Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. Yadgiri | ನಕಲಿ ಅಂಕಪಟ್ಟಿ ಸಲ್ಲಿಸಿ...

Yadgiri | ನಕಲಿ ಅಂಕಪಟ್ಟಿ ಸಲ್ಲಿಸಿ ಸರಕಾರಿ ಉದ್ಯೋಗ ಪಡೆದ ನೌಕರರ ಬಂಧನಕ್ಕೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ5 Oct 2026 3:54 PM IST
share
Yadgiri | ನಕಲಿ ಅಂಕಪಟ್ಟಿ ಸಲ್ಲಿಸಿ ಸರಕಾರಿ ಉದ್ಯೋಗ ಪಡೆದ ನೌಕರರ ಬಂಧನಕ್ಕೆ ಆಗ್ರಹ

ಯಾದಗಿರಿ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿಶೇಷ ನೇಮಕಾತಿಯಲ್ಲಿ ನಕಲಿ ಎಸೆಸೆಲ್ಸಿ ಅಂಕಪಟ್ಟಿ ಸಲ್ಲಿಸಿ ‘ಡಿ’ ಗ್ರೂಪ್ ಹುದ್ದೆ ಪಡೆದಿರುವ ಆರೋಪದಡಿ ಅಮಾನತುಗೊಂಡಿರುವ ನೌಕರರನ್ನು ತಕ್ಷಣವೇ ಸೇವೆಯಿಂದ ವಜಾಗೊಳಿಸಿ, ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು ಸಮಾಜಸೇವಾ ಕಾರ್ಯಕರ್ತರ ವೇದಿಕೆಯ ರಾಜ್ಯ ಕಾರ್ಯದರ್ಶಿ ಮನೋಜ್ ಕುಮಾರ್ ಆಗ್ರಹಿಸಿದರು.

ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರದ ಸೆ. 22ರ ಅಮಾನತು ಆದೇಶದಿಂದ ನಕಲಿ ಶೈಕ್ಷಣಿಕ ದಾಖಲೆಗಳ ಪ್ರಕರಣ ಬೆಳಕಿಗೆ ಬಂದಿದೆ. ಅರ್ಹತೆ ಹೊಂದಿದ್ದರೂ ಸರ್ಕಾರಿ ಉದ್ಯೋಗದಿಂದ ವಂಚಿತರಾಗಿರುವ ಲಕ್ಷಾಂತರ ನಿರುದ್ಯೋಗಿ ಯುವಕರಿಗೆ ಇದರಿಂದ ಅನ್ಯಾಯವಾಗಿದೆ ಎಂದು ಹೇಳಿದರು.

ನಕಲಿ ದಾಖಲೆಗಳ ಮೂಲಕ ಸರ್ಕಾರಿ ಸೇವೆ ಪಡೆದಿರುವವರನ್ನು ಕೇವಲ ಅಮಾನತುಗೊಳಿಸುವುದರಿಂದ ಯಾವುದೇ ಪ್ರಯೋಜನವಿಲ್ಲ. ಅವರನ್ನು ಕಾಯಂ ಸೇವೆಯಿಂದ ವಜಾಗೊಳಿಸಿ, ನಕಲಿ ದಾಖಲೆ ಸೃಷ್ಟಿ ಹಾಗೂ ವಂಚನೆ ಆರೋಪದಡಿ ಎಫ್‌ಐಆರ್ ದಾಖಲಿಸಿ ಬಂಧಿಸಬೇಕು ಎಂದು ಒತ್ತಾಯಿಸಿದರು.

ಅವರು ಸೇವೆಗೆ ಸೇರಿದ ದಿನದಿಂದ ಪಡೆದಿರುವ ವೇತನ ಹಾಗೂ ಇತರೆ ಸೌಲಭ್ಯಗಳನ್ನು ಕಾನೂನುಬದ್ಧವಾಗಿ ಬಡ್ಡಿ ಸಮೇತ ವಸೂಲಿ ಮಾಡಬೇಕು ಎಂದು ಆಗ್ರಹಿಸಿದರು.

ಅಲ್ಲದೆ, ದಾಖಲೆಗಳ ಪರಿಶೀಲನೆ ನಡೆಸದೇ ನಕಲಿ ಅಂಕಪಟ್ಟಿಗಳನ್ನು ಅಂಗೀಕರಿಸಿ ನೇಮಕಾತಿ ಮಾಡಿದ ಆಯ್ಕೆ ಸಮಿತಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಪಾತ್ರದ ಬಗ್ಗೆಯೂ ಸಮಗ್ರ ತನಿಖೆ ನಡೆಸಬೇಕು. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧವೂ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು. ವಿಶೇಷ ನೇಮಕಾತಿಯಡಿ ರಾಜ್ಯಾದ್ಯಂತ ನಡೆದಿರುವ ನೇಮಕಾತಿಗಳನ್ನೂ ಉನ್ನತ ಮಟ್ಟದ ತನಿಖೆಗೆ ಒಳಪಡಿಸಬೇಕು ಎಂದು ಹೇಳಿದರು.

ನಕಲಿ ದಾಖಲೆಗಳ ಮೂಲಕ ನೇಮಕಗೊಂಡಿರುವ ನೌಕರರನ್ನು ಕೇವಲ ಅಮಾನತುಗೊಳಿಸಿ ಬೇರೆಡೆಗೆ ಲೀನ್ ವರ್ಗಾವಣೆ ಮಾಡುವ ಮೂಲಕ ಪ್ರಕರಣವನ್ನು ಮುಚ್ಚಿಹಾಕುವ ಪ್ರಯತ್ನ ನಡೆಸಿದರೆ, ಅರ್ಹ ನಿರುದ್ಯೋಗಿ ಯುವಕರನ್ನು ಸಂಘಟಿಸಿ ಇಲಾಖೆಯ ವಿರುದ್ಧ ಉಗ್ರ ಹೋರಾಟ ನಡೆಸಲಾಗುವುದು. ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಮಕೃಷ್ಣ ಎಂ., ವೀರೇಶ ಮಠನ್, ಪರಶುರಾಮ ಗಡೆರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Tags

jobsGovernmentemployeesYadgiri
share
ವಾರ್ತಾಭಾರತಿ
ವಾರ್ತಾಭಾರತಿ
Next Story
X