Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ದ್ವಿತೀಯ ಪಿಯುಸಿ ಪರೀಕ್ಷೆ-2ರ...

ಯಾದಗಿರಿ | ದ್ವಿತೀಯ ಪಿಯುಸಿ ಪರೀಕ್ಷೆ-2ರ ಸಕಲ ಸಿದ್ಧತೆ ಮಾಡಿಕೊಳ್ಳಲು ಜಿಲ್ಲಾಧಿಕಾರಿ ಸೂಚನೆ

ʼಪರೀಕ್ಷಾ ಫಲಿತಾಂಶ ಸುಧಾರಣೆಗೆ ವಿಶೇಷ ಗಮನ ನೀಡಿʼ

ವಾರ್ತಾಭಾರತಿವಾರ್ತಾಭಾರತಿ21 April 2025 3:24 PM IST
share
Photo of Metting

ಯಾದಗಿರಿ : ಎ.24 ರಿಂದ ಮೇ 8 ರವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆ -2 ನ್ನು ನಕಲುಮುಕ್ತ ಹಾಗೂ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ. ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2 ಗೆ ಸಂಬಂಧಿಸಿದಂತೆ ನಡೆದ ಪೂರ್ವಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪರೀಕ್ಷೆ ಸಂದರ್ಭದಲ್ಲಿ ಯಾವುದೇ ರೀತಿಯ ನಕಲಿನಂತಹ ಅಕ್ರಮ ಚಟುವಟಿಕೆಗಳು ನಡೆಯದಂತೆ ಎಚ್ಚರಿಕೆ ವಹಿಸಬೇಕು. ಪರೀಕ್ಷೆಗಳು ವ್ಯವಸ್ಥಿತವಾಗಿ ನಡೆಸಲು ಸಂಬಂಧಿಸಿದ ಅಧಿಕಾರಿಗಳು ಸಕಲ ಕ್ರಮಗಳನ್ನು ಅಚ್ಚುಕಟ್ಟಾಗಿ ಕೈಗೊಳ್ಳುವಂತೆ ಸೂಚನೆ ನೀಡಿದರು.

ಯಾದಗಿರಿ ಜಿಲ್ಲೆಯಲ್ಲಿ ಈ ಪರೀಕ್ಷೆಗಾಗಿ ಒಟ್ಟು 9 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದ್ದು, ಈ ಪರೀಕ್ಷೆ ಕೇಂದ್ರಗಳಿಗೆ ಒಟ್ಟು 99 ಪದವಿ ಪೂರ್ವ ಕಾಲೇಜುಗಳಲ್ಲಿಯ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳನ್ನು ಜೋಡಿಸಲಾಗಿದೆ.

ಜಿಲ್ಲೆಯಲ್ಲಿ ಒಟ್ಟು 6,159 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಅರ್ಹರಾದ ಎಲ್ಲ ವಿದ್ಯಾರ್ಥಿಗಳ ಪ್ರವೇಶ ಪತ್ರ (Admission Ticket) ಗಳನ್ನು ಆನ್ ಲೈನ್ ಮೂಲಕ ಎಲ್ಲ ಕಾಲೇಜುಗಳಿಗೆ ವಿತರಿಸಲಾಗಿದೆ. ಪರೀಕ್ಷೆ ಕೇಂದ್ರ ದ ಸಂಪೂರ್ಣ ಜವಾಬ್ದಾರಿಯು ಮುಖ್ಯ ಅಧೀಕ್ಷಕರದಾಗಿದ್ದು, ಈಗಾಗಲೇ ನೇಮಿಸಿದ ಅಧೀಕ್ಷಕರು ನಿಯಮಾವಳಿಗಳಂತೆ ಪರೀಕ್ಷೆ ನಡೆಸಲು ಸಕಲ‌ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು.

