ಯಾದಗಿರಿ | ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಿ : ಸಿಇಓ ಲವೀಶ್ ಒರಡಿಯಾ

ಯಾದಗಿರಿ : ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಿ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲವೀಶ್ ಒರಡಿಯಾ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಯಪಾಡ ಗ್ರಾಮ ಪಂಚಾಯಿತಿಯ ಸಭಾಂಗಣದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸರ್ವ ಸದಸ್ಯರ ಸಭೆಯಲ್ಲಿ ಕುಡಿಯುವ ನೀರಿನ ಸಮಸ್ಯೆ, ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ, ಕಾಮಗಾರಿಗಳು, ಸ್ವಚ್ಛ ಭಾರತ್ ಮಿಷನ್, ಕರ ವಸೂಲಿ ಸೇರಿದಂತೆ ಇನ್ನಿತರ ವಿಷಯಗಳು ಕುರಿತು ಅವರು ಮಾತನಾಡಿದರು.
ನಂತರ ಕೂಸಿನ ಮನೆ, ಗ್ರಂಥಾಲಯಕ್ಕೆ ಭೇಟಿ ನೀಡಿ ಮೂಲಸೌಕರ್ಯಗಳನ್ನು ವೀಕ್ಷಿಸಿದರು. ಯಂಪಾಡ ಮತ್ತು ಸುಭಾಷ್ ನಗರದಲ್ಲಿ ನಡೆಯುತ್ತಿರುವ ಹಳ್ಳ ಹೊಳೆತ್ತುವ ಕಾಮಗಾರಿ ವೀಕ್ಷಿಸಿ ಕೂಲಿಕಾರ ಸಮಸ್ಯೆಗಳು ಆಲಿಸಿದರು.
ಕಂದಕೂರ ಗ್ರಾಮ ಪಂಚಾಯತಿಗೆ ತೆರಳಿ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಸ್ವಚ್ಛತೆ, ಮೂಲ ಸೌಕರ್ಯಗಳು ಸೇರಿದಂತೆ ಇನ್ನಿತರ ಸೌಲಭ್ಯಗಳ ಕುರಿತು ಪರಿಶೀಲಿಸಿದರು. ವೈದ್ಯಾಧಿಕಾರಿಗಳಿಗೆ ಮತ್ತು ಶುಶ್ರೂಕರಿಗೆ ಸಾರ್ವಜನಿಕರಿಗೆ ನೀಡುತ್ತಿರುವ ಚಿಕಿತ್ಸೆ ಬಗ್ಗೆ ಮತ್ತು ಅಂಬುಲೆನ್ಸ್ ಸೇವೆ ಬಗ್ಗೆ ವಿಚಾರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರಾದ ಶ್ರೀಸಿ.ಬಿ.ದೇವರಮನಿ, ಗುರುಮಠಕಲ್ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಅಂಬ್ರೇಶ್ ಪಾಟೀಲ್, ತಾಲೂಕು ಸಹಾಯಕ ನಿರ್ದೇಶಕ ರಾಮಚಂದ್ರ ಬಸೂದೆ, ತಾಂತ್ರಿಕ ಸಂಯೋಜಕ ಮುಜಾಮಿಲ್, ತಾಂತ್ರಿಕ ಸಹಾಯಕರು, ಬಿಎಫ್ಟಿಗಳು, ಜಿಕೆಎಮ್ ಮತ್ತು ಕಾಯಕ ಬಂಧುಗಳು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.