Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. Yadgiri | ಅಂಬೇಡ್ಕರ್ ತತ್ವಗಳಿಗೆ...

Yadgiri | ಅಂಬೇಡ್ಕರ್ ತತ್ವಗಳಿಗೆ ರಾಜಿಯಾಗಬೇಡಿ: ಚಂದ್ರಕಾಂತ ಗದ್ದಗಿ

ವಾರ್ತಾಭಾರತಿವಾರ್ತಾಭಾರತಿ6 July 2026 6:12 PM IST
share
Yadgiri | ಅಂಬೇಡ್ಕರ್ ತತ್ವಗಳಿಗೆ ರಾಜಿಯಾಗಬೇಡಿ: ಚಂದ್ರಕಾಂತ ಗದ್ದಗಿ
ಕೆಕೆಆರ್‌ಟಿಸಿ ಎಸ್ಸಿ–ಎಸ್ಟಿ ನೌಕರರ ಜಾಗೃತಿ ಸಮಾವೇಶ

ಯಾದಗಿರಿ: ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಪಾದಿಸಿದ ಶಿಕ್ಷಣ, ಸಂಘಟನೆ ಮತ್ತು ಹೋರಾಟದ ತತ್ವಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸಂಘಟನೆಯ ಜವಾಬ್ದಾರಿ ಹೊತ್ತವರು ಯಾವುದೇ ಕಾರಣಕ್ಕೂ ತತ್ವ-ಸಿದ್ಧಾಂತಗಳಿಗೆ ರಾಜಿ ಮಾಡಿಕೊಳ್ಳಬಾರದು ಎಂದು ಕಲ್ಯಾಣ ಕರ್ನಾಟಕ ಈಶಾನ್ಯ ವಲಯದ ಅಧ್ಯಕ್ಷ ಚಂದ್ರಕಾಂತ ಗದ್ದಗಿ ಹೇಳಿದರು.

ನಗರದ ಹಳೆ ಪ್ರವಾಸಿ ಮಂದಿರದಲ್ಲಿ ಸೋಮವಾರ ನಡೆದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕೆಕೆಆರ್‌ಟಿಸಿ) ಯಾದಗಿರಿ ವಿಭಾಗದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ನೌಕರರ ಸಂಘಟನೆಯ ಜಾಗೃತಿ ಸಮಾವೇಶದಲ್ಲಿ ಅವರು ಮಾತನಾಡಿದರು.

ಅನ್ಯಾಯಕ್ಕೊಳಗಾದ ಕಾರ್ಮಿಕರು ಹಾಗೂ ನೌಕರರಿಗೆ ನ್ಯಾಯ ಒದಗಿಸಿ, ಅವರ ಹಕ್ಕುಗಳನ್ನು ರಕ್ಷಿಸುವುದು ಸಂಘಟನೆಯ ಪ್ರಮುಖ ಉದ್ದೇಶವಾಗಿರಬೇಕು. ಜಾತಿ ಕಿರುಕುಳ, ವರ್ಗಾವಣೆ ಹಾಗೂ ಬಡ್ತಿಯಲ್ಲಿ ಅನ್ಯಾಯವಾದಾಗ ಸಂಘಟನೆಯ ನಾಯಕತ್ವ ಧೈರ್ಯವಾಗಿ ಸದಸ್ಯರ ಪರ ನಿಲ್ಲಬೇಕು ಎಂದು ಹೇಳಿದರು.

ಸಂಘದ ನಾಯಕತ್ವಕ್ಕೆ ಪ್ರಾಮಾಣಿಕ, ಸಮರ್ಥ ಹಾಗೂ ಎಲ್ಲರನ್ನು ಒಗ್ಗೂಡಿಸಿಕೊಂಡು ಸಾಗುವ ಗುಣಗಳಿರುವವರನ್ನು ಆಯ್ಕೆ ಮಾಡಬೇಕು. ಅಧಿಕಾರಿಗಳ ಮೆಚ್ಚುಗೆಗಾಗಿ ಸಂಘದ ಹಿತಾಸಕ್ತಿಗೆ ಧಕ್ಕೆ ತರುವವರ ಬಗ್ಗೆ ಸದಸ್ಯರು ಎಚ್ಚರಿಕೆಯಿಂದಿರಬೇಕು ಎಂದು ಸಲಹೆ ನೀಡಿದರು.