ಆಯಾ ಪರೀಕ್ಷಾ ಕೇಂದ್ರಗಳಲ್ಲಿ ಆಸನ, ಇತ್ಯಾದಿ ವ್ಯವಸ್ಥೆಗಳನ್ನು ಅಚ್ಚುಕಟ್ಟಾಗಿ ಮಾಡಿಕೊಳ್ಳಬೇಕು. ಅಭ್ಯರ್ಥಿಗಳಿಗೆ ಆಸನ ವ್ಯವಸ್ಥೆಯನ್ನು ಕೊಠಡಿಯಿಂದ ಹೊರಗೆ ಅಥವಾ ಕಾರಿಡಾರ್ ನಲ್ಲಿ ಅಥವಾ ನೆಲದ ಮೇಲೆ ಕುಳಿತು ಪರೀಕ್ಷೆಗಳನ್ನು ಬರೆಯಿಸಕೂಡದು ಎಂದು ಅವರು ಸೂಚಿಸಿದರು.

ಪರೀಕ್ಷೆ ಸಂದರ್ಭದಲ್ಲಿ ಪರೀಕ್ಷಾ ಕೇಂದ್ರದ ಸುತ್ತಮುತ್ತಲು 200 ಮೀ.ಪ್ರದೇಶದಲ್ಲಿ ನಿಷೇಧಾಜ್ಞೆ ಇರಲಿದೆ. ಪರೀಕ್ಷೆ ಕಾರ್ಯಗಳಿಗೆ ನೇಮಕಗೊಂಡ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಮಾತ್ರ ಕೇಂದ್ರದಲ್ಲಿ ಉಪಸ್ಥಿತರಿರಬೇಕು. ಕಡ್ಡಾಯವಾಗಿ ಗುರುತಿನ ಚೀಟಿ ಧರಿಸಬೇಕು. ಅನ್ಯ ವ್ಯಕ್ತಿಗಳು ಕೇಂದ್ರದಲ್ಲಿ ಕಂಡು ಬಂದಲ್ಲಿ ಮುಖ್ಯ ಅಧೀಕ್ಷಕರನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತದೆ ಎಂದು ಅವರು ಹೇಳಿದರು.

ಈ ಪರೀಕ್ಷೆ ಸಂದರ್ಭದಲ್ಲಿ ಪರೀಕ್ಷಾರ್ಥಿಗಳು ಎಲೆಕ್ಟ್ರಾನಿಕ್ ವಸ್ತುಗಳು ಮೋಬೈಲ್, ಪೆನ್ ಡ್ರೈವ್ ಗಳು, ಇಯರ್ ಫೋನ್ಗಳು, ಮೈಕ್ರೋಫೋನ್, ಬ್ಲೂಟೂಥ್ ಸಾಧನಗಳು, ಕೈಗಡಿಯಾರಗಳನ್ನು ಉಪಯೋಗಿಸುವುದನ್ನು ನಿಷೇಧಿಸಲಾಗಿದೆ.

ಪರೀಕ್ಷೆ ಕೇಂದ್ರಗಳ ಸುತ್ತಲೂ ಸೂಕ್ತ ಪೋಲಿಸ್ ಬಂದೋಬಸ್ತ್ ಮಾಡಬೇಕು. ಕೊಠಡಿ ಮೇಲ್ವಿಚಾರಣೆ ನೋಡಿಕೊಳ್ಳಬೇಕು. ಕೇಂದ್ರದ ಎಲ್ಲ ಕೊಠಡಿಗಳಲ್ಲಿ ಸಿಸಿಟಿವಿ ವ್ಯವಸ್ಥೆ, ವ್ಯತ್ಯಯವಿಲ್ಲದ ನಿರಂತರ ವಿದ್ಯುತ್ ವ್ಯವಸ್ಥೆ ಹಾಗೂ ವೆಬ್ ಕಾಸ್ಟಿಂಗ್ ಅಳವಡಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಎಲ್ಲಾ ಕೇಂದ್ರಗಳ ಸಿಸಿಟಿವಿ ವೀಕ್ಷಿಸಲು ವೆಬ್ ಕಾಸ್ಟಿಂಗ್‌ ವ್ಯವಸ್ಥೆಯನ್ನು ಯಾದಗಿರಿ ಜಿಲ್ಲಾ ಪಂಚಾಯತ್ ನ ವಿಸಿ ಹಾಲ್ ನಲ್ಲಿ ಕೈಗೊಂಡು, ನೇಮಿಸಿದ ವೀಕ್ಷಕರು ಪರೀಕ್ಷಾ ದಿನದಂದು ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕು. ಜೆಸ್ಕಾಂ ಅಧಿಕಾರಿಗಳು ವಿದ್ಯುತ್ ವ್ಯತ್ಯಯವಾಗದಂತೆ ನೋಡಿಕೊಳ್ಳಬೇಕು.

