Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. Yadgiri | ಎಸ್‌ಐಆರ್‌ ರದ್ದತಿಗೆ...

Yadgiri | ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ ಅ.16ರಂದು ಡಿಎಸ್ಎಸ್ ಪ್ರತಿಭಟನೆ : ಶಿವಪುತ್ರ ಜವಳಿ

ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಕ್ರಮಕ್ಕೆ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ15 Oct 2026 5:35 PM IST
share
Yadgiri | ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ ಅ.16ರಂದು ಡಿಎಸ್ಎಸ್ ಪ್ರತಿಭಟನೆ : ಶಿವಪುತ್ರ ಜವಳಿ

ಯಾದಗಿರಿ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯಲ್ಲಿ ಕಾನೂನು ಉಲ್ಲಂಘನೆಗಳು ನಡೆದಿವೆ ಹಾಗೂ ಚುನಾವಣಾ ಆಯೋಗದ ನಿರ್ಧಾರಗಳು ಏಕಪಕ್ಷೀಯವಾಗಿವೆ ಎಂದು ಆರೋಪಿಸಿ, ಅಕ್ಟೋಬರ್ 16ರಂದು ದಲಿತ ಸಂಘರ್ಷ ಸಮಿತಿ (ಡಿಎಸ್ಎಸ್) ವತಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಜಿಲ್ಲಾ ಸಂಚಾಲಕ ಶಿವಪುತ್ರ ಜವಳಿ ತಿಳಿಸಿದ್ದಾರೆ.

ಎಸ್‌ಐಆರ್‌ ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಇತರ ಇಬ್ಬರು ಚುನಾವಣಾ ಆಯುಕ್ತರೊಂದಿಗೆ ಸಮಾಲೋಚನೆ ನಡೆಸದೆ ನಿರ್ಧಾರಗಳನ್ನು ಕೈಗೊಂಡಿದ್ದಾರೆ ಎಂಬ ಆರೋಪಗಳ ಕುರಿತು ಸಮಗ್ರ ತನಿಖೆ ನಡೆಸಬೇಕು. ಆರೋಪಗಳು ಸಾಬೀತಾದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಂಡು ಅವರನ್ನು ಹುದ್ದೆಯಿಂದ ವಜಾಗೊಳಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಹೊಸ ಮತದಾರರು ನೋಂದಣಿಗಾಗಿ ಸಲ್ಲಿಸುವ ಫಾರಂ-6ಕ್ಕೆ ಎಸ್‌ಐಆರ್‌ ಅವಧಿಯಲ್ಲಿ ಘೋಷಣಾ ಪತ್ರಕ್ಕೆ ಸಹಿ ಹಾಕುವ ಷರತ್ತು ವಿಧಿಸಿರುವುದು ಮತದಾರರ ಹಕ್ಕುಗಳಿಗೆ ಅಡ್ಡಿಯಾಗಬಹುದು ಎಂದು ಸಮಿತಿ ಆಕ್ಷೇಪ ವ್ಯಕ್ತಪಡಿಸಿದೆ. ಈ ನಿರ್ಧಾರದಿಂದ ಅರ್ಹ ಮತದಾರರಿಗೆ ತೊಂದರೆಯಾಗುವ ಆತಂಕವಿದ್ದು, ಮತದಾರರ ನೋಂದಣಿ ಪ್ರಕ್ರಿಯೆ ಪಾರದರ್ಶಕವಾಗಿ ಹಾಗೂ ಕಾನೂನುಬದ್ಧವಾಗಿ ನಡೆಯಬೇಕು ಎಂದು ಆಗ್ರಹಿಸಿದೆ.

ದೇಶದ ವಿವಿಧ ರಾಜ್ಯಗಳಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಅಕ್ರಮಗಳು ಹಾಗೂ ಕಾನೂನು ಉಲ್ಲಂಘನೆಗಳು ನಡೆದಿವೆ ಎಂಬ ಆರೋಪಗಳು ಕೇಳಿಬಂದಿವೆ. ಚುನಾವಣಾ ಆಯೋಗದ ನಿರ್ಧಾರಗಳು ಪ್ರಜಾಸತ್ತಾತ್ಮಕ ಮೌಲ್ಯಗಳಿಗೆ ಅನುಗುಣವಾಗಿರಬೇಕು. ಮತದಾನದ ಹಕ್ಕನ್ನು ರಕ್ಷಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಡಿಎಸ್ಎಸ್ ಮುಖಂಡರು ಒತ್ತಾಯಿಸಿದ್ದಾರೆ.

ಎಸ್‌ಐಆರ್‌ ಪ್ರಕ್ರಿಯೆಯಿಂದ ದೇಶದಲ್ಲಿ 13 ಕೋಟಿಗೂ ಅಧಿಕ ಮತದಾರರ ಹಕ್ಕುಗಳಿಗೆ ಧಕ್ಕೆಯಾಗಿದೆ ಎಂದು ಸಮಿತಿ ಆರೋಪಿಸಿದೆ. ಈ ಆರೋಪದ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಸ್ಪಷ್ಟನೆ ನೀಡಬೇಕು ಹಾಗೂ ಮತದಾರರ ಹಕ್ಕುಗಳ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮುಖಂಡರು ಆಗ್ರಹಿಸಿದ್ದಾರೆ.

ಅಕ್ಟೋಬರ್ 16ರಂದು ನಡೆಯಲಿರುವ ಪ್ರತಿಭಟನೆಯಲ್ಲಿ ಸಮಿತಿಯ ಪದಾಧಿಕಾರಿಗಳು, ಸಂಚಾಲಕರು ಹಾಗೂ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಮತದಾರರ ಹಕ್ಕುಗಳ ರಕ್ಷಣೆ, ಚುನಾವಣಾ ಪ್ರಕ್ರಿಯೆಯ ಪಾರದರ್ಶಕತೆ ಮತ್ತು ಚುನಾವಣಾ ಆಯೋಗದ ನಿರ್ಧಾರಗಳ ಕುರಿತು ಹೊಣೆಗಾರಿಕೆ ನಿಗದಿಪಡಿಸುವಂತೆ ಪ್ರತಿಭಟನೆಯ ಮೂಲಕ ಒತ್ತಾಯಿಸಲಾಗುವುದು ಎಂದು ಮುಖಂಡರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕ ಶಿವಪುತ್ರ ಜವಳಿ, ಚಂದಪ್ಪ ಮುನಪ್ಪನೋರ, ಶಿವಲಿಂಗ ಹಸನಾಪುರ, ಮರೆಪ್ಪ ಕ್ರಾಂತಿ, ಮಲ್ಲಪ್ಪ ಪೂಜಾರಿ ಕುರಕುಂದಾ, ದೇವ್ರು ಹುಲ್ಕಲ್ (ಜೆ), ಜಿಲ್ಲಾ ಮುಖಂಡ ಶರಣಪ್ಪ ಮಾಲಹಳ್ಳಿ, ತಾಲೂಕು ಸಂಚಾಲಕ ಭೀಮಾಶಂಕರ ಗುಂಡಳ್ಳಿ, ತಾಯಪ್ಪ ಭಂಡಾರಿ, ನಾಗರಾಜ ಕೋಡಮನಹಳ್ಳಿ ಹಾಗೂ ಸಂತೋಷ ಗುಂಡಳ್ಳಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Tags

SIRprotestDSSYadgiri
share
ವಾರ್ತಾಭಾರತಿ
ವಾರ್ತಾಭಾರತಿ
Next Story
X