ಸಂಘದೊಳಗೆ ದ್ರೋಹ, ಗುಲಾಮಗಿರಿ ಹಾಗೂ ಚಮಚಾಗಿರಿಗೆ ಅವಕಾಶ ನೀಡಬಾರದು. ತಪ್ಪು ಕಂಡರೆ ಅದನ್ನು ತಪ್ಪು ಎಂದು ಹೇಳುವ ಧೈರ್ಯ ಇರಬೇಕು. ಸಂಘದ ತತ್ವಗಳಿಗೆ ಬದ್ಧರಾಗಿ ಕಾರ್ಯನಿರ್ವಹಿಸಿದಾಗ ಮಾತ್ರ ಸಂಘಟನೆ ಸದೃಢವಾಗಿ ಬೆಳೆಯಲು ಸಾಧ್ಯ ಎಂದು ಹೇಳಿದರು.

ಸಾರಿಗೆ ನೌಕರರು ದುಶ್ಚಟಗಳಿಂದ ದೂರವಿದ್ದು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಆಸ್ತಿ ಕಳೆದುಕೊಳ್ಳಬಹುದು, ಆದರೆ ಶಿಕ್ಷಣವನ್ನು ಯಾರೂ ಕಸಿದುಕೊಳ್ಳಲು ಸಾಧ್ಯವಿಲ್ಲ. ಆದ್ದರಿಂದ ಮಕ್ಕಳನ್ನು ಉತ್ತಮವಾಗಿ ವಿದ್ಯಾವಂತರನ್ನಾಗಿ ರೂಪಿಸಬೇಕು ಎಂದು ಕರೆ ನೀಡಿದರು.

ಪ್ರಧಾನ ಕಾರ್ಯದರ್ಶಿ ರಾಮಚಂದ್ರ ಹೈಯಾಳ್ಕರ್ ಮಾತನಾಡಿ, ಮುಂದಿನ ಮೂರು ತಿಂಗಳ ಕಾಲ ತಾತ್ಕಾಲಿಕ ಸಮಿತಿ ರಚಿಸಿ ಸದಸ್ಯತ್ವ ಅಭಿಯಾನ ನಡೆಸಬೇಕು. ಬಳಿಕ ಹೊಸ ಸದಸ್ಯರನ್ನು ಸೇರ್ಪಡೆಗೊಳಿಸಿ ಪ್ರಜಾಪ್ರಭುತ್ವದ ಮಾದರಿಯಲ್ಲಿ ಪದಾಧಿಕಾರಿಗಳನ್ನು ಆಯ್ಕೆ ಮಾಡಿ ಸಂಘಟನೆಯನ್ನು ಮತ್ತಷ್ಟು ಬಲಿಷ್ಠಗೊಳಿಸಬೇಕು ಎಂದು ಹೇಳಿದರು.

ವಲಯ ಪ್ರಧಾನ ಕಾರ್ಯದರ್ಶಿ ಸೂರ್ಯಕಾಂತ ಸಿಂಗೆ, ಕಲಬುರಗಿ ವಿಭಾಗ-1ರ ಅಧ್ಯಕ್ಷ ವಿಠ್ಠಲ ಭೀಮಣ್ಣ, ಪ್ರಧಾನ ಕಾರ್ಯದರ್ಶಿ ದೇವೇಂದ್ರ ಬೇಹರೆ, ಕಲಬುರಗಿ ವಿಭಾಗ-2ರ ಅಧ್ಯಕ್ಷ ಶಿವಶರಣಪ್ಪ ದಬರಾಬಾಡಿ, ಪ್ರಧಾನ ಕಾರ್ಯದರ್ಶಿ ಅಜಯ್ ಕಪನೂರ, ಸುನಿಲ್ ಶಾಖಾ, ನಾಗಭೂಷಣ, ಯಾದಗಿರಿ ವಿಭಾಗದ ಅಧ್ಯಕ್ಷ ಮಾನಯ್ಯ ಹತ್ತೀಗೂಡೂರು, ಪ್ರಧಾನ ಕಾರ್ಯದರ್ಶಿ ಎಂ.ಎಚ್. ಬಡಿಗೇರ್, ಘಟಕದ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಮುಷ್ಠಹಳ್ಳಿ, ಕಾರ್ಯಾಧ್ಯಕ್ಷ ಭೀಮಣ್ಣ ರಾಖಂಗೇರ, ಮಹಾಮಂಡಳ ಅಧ್ಯಕ್ಷ ದೇವೇಂದ್ರಪ್ಪ ಮ್ಯಾಗೇರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags

Yadgiri
share
ವಾರ್ತಾಭಾರತಿ
ವಾರ್ತಾಭಾರತಿ
Next Story
X