ಪರೀಕ್ಷೆ ಕೇಂದ್ರಗಳ ಮುಖ್ಯ ಅಧೀಕ್ಷಕರು, ಸಹ ಮುಖ್ಯ ಅಧೀಕ್ಷಕರು , ವಿಶೇಷ ಜಾಗೃತ ದಳದ ಸದಸ್ಯರು ಹಾಗೂ ಇತರೆ ಪರೀಕ್ಷಾ ಸಿಬ್ಬಂದಿಗಳು ಪರೀಕ್ಷೆಯ ಸ್ಥಾಯಿ ಸೂಚನೆಗಳಂತೆ ಕಾರ್ಯನಿರ್ವಹಿಸಬೇಕು.

ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಾಗಲಿ, ಸಿಬ್ಬಂದಿಗಳಾಗಲಿ ಮೊಬೈಲ್ ಫೋನುಗಳನ್ನು ಬಳಸುವುದನ್ನು ನಿಷೇಧಿಸಲಾಗಿದೆ. ಪರೀಕ್ಷಾ ಕೊಠಡಿಗಳ ಹೊರಗೆ ಅಲ್ಪ ದೂರದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಇರಬೇಕು. ಗೌಪ್ಯ ಸಾಮಗ್ರಿಗಳನ್ನು ನಿಯಮಾವಳಿಗಳಂತೆ ನಿರ್ವಹಣೆ ಮಾಡಬೇಕು.

ಪರೀಕ್ಷಾ ಫಲಿತಾಂಶ ಸುಧಾರಣೆಗೆ ವಿಶೇಷ ಗಮನ ನೀಡಿ :

ಈ ಬಾರಿಯ ಪಿಯುಸಿ ವಾರ್ಷಿಕ ಪರೀಕ್ಷೆ -1ರ ಫಲಿತಾಂಶ ತೃಪ್ತಿ ತಂದಿಲ್ಲ. ಆದ್ದರಿಂದ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಮಕ್ಕಳನ್ನು ವಿಶೇಷ ರೀತಿಯಲ್ಲಿ ತರಬೇತುಗೊಳಿಸಿ, ನಿರಂತರ ಪರಿಶೀಲನೆ, ಕಡ್ಡಾಯ ಹಾಜರಾತಿ ಹಾಗೂ ಮೂಲಸೌಕರ್ಯಗಳ ಸದ್ಬಳಕೆಯೊಂದಿಗೆ ವಿದ್ಯಾರ್ಥಿಗಳಲ್ಲಿನ ಓದಿನ ಹವ್ಯಾಸ ಬೆಳೆಸಿ. ಪ್ರತಿ ತಿಂಗಳು ಯೋಜನಾಬದ್ಧವಾಗಿ ಮಕ್ಕಳ ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಒತ್ತು ಕೊಡಿ. ಬೋಧನಾ ವ್ಯವಸ್ಥೆ ಸುಧಾರಿಸಿಕೊಂಡು, ಪಾಠ ಸರಿಯಾಗಿ ಮಾಡಿಸುವಂತೆ ನೋಡಿಕೊಳ್ಳಬೇಕು. ಪಾಲಕರನ್ನೂ ಮನವರಿಕೆ ಮಾಡಲು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ (ಪದವಿಪೂರ್ವ) ಚೆನ್ನಬಸಪ್ಪ ಕುಳಿಗೇರಿ ಸ್ವಾಗತಿಸಿ ಪರೀಕ್ಷೆ ಕುರಿತು ವಿವರಿಸಿದರು. ಶಿಕ್ಷಣ ಇಲಾಖೆ ಅಧಿಕಾರಿಗಳು, ಪ್ರಾಂಶುಪಾಲರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X