Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. Yadgiri | ಕಡೇಚೂರು–ಬಾಡಿಯಾಳ ಕೈಗಾರಿಕಾ...

Yadgiri | ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದ 27 ರಾಸಾಯನಿಕ ಕಾರ್ಖಾನೆಗಳನ್ನು ಮುಚ್ಚಲು ಆಗ್ರಹ

ವಾರ್ತಾಭಾರತಿವಾರ್ತಾಭಾರತಿ16 Oct 2026 7:41 PM IST
share
Yadgiri | ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದ 27 ರಾಸಾಯನಿಕ ಕಾರ್ಖಾನೆಗಳನ್ನು ಮುಚ್ಚಲು ಆಗ್ರಹ

ಯಾದಗಿರಿ: ತಾಲ್ಲೂಕಿನ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿ ಪರಿಸರ ಮಾಲಿನ್ಯ ಅಪಾಯದ ಮಟ್ಟ ಮೀರಿದ್ದು, ಬಿಓಡಿ ಮತ್ತು ಸಿಓಡಿ ವರದಿಗಳಲ್ಲಿ ಆತಂಕಕಾರಿ ಅಂಶಗಳು ಬಹಿರಂಗವಾಗಿವೆ. ಈಗಾಗಲೇ ಈ ಭಾಗದ 27 ರಾಸಾಯನಿಕ ಕಾರ್ಖಾನೆಗಳಿಗೆ ನೋಟಿಸ್ ನೀಡಲಾಗಿದ್ದು, ಅವುಗಳನ್ನು ತಕ್ಷಣ ಮುಚ್ಚಿಸಲು ಕ್ರಮ ಕೈಗೊಳ್ಳಬೇಕು ಎಂದು ನಮ್ಮ ಕರ್ನಾಟಕ ಸೇನೆಯ ಜಿಲ್ಲಾಧ್ಯಕ್ಷ ವಿಶ್ವಾರಾಧ್ಯ ದಿಮ್ಮೆ ಆಗ್ರಹಿಸಿದರು.

ಈ ಕುರಿತು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, ಯಾದಗಿರಿ ತಾಲ್ಲೂಕಿನ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದ ವಾತಾವರಣ ವಿಷಪೂರಿತವಾಗಿದ್ದು, ಕಳೆದ ಆರರಿಂದ ಏಳು ವರ್ಷಗಳಿಂದ ಈ ಪ್ರದೇಶದ ಕೈಗಾರಿಕೆಗಳಲ್ಲಿ ಕಾರ್ಮಿಕರು ಸಾವನ್ನಪ್ಪುತ್ತಿರುವ ವರದಿಗಳು ಕೇಳಿಬರುತ್ತಿವೆ ಎಂದು ಆರೋಪಿಸಿದರು.

ಈ ಕಾರ್ಖಾನೆಗಳ ವಿರುದ್ಧ ನಮ್ಮ ಸಂಘಟನೆ ಸೇರಿದಂತೆ ಹಲವು ಸಂಘಟನೆಗಳು ಈಗಾಗಲೇ ಧ್ವನಿ ಎತ್ತಿವೆ. ಹಲವು ಬಾರಿ ದೂರುಗಳನ್ನು ಸಲ್ಲಿಸಿದರೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ನೋಟಿಸ್‌ಗಳ ಮೇಲೆ ನೋಟಿಸ್‌ಗಳನ್ನು ನೀಡುತ್ತಾ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದ್ದಾರೆ ಎಂದು ದೂರಿದರು.

ಇದುವರೆಗೆ ಅನೇಕ ಕಾರ್ಮಿಕರು ಸಾವನ್ನಪ್ಪಿದ್ದು, ಹಲವರು ತೊಂದರೆಗೀಡಾಗಿದ್ದಾರೆ. ಕಡೇಚೂರು–ಬಾಡಿಯಾಳ, ಸೈದಾಪುರ ಹಾಗೂ ಶೆಟ್ಟಿಹಳ್ಳಿ ಸುತ್ತಮುತ್ತಲಿನ ಸುಮಾರು 20ರಿಂದ 30 ಗ್ರಾಮಗಳಲ್ಲಿ ವಿಷಕಾರಿ ಗಾಳಿ ಮತ್ತು ಸಹಿಸಲಾಗದ ದುರ್ವಾಸನೆ ಹರಡುತ್ತಿದೆ. ಇದರಿಂದಾಗಿ ಈ ಭಾಗದ ಜನರು ಅಸ್ತಮಾ, ಉಸಿರಾಟದ ತೊಂದರೆ, ಕ್ಯಾನ್ಸರ್ ಸೇರಿದಂತೆ ವಿವಿಧ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ ಎಂದು ಅವರು ಆರೋಪಿಸಿದರು.

ಮೀನು, ಕಪ್ಪೆ, ಹಾವು ಸೇರಿದಂತೆ ಹಲವು ಜಲಚರಗಳು, ಪಶುಪಕ್ಷಿಗಳು, ಜಿಂಕೆ, ನವಿಲು ಹಾಗೂ ದನಕರುಗಳು ವಿಷಕಾರಿ ಅನಿಲದ ಪರಿಣಾಮವಾಗಿ ಸಾವನ್ನಪ್ಪುತ್ತಿರುವ ಘಟನೆಗಳು ನಡೆಯುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದರು.

