತಿಭಟನೆ

ಯಾದಗಿರಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ವಜಾಗೊಳಿಸಿ, ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಹಾಗೂ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ತಕ್ಷಣ ಸ್ಥಗಿತಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ (ಡಾ. ಡಿ.ಜಿ. ಸಾಗರ ಬಣ) ವತಿಯಿಂದ ಗುರುವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಚುನಾವಣಾ ಆಯೋಗದ ಕಾರ್ಯವೈಖರಿ ಹಾಗೂ ಮುಖ್ಯ ಚುನಾವಣಾ ಆಯುಕ್ತರ ನಿರ್ಧಾರಗಳನ್ನು ಖಂಡಿಸಿದ ಪ್ರತಿಭಟನಾಕಾರರು, ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ಸಮಿತಿಯ ಜಿಲ್ಲಾ ಸಂಚಾಲಕ ಶಿವುಪುತ್ರ ಜವಳಿ, ಎಸ್‌ಐಆರ್ ಪ್ರಕ್ರಿಯೆಯ ಮೂಲಕ ದಲಿತರು ಮತ್ತು ಮುಸ್ಲಿಮರ ಮತಗಳನ್ನು ಮತದಾರರ ಪಟ್ಟಿಯಿಂದ ಅಳಿಸುವುದೇ ಬಿಜೆಪಿಯ ಉದ್ದೇಶವಾಗಿದೆ ಎಂದು ಆರೋಪಿಸಿದರು. ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಹಲವು ಲೋಪದೋಷಗಳಿದ್ದು, ಅರ್ಹ ಮತದಾರರು ತಮ್ಮ ಮತದಾನದ ಹಕ್ಕನ್ನು ಕಳೆದುಕೊಳ್ಳುವ ಆತಂಕ ಎದುರಾಗಿದೆ ಎಂದು ದೂರಿದರು.

ಎಸ್‌ಐಆರ್ ಕುರಿತು ಚುನಾವಣಾ ಆಯೋಗದ ನಿರ್ಧಾರಗಳು ಪಾರದರ್ಶಕವಾಗಿಲ್ಲ ಎಂಬ ಅನುಮಾನಗಳು ವ್ಯಕ್ತವಾಗುತ್ತಿವೆ. ಆಯೋಗದ ಮೂವರು ಸದಸ್ಯರ ನಡುವೆ ಒಮ್ಮತವಿಲ್ಲದೆ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ ಎಂಬ ವರದಿಗಳು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿವೆ ಎಂದು ಹೇಳಿದರು.

ನಂತರ ಮಾತನಾಡಿದ ಜಿಲ್ಲಾ ಸಂಘಟನಾ ಸಂಚಾಲಕ ಚಂದಪ್ಪ ಮುನಿಯಪ್ಪನೋರ್, ಹೊಸ ಮತದಾರರ ನೋಂದಣಿಗೆ ಸಂಬಂಧಿಸಿದ ಫಾರಂ-6ಕ್ಕೆ ಘೋಷಣಾ ಪತ್ರದ ಷರತ್ತು ಸೇರಿಸಿರುವುದು ಮತದಾರರ ಹಕ್ಕುಗಳ ಮೇಲೆ ಪರಿಣಾಮ ಬೀರಬಹುದು ಎಂದು ಆತಂಕ ವ್ಯಕ್ತಪಡಿಸಿದರು. ಮತದಾರರ ಪಟ್ಟಿಯ ಪರಿಷ್ಕರಣೆ ಹೆಸರಿನಲ್ಲಿ ಅರ್ಹ ಮತದಾರರಿಗೆ ಅನ್ಯಾಯವಾಗಬಾರದು. ಮತದಾನದ ಹಕ್ಕು ಪ್ರಜಾಪ್ರಭುತ್ವದ ಮೂಲಭೂತ ಆಶಯವಾಗಿದ್ದು, ಅದನ್ನು ರಕ್ಷಿಸುವ ಜವಾಬ್ದಾರಿ ಚುನಾವಣಾ ಆಯೋಗಕ್ಕಿದೆ ಎಂದು ಹೇಳಿದರು.

ಎಸ್‌ಐಆರ್ ಪ್ರಕ್ರಿಯೆಯಲ್ಲಿನ ಲೋಪದೋಷಗಳ ಕುರಿತು ಸಮಗ್ರ ತನಿಖೆ ನಡೆಸಬೇಕು. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ವಜಾಗೊಳಿಸಿ, ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು. ಎಸ್‌ಐಆರ್ ಪ್ರಕ್ರಿಯೆಯನ್ನು ಸ್ಥಗಿತಗೊಳಿಸುವುದರ ಜತೆಗೆ, ಚುನಾವಣಾ ಆಯೋಗದ ನೇಮಕಾತಿಗೆ ಸಂಬಂಧಿಸಿದ 2023ರ ಕಾಯ್ದೆಯನ್ನು ರದ್ದುಗೊಳಿಸಿ ಸ್ವತಂತ್ರ ಹಾಗೂ ವಿಶ್ವಾಸಾರ್ಹ ಆಯ್ಕೆ ಪ್ರಕ್ರಿಯೆ ಜಾರಿಗೆ ತರಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಈ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ಶಿವಲಿಂಗ ಹಸನಪೂರ, ಮರೆಪ್ಪ ಕ್ರಾಂತಿ, ಭೀಮಣ್ಣ ಹುಣಸಗಿ, ಶಿವಕುಮಾರ್ ತಳವಾರ್, ತಿಪ್ಪಣ್ಣ ಶೇಳಗಿ, ಶರಭಣ್ಣ ದೋರನಹಳ್ಳಿ, ತಾಯಪ್ಪ ಭಂಡಾರಿ, ಭೀಮಾಶಂಕರ ಗುಂಡಳ್ಳಿ, ಎಂ. ಪಟೇಲ್, ಚಂದ್ರು ಬಳಶೇಟ್ಟಿಹಾಳ್, ಸಂತೋಷ ಗುಂಡಳ್ಳಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

Tags

Yadgiri
share
ವಾರ್ತಾಭಾರತಿ
ವಾರ್ತಾಭಾರತಿ
Next Story
X