Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. Yadgiri | ಬಸವಣ್ಣನವರ ಕುರಿತು...

Yadgiri | ಬಸವಣ್ಣನವರ ಕುರಿತು ಅವಹೇಳನಕಾರಿ ಬರಹ ಸಹಿಸಲು ಸಾಧ್ಯವಿಲ್ಲ: ರಾಚನಗೌಡ ಮುದ್ನಾಳ

ಶರಬು ಬಿ.ನಾಟೇಕಾರ್ ಯಾದಗಿರಿ/ವಾರ್ತಾಭಾರತಿಶರಬು ಬಿ.ನಾಟೇಕಾರ್ ಯಾದಗಿರಿ/ವಾರ್ತಾಭಾರತಿ22 Nov 2026 4:48 PM IST
share
Yadgiri | ಬಸವಣ್ಣನವರ ಕುರಿತು ಅವಹೇಳನಕಾರಿ ಬರಹ ಸಹಿಸಲು ಸಾಧ್ಯವಿಲ್ಲ: ರಾಚನಗೌಡ ಮುದ್ನಾಳ

ಯಾದಗಿರಿ: ಬಸವಣ್ಣನವರು ಒಂದು ಜಾತಿಗೆ, ಒಂದು ಪಂಥಕ್ಕೆ ಅಥವಾ ಒಂದು ಕಾಲಘಟ್ಟಕ್ಕೆ ಸೀಮಿತವಾದ ವ್ಯಕ್ತಿಯಲ್ಲ. ಅವರು ಕಾಲಾತೀತ ವೈಚಾರಿಕ ಕ್ರಾಂತಿಯ ಪ್ರತೀಕ. ಅಂತಹ ವಿಶ್ವಗುರುಗಳ ವಿಚಾರಧಾರೆಗಳಿಗೆ ಅಪಮಾನ ಮಾಡುವುದನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ ಎಂದು ವೀರಶೈವ ಲಿಂಗಾಯತ ಸಮಾಜದ ಹಿರಿಯ ಮುಖಂಡ ರಾಚನಗೌಡ ಮುದ್ನಾಳ ಹೇಳಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ರವಿ ಹಂಜ್ ಎಂಬವರು ರಚಿಸಿರುವ ‘ಬಸವ ಮಂಟಪ’ ಕೃತಿಯಲ್ಲಿ ಬಸವಣ್ಣನವರ ಕುರಿತು ಮಾಡಲಾಗಿದೆ ಎನ್ನಲಾದ ವಿವಾದಾತ್ಮಕ ಹಾಗೂ ಅವಹೇಳನಕಾರಿ ಹೇಳಿಕೆಗಳನ್ನು ತೀವ್ರವಾಗಿ ಖಂಡಿಸಿದ್ದಾರೆ.

ಬಸವಣ್ಣನವರು ಕೇವಲ ಲಿಂಗಾಯತರಿಗೆ ಸೀಮಿತವಾದ ಧಾರ್ಮಿಕ ವ್ಯಕ್ತಿಯಲ್ಲ. ಅವರು ಸಕಲ ಜೀವಾತ್ಮರ ಲೇಸನ್ನು ಬಯಸಿದ ಕ್ರಾಂತಿಪುರುಷ, ಭಕ್ತಿ ಭಂಡಾರಿ, ಸಾಂಸ್ಕೃತಿಕ ನಾಯಕ, ಸಾಮಾಜಿಕ ಸುಧಾರಕ ಹಾಗೂ ಪ್ರಜಾಪ್ರಭುತ್ವದ ಮುನ್ನೋಟಗಾರರಾಗಿದ್ದಾರೆ. ಬುದ್ಧನ ನಂತರ ಜಗತ್ತಿಗೆ ಸಮ ಸಮಾಜದ ವಿಚಾರ, ಸಮತೆಯ ತತ್ವ ಹಾಗೂ ಪ್ರಜಾಪ್ರಭುತ್ವದ ಮಾದರಿಯನ್ನು ತೋರಿಸಿಕೊಟ್ಟವರು ಬಸವಣ್ಣನವರು. 12ನೇ ಶತಮಾನದಲ್ಲಿಯೇ ಅನುಭವ ಮಂಟಪದ ಮೂಲಕ ಜಾತಿ, ವರ್ಗ, ಲಿಂಗಭೇದವಿಲ್ಲದೆ ಎಲ್ಲರೂ ಒಟ್ಟಿಗೆ ಕುಳಿತು ಚರ್ಚಿಸಿ ನಿರ್ಧಾರ ಕೈಗೊಳ್ಳುವ ವ್ಯವಸ್ಥೆಯನ್ನು ಜಗತ್ತಿಗೆ ಪರಿಚಯಿಸಿದರು. ಇದು ಇಂದಿನ ಸಂಸದೀಯ ಪ್ರಜಾಪ್ರಭುತ್ವಕ್ಕಿಂತಲೂ ಶತಮಾನಗಳಷ್ಟು ಹಿಂದಿನ ಮಹತ್ವದ ಪ್ರಯೋಗವಾಗಿತ್ತು ಎಂದು ಅವರು ವಿವರಿಸಿದ್ದಾರೆ.

