Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. Yadgiri | ಕಳ್ಳತನ ಪ್ರಕರಣಗಳ ತನಿಖೆಗೆ...

Yadgiri | ಕಳ್ಳತನ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿ: ಉಮೇಶ್ ಮುದ್ನಾಳ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ11 July 2026 5:41 PM IST
share
Yadgiri | ಕಳ್ಳತನ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿ: ಉಮೇಶ್ ಮುದ್ನಾಳ ಆಗ್ರಹ
ಮನೆ, ಬೈಕ್ ಹಾಗೂ ಜಾನುವಾರು ಕಳ್ಳತನ ಹೆಚ್ಚಳ ಹಿನ್ನೆಲೆ ಎಸ್‌ಪಿಗೆ ಮನವಿ

ಯಾದಗಿರಿ : ಜಿಲ್ಲೆಯಾದ್ಯಂತ ಮನೆಗಳು, ದ್ವಿಚಕ್ರ ವಾಹನಗಳು, ದನ-ಕರುಗಳು ಹಾಗೂ ಕುರಿಗಳ ಕಳ್ಳತನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರೋಪಿಗಳನ್ನು ಪತ್ತೆಹಚ್ಚಿ ಕಾನೂನು ಕ್ರಮ ಜರುಗಿಸಲು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸುವಂತೆ ಸಾಮಾಜಿಕ ಹೋರಾಟಗಾರ ಉಮೇಶ್ ಕೆ. ಮುದ್ನಾಳ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಬೀಗ ಹಾಕಿದ ಮನೆಗಳು, ಬೈಕ್‌ಗಳು, ದನ-ಕರುಗಳು ಹಾಗೂ ಕುರಿಗಳ ಕಳ್ಳತನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಸಾರ್ವಜನಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಜಾನುವಾರುಗಳ ಬೆಲೆ ಹೆಚ್ಚಿರುವ ಕಾರಣ ಅವುಗಳನ್ನು ಕಳವು ಮಾಡಿ ಮಾರಾಟ ಮಾಡುವ ಸಂಘಟಿತ ಜಾಲ ಕಾರ್ಯನಿರ್ವಹಿಸುತ್ತಿರುವ ಶಂಕೆಯಿದ್ದು, ರೈತರು ಹಾಗೂ ಸಾರ್ವಜನಿಕರು ಭಯದ ವಾತಾವರಣದಲ್ಲಿ ಬದುಕುವಂತಾಗಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಕಳ್ಳತನ ಪ್ರಕರಣಗಳನ್ನು ಭೇದಿಸಲು ಅನುಭವಿ ಹಾಗೂ ನುರಿತ ಅಧಿಕಾರಿಗಳನ್ನೊಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಿ, ಸಂಘಟಿತ ಕಳ್ಳರ ಜಾಲವನ್ನು ಪತ್ತೆಹಚ್ಚಿ ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು. ಇದರಿಂದ ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸುವುದರ ಜೊತೆಗೆ ಕಳ್ಳತನ ಪ್ರಕರಣಗಳಿಗೆ ಶಾಶ್ವತವಾಗಿ ಕಡಿವಾಣ ಹಾಕಲು ಸಾಧ್ಯವಾಗಲಿದೆ ಎಂದು ಒತ್ತಾಯಿಸಿದ್ದಾರೆ.

ಇತ್ತೀಚೆಗೆ ಬಳಿಚಕ್ರ ಗ್ರಾಮದಲ್ಲಿ ಮಧ್ಯರಾತ್ರಿ ಬೈಕ್ ಕಳ್ಳತನಕ್ಕೆ ಬಂದಿದ್ದ ಒಬ್ಬ ಆರೋಪಿಯನ್ನು ಗ್ರಾಮಸ್ಥರು ಬೆನ್ನಟ್ಟಿ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆಯನ್ನು ಉಲ್ಲೇಖಿಸಿರುವ ಅವರು, ಜೀವದ ಹಂಗು ತೊರೆದು ಕಳ್ಳನನ್ನು ಸೆರೆಹಿಡಿದ ಗ್ರಾಮಸ್ಥರ ಕಾರ್ಯ ಶ್ಲಾಘನೀಯವಾಗಿದೆ ಎಂದು ಹೇಳಿದ್ದಾರೆ. ಆದರೆ, ಇತರ ಆರೋಪಿಗಳು ಪರಾರಿಯಾಗಿರುವ ಹಿನ್ನೆಲೆಯಲ್ಲಿ ಈ ಕೃತ್ಯದ ಹಿಂದಿರುವ ಸಂಘಟಿತ ಜಾಲವನ್ನು ಪತ್ತೆಹಚ್ಚಲು ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

ಜಿಲ್ಲೆಯಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಪೊಲೀಸ್ ಇಲಾಖೆಯ ಕೆಳಮಟ್ಟದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡುವಂತೆ ಹಾಗೂ ಅಗತ್ಯ ಸುತ್ತೋಲೆ ಹೊರಡಿಸುವಂತೆ ಮನವಿ ಮಾಡಿದ್ದಾರೆ.

ಈ ಮನವಿಯ ಪ್ರತಿಯನ್ನು ರಾಜ್ಯ ಗೃಹ ಸಚಿವರು, ಕಲಬುರಗಿ ಪ್ರಾದೇಶಿಕ ಆಯುಕ್ತರು ಹಾಗೂ ಯಾದಗಿರಿ ಜಿಲ್ಲಾಧಿಕಾರಿಗಳಿಗೆ ಮಾಹಿತಿಗಾಗಿ ಮತ್ತು ಅಗತ್ಯ ಕ್ರಮಕ್ಕಾಗಿ ಸಲ್ಲಿಸಲಾಗಿದೆ.

ಈ ಸಂದರ್ಭದಲ್ಲಿ ವೀರಭದ್ರಪ್ಪ, ಪರಸಪ್ಪ, ಈರಪ್ಪಗೌಡ, ಮಲ್ಲಿಕಾರ್ಜುನ, ಸಾಯಿಬಣ್ಣ, ಗನ್ ಶಾಮ್, ಆಕಾಶ, ಅಕ್ರಮ, ನಯಿಮ್, ಅಜೀಜ್, ವೆಂಕಟೇಶ, ಅಯ್ಯಣ್ಣ, ಬನ್ನಪ್ಪ ಶರಣಪ್ಪ, ಗಣೇಶ್, ಸಲಿಂ, ಮಹೇಶ್, ವಿನೋದ, ಮೌನೇಶ, ಅಜಯ, ಕುಮಾರ್, ಆಕಾಶ, ಸೇರಿದಂತೆ ಅನೇಕರು ಇದ್ದರು.

Tags

Yadgiri
share
ವಾರ್ತಾಭಾರತಿ
ವಾರ್ತಾಭಾರತಿ
Next Story
X