Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. Yadgiri | ಶಿಕ್ಷಕರ ನೇಮಕಾತಿಯಲ್ಲಿ 5...

Yadgiri | ಶಿಕ್ಷಕರ ನೇಮಕಾತಿಯಲ್ಲಿ 5 ವರ್ಷ ವಯೋಮಿತಿ ಸಡಿಲಿಕೆಗೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ17 Aug 2026 8:46 PM IST
share
Yadgiri | ಶಿಕ್ಷಕರ ನೇಮಕಾತಿಯಲ್ಲಿ 5 ವರ್ಷ ವಯೋಮಿತಿ ಸಡಿಲಿಕೆಗೆ ಆಗ್ರಹ

ಯಾದಗಿರಿ: ಶಿಕ್ಷಕರ ನೇಮಕಾತಿಯಲ್ಲಿ ಐದು ವರ್ಷ ವಯೋಮಿತಿ ಸಡಿಲಿಕೆ ನೀಡಬೇಕು ಹಾಗೂ ವಿಷಯವಾರು ಶಿಕ್ಷಕರ ಹುದ್ದೆಗಳನ್ನು ಸೇರ್ಪಡೆಗೊಳಿಸಬೇಕು ಎಂದು ಆಗ್ರಹಿಸಿ ಎಐಡಿವೈಒ ಸಂಘಟನೆ ನೇತೃತ್ವದಲ್ಲಿ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಎಐಡಿವೈಒ ರಾಜ್ಯ ಸಹ ಸಂಚಾಲಕ ಚನ್ನಬಸವ ಜಾನೆಕಲ್ ಮಾತನಾಡಿ, ಸಾರ್ವಜನಿಕ ಶಿಕ್ಷಣ ಇಲಾಖೆ 15 ಸಾವಿರ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಿರುವುದನ್ನು ಎಐಡಿವೈಒ ಹಾಗೂ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ಸ್ವಾಗತಿಸುತ್ತದೆ. ಹಲವು ವರ್ಷಗಳ ಹೋರಾಟದ ಬಳಿಕ ನೇಮಕಾತಿ ಅಧಿಸೂಚನೆ ಹೊರಬಂದಿರುವುದು ಉದ್ಯೋಗಾಕಾಂಕ್ಷಿಗಳಲ್ಲಿ ಆಶಾಭಾವನೆ ಮೂಡಿಸಿದೆ ಎಂದರು.

ರಾಜ್ಯ ಸರ್ಕಾರವು 2026ರ ಜನವರಿ 29ರಂದು ಹೊರಡಿಸಿರುವ ಆದೇಶದಂತೆ, 2027ರ ಡಿಸೆಂಬರ್ 31ರವರೆಗೆ ರಾಜ್ಯ ಸರ್ಕಾರದ ಎಲ್ಲಾ ನೇರ ನೇಮಕಾತಿಗಳಲ್ಲಿ ಐದು ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ. ಆದರೆ 15 ಸಾವಿರ ಶಿಕ್ಷಕರ ನೇಮಕಾತಿ ಅಧಿಸೂಚನೆಯಲ್ಲಿ ಈ ಸಡಿಲಿಕೆಯನ್ನು ಪರಿಗಣಿಸದಿರುವುದು ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ ಎಂದು ಅವರು ಆರೋಪಿಸಿದರು.

ಅನೇಕ ಅಭ್ಯರ್ಥಿಗಳು ಟಿಇಟಿ ಸೇರಿದಂತೆ ಅಗತ್ಯ ಅರ್ಹತೆಗಳನ್ನು ಪಡೆದುಕೊಂಡಿದ್ದರೂ, ವಯೋಮಿತಿ ಮೀರುವ ಆತಂಕದಲ್ಲಿದ್ದಾರೆ. ಸರ್ಕಾರವೇ ನಿರ್ಧರಿಸಿರುವ ಐದು ವರ್ಷಗಳ ವಯೋಮಿತಿ ಸಡಿಲಿಕೆಯನ್ನು ಶಿಕ್ಷಕರ ನೇಮಕಾತಿಗೂ ಅನ್ವಯಿಸಬೇಕು ಎಂದು ಆಗ್ರಹಿಸಿದರು.

ಇದೇ ವೇಳೆ, ಸುಮಾರು 11 ವರ್ಷಗಳ ಬಳಿಕ 4 ಸಾವಿರಕ್ಕೂ ಹೆಚ್ಚು ಹೈಸ್ಕೂಲ್ ಶಿಕ್ಷಕರ ನೇಮಕಾತಿ ನಡೆಯುತ್ತಿದ್ದು, ಗಣಿತ ಸೇರಿದಂತೆ ಹಲವು ವಿಷಯಗಳ ಶಿಕ್ಷಕರ ಹುದ್ದೆಗಳನ್ನು ಸೇರ್ಪಡೆ ಮಾಡಿಲ್ಲ. ಇದರಿಂದ ಬಿಎಡ್‌ನಲ್ಲಿ ಗಣಿತ, ಹಿಂದಿ, ಉರ್ದು ಸೇರಿದಂತೆ ವಿವಿಧ ವಿಷಯಗಳನ್ನು ಅಧ್ಯಯನ ಮಾಡಿರುವ ಉದ್ಯೋಗಾಕಾಂಕ್ಷಿಗಳಿಗೆ ಅನ್ಯಾಯವಾಗಲಿದೆ ಎಂದು ತಿಳಿಸಿದರು.

ಆದ್ದರಿಂದ 15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಐದು ವರ್ಷಗಳ ವಯೋಮಿತಿ ಸಡಿಲಿಕೆ ನೀಡಬೇಕು ಹಾಗೂ ಹೈಸ್ಕೂಲ್ ಶಿಕ್ಷಕರ ನೇಮಕಾತಿಯಲ್ಲಿ ಗಣಿತ ಸೇರಿದಂತೆ ಅಗತ್ಯವಿರುವ ಇತರೆ ವಿಷಯಗಳ ಹುದ್ದೆಗಳನ್ನು ಸೇರ್ಪಡೆಗೊಳಿಸಿ ಪೂರಕ ಅಧಿಸೂಚನೆ ಹೊರಡಿಸಬೇಕು ಎಂದು ಪ್ರತಿಭಟನಾಕಾರರು ಸರ್ಕಾರವನ್ನು ಒತ್ತಾಯಿಸಿದರು.

ನಂತರ ಮುಖ್ಯಮಂತ್ರಿಗಳಿಗೆ ಬರೆದ ಮನವಿಯನ್ನು ಜಿಲ್ಲಾಧಿಕಾರಿಗಳ ಮೂಲಕ ಸಲ್ಲಿಸಿದರು.ಈ ಸಂದರ್ಭದಲ್ಲಿ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿಯ ಮುಖಂಡರಾದ, ಲಕ್ಷ್ಮೀ ರೆಡ್ಡಿ, ವೆಂಕಟಯ್ಯ, ಸಾಹೇಬ್, ಅಬ್ದುಲ್ ಪಟೇಲ್ ಮುಂತಾದವರು ಭಾಗವಹಿಸಿದ್ದರು.

Tags

Yadgiri
share
ವಾರ್ತಾಭಾರತಿ
ವಾರ್ತಾಭಾರತಿ
Next Story
X