‘ಕಾಯಕವೇ ಕೈಲಾಸ’, ‘ದಾಸೋಹವೇ ಧರ್ಮ’ ಎಂಬ ತತ್ವಗಳ ಮೂಲಕ ದುಡಿಮೆಗೆ ಗೌರವ ನೀಡಿದ ಬಸವಣ್ಣನವರು, ದುಡಿಯುವ ಕೈಗಳಿಗೆ ದೇವರ ಸ್ಥಾನ ಕಲ್ಪಿಸಿದರು. ಹಸಿದವರಿಗೆ ಅನ್ನ, ಬಾಯಾರಿದವರಿಗೆ ನೀರು ಹಾಗೂ ನಿರ್ಗತಿಕರಿಗೆ ಆಶ್ರಯ ನೀಡುವ ದಾಸೋಹ ಪರಂಪರೆಯನ್ನು ಸಮಾಜದ ಜೀವನಾಡಿಯನ್ನಾಗಿ ಮಾಡಿದರು ಎಂದು ತಿಳಿಸಿದ್ದಾರೆ.

ಗಾಂಧೀಜಿ, ಡಾ. ಬಾಬಾಸಾಹೇಬ ಅಂಬೇಡ್ಕರ್ ಸೇರಿದಂತೆ ದೇಶದ ಅನೇಕ ಮಹನೀಯರು ಬಸವಣ್ಣನವರನ್ನು ಗೌರವದಿಂದ ಸ್ಮರಿಸಿದ್ದಾರೆ. ಇಂದಿಗೂ ರಾಜ್ಯ ಸರ್ಕಾರ ಸೇರಿದಂತೆ ಇಡೀ ದೇಶ ಬಸವಣ್ಣನವರ ವಿಚಾರಧಾರೆಯ ಹಾದಿಯಲ್ಲಿ ಮುನ್ನಡೆಯಲು ಪ್ರಯತ್ನಿಸುತ್ತಿದೆ. ಇಂತಹ ಮಹಾನ್ ಚೇತನದ ಕುರಿತು ಅವಹೇಳನಕಾರಿ ಬರಹ ಬರೆಯುವುದು ಕೇವಲ ಒಬ್ಬ ವ್ಯಕ್ತಿಗೆ ಮಾಡಿದ ಅಪಮಾನವಲ್ಲ. ಅದು ಕಾಯಕ, ದಾಸೋಹ, ಸಮತೆ ಹಾಗೂ ಸಹಬಾಳ್ವೆಯಂತಹ ಮಾನವೀಯ ಮೌಲ್ಯಗಳಿಗೆ ಮಾಡಿದ ದ್ರೋಹವಾಗಿದೆ. ಸಮಾಜದಲ್ಲಿ ವೈಷಮ್ಯ ಬಿತ್ತಿ, ಶಾಂತಿ ಕದಡುವ ಹುನ್ನಾರವಾಗಿದೆ ಎಂದು ಮುದ್ನಾಳ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಲಿಂಗಾಯತ ಎಂಬುದು ಕೇವಲ ಒಂದು ಹೆಸರಲ್ಲ. ಅದು ವೈಚಾರಿಕ ಪರಂಪರೆಯಾಗಿದೆ. ಸಮತೆಯನ್ನು ಬಯಸುವ ಹಾಗೂ ಮಾನವೀಯತೆಯನ್ನು ಪೂಜಿಸುವ ಈ ಪರಂಪರೆಯಲ್ಲಿ ಬಸವಣ್ಣನವರನ್ನು ಅಪ್ರಸ್ತುತಗೊಳಿಸುವ ಅಥವಾ ಅವರ ವಿಚಾರಗಳನ್ನು ತಿರುಚುವ ಪ್ರಯತ್ನವನ್ನು ಪ್ರಜ್ಞಾವಂತ ಕನ್ನಡಿಗರು ಎಂದಿಗೂ ಸಹಿಸುವುದಿಲ್ಲ ಎಂದು ಹೇಳಿದ್ದಾರೆ.

