Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. Yadgiri | ರೈತರು ಕಡ್ಡಾಯವಾಗಿ ಬೆಳೆ...

Yadgiri | ರೈತರು ಕಡ್ಡಾಯವಾಗಿ ಬೆಳೆ ವಿಮೆ ಮಾಡಿಸಿಕೊಳ್ಳಿ: ಚಂದ್ರಶೇಖರಗೌಡ ಮಾಗನೂರ

ವಾರ್ತಾಭಾರತಿವಾರ್ತಾಭಾರತಿ10 July 2026 4:52 PM IST
share
Yadgiri | ರೈತರು ಕಡ್ಡಾಯವಾಗಿ ಬೆಳೆ ವಿಮೆ ಮಾಡಿಸಿಕೊಳ್ಳಿ: ಚಂದ್ರಶೇಖರಗೌಡ ಮಾಗನೂರ

ಯಾದಗಿರಿ, ಜು.10: ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಮಳೆಯ ಅಭಾವದಿಂದ ಬರಗಾಲದಂತಹ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ರೈತರು ರಾಜ್ಯ ಸರ್ಕಾರದ ಯೋಜನೆಗಳ ಜೊತೆಗೆ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಕಡ್ಡಾಯವಾಗಿ ಬೆಳೆ ವಿಮೆ ಮಾಡಿಸಿಕೊಳ್ಳಬೇಕು ಎಂದು ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಚಂದ್ರಶೇಖರಗೌಡ ಮಾಗನೂರ ಸಲಹೆ ನೀಡಿದರು.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಬೆಳೆ ನಷ್ಟದ ಕುರಿತು ಕೃಷಿ ಇಲಾಖೆಯಿಂದ ಸಮಗ್ರ ಮಾಹಿತಿ ಪಡೆದು ಗ್ರಾಮ ಮಟ್ಟ, ನಾಡ ಕಚೇರಿ, ಜಂಟಿ ಕೃಷಿ ನಿರ್ದೇಶಕರ ಕಚೇರಿ, ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಹಾಗೂ ಹೋಬಳಿ ಮಟ್ಟದ ಕೃಷಿ ಅಧಿಕಾರಿಗಳ ಮೂಲಕ ನಿಗದಿತ ಅವಧಿಯೊಳಗೆ ಬೆಳೆ ವಿಮೆ ಮಾಡಿಸಿಕೊಳ್ಳಬೇಕು ಎಂದು ಹೇಳಿದರು.

ಮುಂಗಾರು ವಿಳಂಬದಿಂದ ಉಂಟಾಗುವ ನಷ್ಟದಿಂದ ರಕ್ಷಣೆ ಪಡೆಯಲು ರಾಜ್ಯ ಹಾಗೂ ಕೇಂದ್ರ ಸರ್ಕಾರದ ಯೋಜನೆಗಳ ಸೌಲಭ್ಯವನ್ನು ರೈತರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರೈತರು ಸದ್ಯ ಉಳುಮೆ ಮಾಡಬಾರದು ಎಂದು ಹೇಳಿರುವುದನ್ನು ಟೀಕಿಸಿದ ಅವರು, ರಾಜ್ಯದ ಶೇ.70ಕ್ಕೂ ಹೆಚ್ಚು ಜನರು ಕೃಷಿಯನ್ನು ಅವಲಂಬಿಸಿದ್ದಾರೆ. ಬಿತ್ತನೆ ಮಾಡದಿದ್ದರೆ ರೈತರು ಬದುಕುವುದು ಹೇಗೆ? ಸರ್ಕಾರವೇ ಬಿತ್ತನೆ ಮಾಡಬೇಡಿ ಎಂದು ಹೇಳುವುದಾದರೆ ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ಘೋಷಿಸಬೇಕು ಎಂದು ಆಗ್ರಹಿಸಿದರು.

ರಾಜ್ಯದಲ್ಲಿ ಇದುವರೆಗೆ ಕೃಷಿ ಸಚಿವರನ್ನು ನೇಮಿಸದಿರುವುದನ್ನೂ ಪ್ರಶ್ನಿಸಿದ ಅವರು, ಕಲ್ಯಾಣ ಕರ್ನಾಟಕ ಭಾಗದ ಬಗ್ಗೆ ಸರ್ಕಾರಕ್ಕೆ ನಿಜವಾದ ಕಾಳಜಿ ಇದ್ದರೆ ಕೂಡಲೇ ಕೃಷಿ ಸಚಿವರನ್ನು ನೇಮಿಸಿ ರೈತರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಒತ್ತಾಯಿಸಿದರು.

ಸುರಪುರ ತಾಲ್ಲೂಕಿನ ನಾರಾಯಣಪುರ ಬಸವಸಾಗರ ಜಲಾಶಯದ ವ್ಯಾಪ್ತಿಯಲ್ಲಿ ಸುಮಾರು 4 ಲಕ್ಷ ಹೆಕ್ಟೇರ್ ನೀರಾವರಿ ಪ್ರದೇಶವಿದ್ದರೂ ಜಲಾಶಯಕ್ಕೆ ನೀರಿನ ಒಳಹರಿವು ಶೂನ್ಯವಾಗಿದೆ. ಕುಡಿಯುವ ನೀರಿಗಾಗಿ ಮಾತ್ರ ನೀರನ್ನು ಕಾಯ್ದಿರಿಸಲಾಗಿದ್ದು, ಅಲ್ಪ ಪ್ರಮಾಣದ ಮಳೆಯನ್ನು ನಂಬಿ ಈಗಾಗಲೇ ಶೇ.95ರಷ್ಟು ರೈತರು ಬಿತ್ತನೆ ಮಾಡಿದ್ದಾರೆ. ಮುಖ್ಯಮಂತ್ರಿ ಕಲ್ಯಾಣ ಕರ್ನಾಟಕ ಭಾಗಕ್ಕೆ ಭೇಟಿ ನೀಡಿ ರೈತರೊಂದಿಗೆ ವಿಶೇಷ ಸಭೆ ನಡೆಸಿ ಅವರ ಅಹವಾಲು ಆಲಿಸಬೇಕು ಎಂದು ಮಾಗನೂರ ಒತ್ತಾಯಿಸಿದರು.

Tags

farmersYadgiri
share
ವಾರ್ತಾಭಾರತಿ
ವಾರ್ತಾಭಾರತಿ
Next Story
X