Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ಸರಕಾರಿ ಶಾಲೆಗಳಿಗೆ ಬೇಕಾದ...

ಯಾದಗಿರಿ | ಸರಕಾರಿ ಶಾಲೆಗಳಿಗೆ ಬೇಕಾದ ಮೂಲ ಸೌಲಭ್ಯ ಕಲಿಸ್ಪಲು ನಾನು ಬದ್ಧ : ಶಾಸಕ ಶರಣಗೌಡ ಕಂದಕೂರ

ವಾರ್ತಾಭಾರತಿವಾರ್ತಾಭಾರತಿ1 July 2025 7:57 PM IST
share
ಯಾದಗಿರಿ | ಸರಕಾರಿ ಶಾಲೆಗಳಿಗೆ ಬೇಕಾದ ಮೂಲ ಸೌಲಭ್ಯ ಕಲಿಸ್ಪಲು ನಾನು ಬದ್ಧ : ಶಾಸಕ ಶರಣಗೌಡ ಕಂದಕೂರ

ಯಾದಗಿರಿ: ಸರಕಾರಿ ಶಾಲೆಗಳಿಗೆ ಬೇಕಾದ ಮೂಲ ಸೌಲಭ್ಯ ಕಲಿಸ್ಪಲು ನಾನು ಬದ್ಧನಾಗಿದ್ದೇನೆ ಆದರೆ ಅದಕ್ಕೆ ಪೂರಕವಾಗಿ ಶಿಕ್ಷಣದ ಗುಣಮಟ್ಟ ಸುಧಾರಿಸಿ ಎಸ್ಸೆಸ್ಸೆಲ್ಸಿ ಫಲಿತಾಂಶ ಉತ್ತಮವಾಗಿ ಬರಬೇಕು ಎಂದು ಶಾಸಕ ಶರಣಗೌಡ ಕಂದಕೂರ ಅವರು ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿ ಮತ್ತು ಶಿಕ್ಷಕರಿಗೆ ತಾಕೀತು ಮಾಡಿದರು.

ಗುರುಮಠಕಲ್ ಮತಕ್ಷೇತ್ರದ ಲಿಂಗೇರಿ ಸ್ಟೇಷನ್, ಬಳಿಚಕ್ರ, ಮಾಧ್ವಾರ, ಕೊಂಕಲ್, ಪುಟ್ ಪಾಕ್ ಪ್ರೌಢ ಶಾಲೆಗಳಿಗೆ ಭೇಟಿ ನೀಡಿದ ಅವರು, ಅಲ್ಲಿನ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಮಾತನಾಡಿದರು.

ಶಿಕ್ಷಕರು ಮಕ್ಕಳಿಗೆ ಮಾತ್ರವಲ್ಲದೆ ನಮ್ಮಂತವರಿಗೂ ಮಾದರಿಯಾಗಿಬೇಕು. ನಾವೆಲ್ಲ ಬಡತನ ಹಿನ್ನಲೆಯಿಂದ ಬಂದವರು, ನಮ್ಮಲ್ಲಿ ಬಹುತೇಕ ಪಾಲಕರು ಅನಕ್ಷರಸ್ಥರಾಗಿದ್ದಾರೆ ಅವರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಬೇಕಾದ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ಸೂಚಿಸಿದರು.

ಶಿಕ್ಷಣದ ಬುನಾದಿ ಪ್ರಾಥಮಿಕ ಶಿಕ್ಷಣವಾಗಿದ್ದು ಇದನ್ನು ಸುಧಾರಣೆ ಮಾಡಬೇಕಾದ ಮಹತ್ತರ ಜವಾಬ್ದಾರಿ ಪ್ರಾಥಮಿಕ ಶಿಕ್ಷಕರ ಮೇಲಿದೆ. ಎಸೆಸೆಲ್ಸಿ ಫಲಿತಾಂಶ ಕುಸಿಯುವಲ್ಲಿ ಪ್ರಾಥಮಿಕ ಶಾಲಾ ಶಿಕ್ಷಣದ ವೈಫಲ್ಯ ಪ್ರಮುಖ ಕಾರಣವಾಗಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಹೀಗೆ ಒಬ್ಬರ ಮೇಲೆ ಮತ್ತೊಬ್ಬರು ಆರೋಪ ಮಾಡುವುದು ಬಿಟ್ಟು ಒಗ್ಗಟ್ಟಾಗಿ ಸುಧಾರಣೆ ಮಾಡುವ ಅಗತ್ಯವಿದೆ. ನಮ್ಮ ಭಾಗದಲ್ಲಿ ಶಿಸ್ತು, ಶಿಕ್ಷಣ ಮತ್ತು ಆರೋಗ್ಯ ಸುಧಾರಣೆ ಆಗಬೇಕು ಎಂದು ತಿಳಿಸಿದರು.

