Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ಡಾ.ಬಿ.ಆರ್.ಅಂಬೇಡ್ಕರ್ ಅವರ...

ಯಾದಗಿರಿ | ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜಯಂತಿ ಆಚರಣೆ

ನನ್ನ ಕ್ಷೇತ್ರದಲ್ಲಿ ಯಾರಿಗೂ ಅನ್ಯಾಯವಾಗಲು ಬಿಡುವುದಿಲ್ಲ : ಶಾಸಕ ಆರ್.ವಿ ನಾಯಕ

ವಾರ್ತಾಭಾರತಿವಾರ್ತಾಭಾರತಿ19 April 2025 8:18 PM IST
share
ಯಾದಗಿರಿ | ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜಯಂತಿ ಆಚರಣೆ

ಸುರಪುರ : ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ನನಗೆ ಸದಾಕಾಲ ಪ್ರೇರಣೆಯಾಗಿದ್ದಾರೆ. ಅವರ ಆದರ್ಶವನ್ನು ಮೈಗೂಡಿಸಿಕೊಂಡು ಕೆಲಸ ಮಾಡುತ್ತಿರುವೆ, ನನ್ನ ಕ್ಷೇತ್ರದಲ್ಲಿ ಯಾವುದೇ ವ್ಯಕ್ತಿಗೂ ಅನ್ಯಾಯವಾಗಲು ನಾನು ಬಿಡುವುದಿಲ್ಲ ಎಂದು ಶಾಸಕ ರಾಜಾ ವೇಣುಗೋಪಾಲ ನಾಯಕ ತಿಳಿಸಿದ್ದಾರೆ.

ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಸಮಿತಿ ಝಂಡದಕೇರಾ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಅಂಬೇಡ್ಕರರು ಅನೇಕ ಕಷ್ಟ ಕಾರ್ಪಣ್ಯಗಳನ್ನು ಅನುಭವಿಸಿ ವಿದ್ಯಾಭ್ಯಾಸ ಮಾಡಿ ನಮ್ಮ ದೇಶಕ್ಕೆ ಸಂವಿಧಾನ ಬರೆದುಕೊಟ್ಟಿದ್ದಾರೆ. ಅದನ್ನು ಪಾಲಿಸುವ ಜೊತೆಗೆ ಉಳಿಸಿಕೊಂಡುವ ಹೋಗುವ ಜವಬ್ದಾರಿ ಎಲ್ಲರ ಮೇಲಿದೆ ಎಂದರು.

ಪ್ರತಿಯೊಬ್ಬರು ಅಂಬೇಡ್ಕರರನ್ನು ಆದರ್ಶವಾಗಿಟ್ಟುಕೊಂಡು ನಮ್ಮ ಮಕ್ಕಳಿಗೆ ಉತ್ತಮವಾದ ಶಿಕ್ಷಣವನ್ನು ಕೊಡಿಸಬೇಕು ಎಂದರು.

ಜೇವರ್ಗಿಯ ಉಪನ್ಯಾಸಕ ಡಾ.ನಿಜಲಿಂಗ ದೊಡ್ಮನಿ ಹಾಗೂ ಬೆಂಗಳೂರಿನ ವಕೀಲೆ ಭೀಮಪುತ್ರಿ ಸಾವಿತ್ರಿ ಇತರರು ಮಾತನಾಡಿದರು. ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ಸುರಪುರ ಅರಸು ಮನೆತನದ ರಾಜಾ ಲಕ್ಷ್ಮೀನಾರಾಯಣ ನಾಯಕ ಉಪಸ್ಥಿತರಿದ್ದರು.

ವರಜ್ಯೋತಿ ಬಂತೇಜಿ ತ್ರಿಸರಣ ಪಂಚಶೀಲ ಪಠಣ ಮಾಡುವ ಮೂಲಕ ಕಾರ್ಯಕ್ರಮ ಸಮಾರೋಪಗೊಳಿಸಲಾಯಿತು. ಸಮಿತಿ ಅಧ್ಯಕ್ಷ ವೈಜನಾಥ ಹೊಸ್ಮನಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದ ವೇದಿಕೆಯಲ್ಲಿ ಟಿಹೆಚ್‌ಓ ಡಾ.ಆರ್.ವಿ.ನಾಯಕ, ವೆಂಕೋಬ ಯಾದವ್, ಸೂಗುರೇಶ ವಾರದ್, ಶ್ರೀನಿವಾಸ ನಾಯಕ ಬೊಮ್ಮನಹಳ್ಳಿ, ನಗರಸಭೆ ಸದಸ್ಯ ಶಿವಕುಮಾರ ಕಟ್ಟಿಮನಿ, ಮಾಜಿ ಸದಸ್ಯ ವೆಂಕಟೇಶ ಹೊಸ್ಮನಿ,ಕ್ಷೇತ್ರಸಮನ್ವಯಾಧಿಕಾರಿ ಪಂಡೀತ ನಿಂಬೂರ, ಮಾನಪ್ಪ ಕಟ್ಟಿಮನಿ, ವೆಂಕಟೇಶ್ವರ ಸುರಪುರ, ಆದಪ್ಪ ಹೊಸ್ಮನಿ, ಭೀಮರಾಯ ಸಿಂದಗೇರಿ, ಶಂಕ್ರಪ್ಪ ಶಾಖಾನವರ್ ಸೇರಿದಂತೆ ಅನೇಕ ಮುಖಂಡರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಸಮಿತಿಯ ಎಲ್ಲಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

ಡಾ.ಬಿ.ಆರ್ ಅಂಬೇಡ್ಕರ್ ಅವರ 134ನೇ ಜಯಂತಿ ಅಂಗವಾಗಿ ಸುರಪುರ ನಗರದಲ್ಲಿ ಡಾ.ಬಾಬಾ ಸಾಹೇಬ್‌ ಅಂಬೇಡ್ಕರ್ ಅವರ ಭಾವಚಿತ್ರದ ಅದ್ದೂರಿ ಮೆರವಣಿಗೆ ನಡೆಸಲಾಯಿತು. ನಗರಾದ್ಯಂತ ನಡೆದ ಮೆರವಣಿಗೆಯಲ್ಲಿ ಸಾವಿರಾರು ಜನ ಅಂಬೇಡ್ಕರ್ ಅಭಿಮಾನಿಗಳು ಭಾಗವಹಿಸಿದ್ದರು. ಎಲ್ಲೆಡೆ ನೀಲಿ ಧ್ವಜಗಳ ಹಾರಾಟ ಕಂಡುಬಂತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X