Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. Yadgiri | ಮಳೆ ನಡುವೆಯೂ 33...

Yadgiri | ಮಳೆ ನಡುವೆಯೂ 33 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ

ವಾರ್ತಾಭಾರತಿವಾರ್ತಾಭಾರತಿ7 Aug 2026 6:44 PM IST
share
Yadgiri | ಮಳೆ ನಡುವೆಯೂ 33 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ
ಖಾಸಗಿ ಬೋರ್‌ವೆಲ್‌ಗಳಿಂದ ನೀರು ಪೂರೈಕೆ

ಯಾದಗಿರಿ : ಜಿಲ್ಲೆಯಲ್ಲಿ ಉತ್ತಮ ಮುಂಗಾರು ಮಳೆಯಾಗುತ್ತಿದ್ದರೂ ಹುಣಸಗಿ, ಗುರುಮಠಕಲ್, ವಡಗೇರಾ ಹಾಗೂ ಯಾದಗಿರಿ ತಾಲೂಕಿನ 23 ಗ್ರಾಮ ಪಂಚಾಯಿತಿ ವ್ಯಾಪ್ತಿಯ 33 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಮುಂದುವರಿದಿದೆ. ಈ ಗ್ರಾಮಗಳಿಗೆ ಖಾಸಗಿ ಬೋರ್‌ವೆಲ್‌ಗಳನ್ನು ಬಾಡಿಗೆಗೆ ಪಡೆದು ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲವೀಶ್ ಒರಡಿಯಾ ತಿಳಿಸಿದ್ದಾರೆ.

ನೀರಿನ ಸಮಸ್ಯೆ ಎದುರಿಸುತ್ತಿರುವ ಗ್ರಾಮಗಳಲ್ಲಿ ಗ್ರಾಮ ಪಂಚಾಯಿತಿಗಳ ಮೂಲಕ ಖಾಸಗಿ ಬೋರ್‌ವೆಲ್‌ಗಳಿಂದ ನೀರು ಸರಬರಾಜು ಮಾಡಲಾಗುತ್ತಿದ್ದು, ಪ್ರತಿ ಬೋರ್‌ವೆಲ್‌ಗೆ ತಿಂಗಳಿಗೆ 10 ಸಾವಿರ ರೂ. ಬಾಡಿಗೆ ಪಾವತಿಸಲಾಗುತ್ತಿದೆ. ಮಳೆ ಆರಂಭವಾದರೂ ಕೆಲವು ಭಾಗಗಳಲ್ಲಿ ಅಂತರ್ಜಲ ಮಟ್ಟ ನಿರೀಕ್ಷಿತ ಮಟ್ಟಕ್ಕೆ ಏರಿಕೆಯಾಗದ ಕಾರಣ ಈ ವ್ಯವಸ್ಥೆಯನ್ನು ಮುಂದುವರಿಸಲಾಗಿದೆ ಎಂದು ಅವರು ಹೇಳಿದರು.

ಜಿಲ್ಲೆಯಲ್ಲಿ ಒಟ್ಟು 471 ಆರ್‌ಒ ಘಟಕಗಳಿದ್ದು, ಅವುಗಳಲ್ಲಿ 344 ಕಾರ್ಯನಿರ್ವಹಿಸುತ್ತಿವೆ. ಉಳಿದ 127 ಘಟಕಗಳಿಗೆ ದುರಸ್ತಿ ಅಗತ್ಯವಿದ್ದು, ಅವುಗಳಲ್ಲಿ 77 ಘಟಕಗಳ ದುರಸ್ತಿಗಾಗಿ 3.10 ಕೋಟಿ ರೂ. ವೆಚ್ಚದ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ. ಅನುದಾನ ಬಿಡುಗಡೆಯಾದ ಬಳಿಕ ದುರಸ್ತಿ ಕಾಮಗಾರಿ ಆರಂಭಿಸಲಾಗುವುದು ಎಂದು ತಿಳಿಸಿದರು.

ಇದಲ್ಲದೆ, ಸಂಪೂರ್ಣವಾಗಿ ಹಾಳಾಗಿರುವ 50 ಆರ್‌ಒ ಘಟಕಗಳನ್ನು ಹರಾಜು ಮಾಡಲು ಗ್ರಾಮ ಪಂಚಾಯಿತಿಗಳಿಗೆ ಸೂಚನೆ ನೀಡಲಾಗಿದೆ. ಹರಾಜಿನಿಂದ ಬರುವ ಹಣವನ್ನು ಆರ್‌ಒ ಘಟಕಗಳ ನಿರ್ವಹಣೆ ಹಾಗೂ ದುರಸ್ತಿಗೆ ಬಳಸಲಾಗುವುದು ಎಂದು ಹೇಳಿದರು.

ಕುಡಿಯುವ ನೀರಿನ ಸಮಸ್ಯೆ ಮತ್ತಷ್ಟು ಉಲ್ಬಣವಾಗದಂತೆ ಅಧಿಕಾರಿಗಳು ಗ್ರಾಮಗಳ ಪರಿಸ್ಥಿತಿಯನ್ನು ನಿರಂತರವಾಗಿ ಪರಿಶೀಲಿಸುತ್ತಿದ್ದು, ಅಗತ್ಯವಿದ್ದರೆ ಹೆಚ್ಚುವರಿ ಖಾಸಗಿ ಬೋರ್‌ವೆಲ್‌ಗಳನ್ನು ಬಾಡಿಗೆಗೆ ಪಡೆದು ನೀರು ಪೂರೈಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಲವೀಶ್ ಒರಡಿಯಾ ತಿಳಿಸಿದ್ದಾರೆ.

Tags

drinking waterYadgiri
share
ವಾರ್ತಾಭಾರತಿ
ವಾರ್ತಾಭಾರತಿ
Next Story
X