ಈ ಹಿನ್ನೆಲೆಯಲ್ಲಿ ಸಲ್ಲಿಸಿದ ದೂರಿನ ಆಧಾರದಲ್ಲಿ ಮಣ್ಣು ಹಾಗೂ ಹಳ್ಳ, ಕೆರೆಗಳ ನೀರಿನ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಇದೀಗ ವರದಿ ಬಂದಿದ್ದು, ಅದರಲ್ಲಿನ ಜೈವಿಕ ಆಮ್ಲಜನಕ ಬೇಡಿಕೆ (ಬಿಓಡಿ) ಮತ್ತು ರಾಸಾಯನಿಕ ಆಮ್ಲಜನಕ ಬೇಡಿಕೆ (ಸಿಓಡಿ) ಕುರಿತ ಅಂಶಗಳು ಆತಂಕಕಾರಿಯಾಗಿವೆ. ವರದಿಯ ಪ್ರಕಾರ, ನೀರು ಮತ್ತು ಮಣ್ಣಿನಲ್ಲಿನ ಸಾವಯವ ತ್ಯಾಜ್ಯದ ಪ್ರಮಾಣ ಸಾಮಾನ್ಯ ಮಟ್ಟಕ್ಕಿಂತ ಹತ್ತು ಪಟ್ಟು ಹೆಚ್ಚಾಗಿದೆ ಎಂದು ವಿಶ್ವಾರಾಧ್ಯ ದಿಮ್ಮೆ ತಿಳಿಸಿದರು.

ನೀರು ಮತ್ತು ಮಣ್ಣಿನಲ್ಲಿನ ಮಾಲಿನ್ಯದ ಪ್ರಮಾಣ ಅಪಾಯದ ಮಟ್ಟವನ್ನು ಮೀರಿದೆ. ಕೈಗಾರಿಕಾ ಪ್ರದೇಶವು ಹಸಿರು ವಲಯದಿಂದ ಕೆಂಪು ವಲಯದ ಅಪಾಯದ ಮಟ್ಟಕ್ಕೆ ತಲುಪಿದೆ. ಈ ಕುರಿತು ಈಗಾಗಲೇ ಸಂಬಂಧಪಟ್ಟ ಇಲಾಖೆಯು 27 ರಾಸಾಯನಿಕ ಕಾರ್ಖಾನೆಗಳಿಗೆ ನೋಟಿಸ್ ನೀಡಿದೆ. ಹೀಗಿದ್ದರೂ ಮುಂದಿನ ಕ್ರಮ ಕೈಗೊಳ್ಳದೆ ವಿಳಂಬ ಮಾಡುತ್ತಿರುವುದು ಸರಿಯಲ್ಲ. ಆದ್ದರಿಂದ ಈ ಕಾರ್ಖಾನೆಗಳನ್ನು ತಕ್ಷಣ ಮುಚ್ಚಿಸಲು ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.

ಈ ಬೇಡಿಕೆಗೆ ಸ್ಪಂದಿಸಿ ಕ್ರಮ ಕೈಗೊಳ್ಳದಿದ್ದರೆ, ಕಡೇಚೂರು–ಬಾಡಿಯಾಳ ಭಾಗದ 20ರಿಂದ 30 ಗ್ರಾಮಗಳ ಜನರು, ಜಾನುವಾರುಗಳು, ಪಶುಪಕ್ಷಿಗಳು ಹಾಗೂ ಕಾಡುಪ್ರಾಣಿಗಳ ಉಳಿವಿನ ಪ್ರಶ್ನೆಯನ್ನು ಮುಂದಿಟ್ಟುಕೊಂಡು ಗ್ರಾಮಸ್ಥರೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಸೇನೆಯ ಜಿಲ್ಲಾ ಉಪಾಧ್ಯಕ್ಷ ಚೆನ್ನಬಸವ ಕನಕ, ಪ್ರಧಾನ ಕಾರ್ಯದರ್ಶಿ ಭೀಮು ಪೂಜಾರಿ, ತಾಲ್ಲೂಕು ಅಧ್ಯಕ್ಷ ವೀರೇಶ ಸಜ್ಜನ್, ಗುರುಮಠಕಲ್ ತಾಲ್ಲೂಕು ಅಧ್ಯಕ್ಷ ಅಬ್ದುಲ್ ರಿಯಾಜ್ ಸಾಹುಕಾರ್, ಭೀಮು ಮಳ್ಳಳ್ಳಿ, ಭೀಮೇಶ ಯರಗೋಳ, ಭಾಸ್ಕರ್ ಸೈದಾಪುರ, ಮೈಬೂಬ್ ಖುರೇಷಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Tags

BadiyalKadechurYadgiri
share
ವಾರ್ತಾಭಾರತಿ
ವಾರ್ತಾಭಾರತಿ
Next Story
X