ವಿದ್ಯಾರ್ಥಿಗಳ ಹಾಜರಾತಿ ಸರಿಯಾಗಿ ನೋಡಿಕೊಳ್ಳಬೇಕು. ಹೆಣ್ಣು ಮಕ್ಕಳು ಯಾವುದೇ ಕಾರಣಕ್ಕೂ ಬಾಲ್ಯ ವಿವಾಹ ಮಾಡಿಕೊಳ್ಳಬಾರದು. ಒಂದು ವೇಳೆ ಯಾರಾದರೂ ಒತ್ತಾಯ ಮಾಡಿದರೆ ಟಾಲ್ ಫ್ರೀ ಸಂಖ್ಯೆಗೆ ಕರೆ ಮಾಡಿ ದೂರು ನೀಡುವಂತೆ ವಿದ್ಯಾರ್ಥಿಗಳಿಗೆ ಸೂಚಿಸಿದರು.

ಪ್ರಥಮವಾಗಿ ಲಿಂಗೇರಿ ಸ್ಟೇಷನ್ ಪ್ರೌಢ ಶಾಲೆಗೆ ಭೇಟಿ ನೀಡಿದ ಶಾಸಕರು ಅಲ್ಲಿ ಮಕ್ಕಳೊಂದಿಗೆ ಬೆಳಗಿನ ಪ್ರಾರ್ಥನೆಯಲ್ಲಿ ಭಾಗವಹಿಸಿದ ಅವರು, ತರುವಾಯ ರಾಗಿ ಮಾಲ್ಟ್ ಮತ್ತು ಹಾಲು ಮಕ್ಕಳೊಂದಿಗೆ ಸವಿದರು. ನಂತರ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಶುದ್ಧ ಕುಡಿಯುವ ನೀರು, ಸಾರಿಗೆ ಬಸ್, ಆಟದ ಮೈದಾನ, ಶೌಚಾಲಯ, ದೈಹಿಕ ಶಿಕ್ಷಕರ ನಿಯೋಜನೆ ಇತ್ಯಾದಿ ಸಮಸ್ಯೆಗಳನ್ನು ಹೇಳಿಕೊಂಡರು. ನಿಮ್ಮೆಲ್ಲಾ ಬೇಡಿಕೆಗಳನ್ನು ಕೂಡಲೇ ಇತ್ಯರ್ಥ ಮಾಡಲಾಗುವುದು ಆದರೆ ನೀವು ನನಗೆ ಉತ್ತಮ ಫಲಿತಾಂಶ ಪಡೆಯಬೇಕು ಎಂದು ಶಾಸಕರು ತಿಳಿಸಿದರು.

ಕಳೆದ ವರ್ಷದ ಎಸೆಸೆಲ್ಸಿಯಲ್ಲಿ ಲಿಂಗೇರಿ ಸ್ಟೇಷನ್ ಶೇ.54, ಬಳಿಚಕ್ರ ಶೇ.43, ಮಾಧ್ವಾರ ಶೇ.43, ಕೊಂಕಲ್ 28 ಫಲಿತಾಂಶ ಪಡೆದಿದೆ ಎಂದು ಮಾಹಿತಿ ಪಡೆದರು. ಶಿಕ್ಷಕರಿಗೆ ಭೋಧನೆಯೇತರ ಕೆಲಸಗಳ ಹೊರೆ ಹೆಚ್ಚಾಗುತ್ತಿದೆ ಇದಕ್ಕಾಗಿ ಮಕ್ಕಳಿಗೆ ಬೋಧನೆ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಸಿಆರ್ ಪಿ ಜಯಪಾಲರೆಡ್ಡಿ ಅವರು ತಿಳಿಸಿದರು.