ಬಸವಣ್ಣನವರಿಗೆ ಅವಮಾನ ಮಾಡಿದ ಆಧುನಿಕ ಕೊಂಡಿ ಮಂಚಣ್ಣನವರಿಗೆ ಕಾನೂನಿನ ಮೂಲಕ ಕಠಿಣ ಶಿಕ್ಷೆ ವಿಧಿಸಬೇಕು. ಸರ್ಕಾರ ಕೂಡಲೇ ‘ಬಸವ ಮಂಟಪ’ ಕೃತಿಯನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು. ಇಲ್ಲದಿದ್ದರೆ ಇಂತಹ ವಿಕೃತ ಬರಹಗಳು ಮತ್ತೆ ಮತ್ತೆ ಹುಟ್ಟಿಕೊಳ್ಳುತ್ತವೆ. ಕಾನೂನು ಕ್ರಮ ಕೈಗೊಳ್ಳುವುದರಿಂದ ಮುಂದಿನ ಪೀಳಿಗೆಗೆ ಎಚ್ಚರಿಕೆ ನೀಡಿದಂತಾಗುತ್ತದೆ ಎಂದು ಮುದ್ನಾಳ ಆಗ್ರಹಿಸಿದ್ದಾರೆ.

ಬಸವತತ್ವವನ್ನು ಅರ್ಥಮಾಡಿಕೊಳ್ಳದೆ, ಅಧ್ಯಯನ ಮಾಡದೆ ಸುಳ್ಳು ಪ್ರಚಾರ ಮಾಡುವುದು ಬೌದ್ಧಿಕ ದಿವಾಳಿತನವಾಗಿದೆ. ಟೀಕೆ ಮಾಡುವುದಕ್ಕೂ ಒಂದು ಘನತೆ, ಅಧ್ಯಯನ ಹಾಗೂ ಸತ್ಯದ ನೆಲೆಗಟ್ಟು ಇರಬೇಕು. ಅದನ್ನು ಬಿಟ್ಟು ಭಾವನೆಗಳನ್ನು ಕೆರಳಿಸುವ ಬರಹಗಳು ಸಮಾಜಕ್ಕೆ ಮಾರಕವಾಗಿವೆ ಎಂದು ಎಚ್ಚರಿಸಿದ್ದಾರೆ.

ಬಸವಣ್ಣನವರು ತೋರಿಸಿಕೊಟ್ಟ ಮಾರ್ಗ ಸ್ಪಷ್ಟವಾಗಿದೆ. ದ್ವೇಷ ಬಿಟ್ಟು ಪ್ರೀತಿ ಬೆಳೆಸುವುದು, ಅಸಮಾನತೆ ಬಿಟ್ಟು ಸಮತೆ ತರುವುದು, ಸೋಮಾರಿತನ ಬಿಟ್ಟು ಕಾಯಕ ಮಾಡುವುದು ಹಾಗೂ ಸ್ವಾರ್ಥ ಬಿಟ್ಟು ದಾಸೋಹ ನಡೆಸುವುದೇ ಆ ಮಾರ್ಗವಾಗಿದೆ. ಅದರಂತೆ ನಡೆಯುವುದೇ ಬಸವಣ್ಣನವರಿಗೆ ಸಲ್ಲಿಸುವ ನಿಜವಾದ ಗೌರವ ಎಂದು ರಾಚನಗೌಡ ಮುದ್ನಾಳ ಹೇಳಿದ್ದಾರೆ.

Tags

YadgiriBasavanna
share
ಶರಬು ಬಿ.ನಾಟೇಕಾರ್ ಯಾದಗಿರಿ/ವಾರ್ತಾಭಾರತಿ
ಶರಬು ಬಿ.ನಾಟೇಕಾರ್ ಯಾದಗಿರಿ/ವಾರ್ತಾಭಾರತಿ

ಶರಬು ಬಿ.ನಾಟೇಕಾರ್ ಅವರು 2018ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಎಂ.ಎ. ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಕಳೆದ ಎಂಟು ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಇವರು, ವಿವಿಧ ಪತ್ರಿಕೆಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಪ್ರಸ್ತುತ ವಾರ್ತಾಭಾರತಿ ದಿನಪತ್ರಿಕೆಯ ಯಾದಗಿರಿ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ

Next Story
X