ಈ ವೇಳೆ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಸಿ.ಎಸ್ ಮುಧೋಳ, ಬಿಇಒ ಹವಳಪ್ಪ ಜಾನೆ, ಬಿಆರ್ ಸಿ ಮಲ್ಲಿಕಾರ್ಜುನ ಪೂಜಾರಿ, ಶಿಕ್ಷಣ ಸಂಯೋಜಕ ಕಿಶನ್ ಪವಾರ್, ಗುರುಮಠಕಲ್ ಇಒ ಅಮರೇಶ, ಶಿಕ್ಷಣ ಇಲಾಖೆ ಜಿಲ್ಲಾ ತಾಂತ್ರಿಕ ಸಹಾಯಕರಾದ ಶರಣಗೌಡ ಆಶನಾಳ ಸೇರಿದಂತೆ ಆಯಾ ಶಾಲಾ ಮುಖ್ಯಸ್ಥರು, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಬಿಸಿಯೂಟ ಸವಿದ ಶಾಸಕ ಕಂದಕೂರ :

ಗುರುಮಠಕಲ್ ಮತಕ್ಷೇತ್ರದ ವಿವಿಧ ಶಾಲೆಗಳಿಗೆ ಭೇಟಿ ನೀಡಿದ ಶಾಸಕ ಶರಣಗೌಡ ಕಂದಕೂರ ಅವರು, ಮಾಧ್ವಾರ ಗ್ರಾಮದ ಸರಕಾರಿ ಕುವೆಂಪು ಮಾದರಿ ಶಾಲಾ ಮಕ್ಕಳೊಂದಿಗೆ ಮದ್ಯಾಹ್ನದ ಬಿಸಿಯೂಟ ಸವಿದರು. ಪ್ರತಿನಿತ್ಯ ಊಟದ ಜತೆಗೆ ಮೊಟ್ಟೆ, ಬಾಳೆಹಣ್ಣು ಸರಿಯಾಗಿ ಕೊಡುತ್ತಿರುವ ಬಗ್ಗೆ ವಿದ್ಯಾರ್ಥಿಗಳಿಂದ ಮಾಹಿತಿ ಪಡೆದರು. ಅಡುಗೆ ಸಿಬ್ಬಂದಿಗಳು ಸ್ವಚ್ಛತೆ ಕಾಪಾಡಿಕೊಳ್ಳಬೇಕು, ಇದನ್ನು ಸಮಪರ್ಕವಾಗಿ ನಿರ್ವಹಣೆ ಮಾಡುವಂತೆ ಶಿಕ್ಷಕರಿಗೆ ಸೂಚಿಸಿದರು. ಈ ಮಧ್ಯೆ ವಿದ್ಯಾರ್ಥಿಗಳು ಎದ್ದು ನಿಂತು ನೀವು ಕೊಟ್ಟ ತಟ್ಟೆಯಲ್ಲಿ ಊಟ ಮಾಡುತ್ತಿದ್ದೇವೆ ಸರ್ ಎಂದು ಸ್ಮರಿಸಿದರು. ಶಾಸಕರು ತಮ್ಮ ತಂದೆ ಮಾಜಿ ಶಾಸಕ ದಿ.ನಾಗನಗೌಡ ಕಂದಕೂರ ಅವರ ಪ್ರಥಮ ಪುಣ್ಯ ಸ್ಮರಣೆ ನಿಮಿತ್ತ ಮತಕ್ಷೇತ್ರದ ಎಲ್ಲಾ ಸರಕಾರಿ ಪ್ರೌಢ ಮತ್ತು ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಬಿಸಿಯೂಟದ ತಟ್ಟೆ ಮತ್ತು ಲೋಟ ವಿತರಣೆ ಮಾಡಿದರು.

ನಾವು ಸರಕಾರದಿಂದ ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಶಾಲಾ ಕೊಠಡಿ, ಮಧ್ಯಾಹ್ನದ ಬಿಸಿಯೂಟ, ಸಮವಸ್ತ್ರ, ಮೊಟ್ಟೆ, ಬಾಳೆಹಣ್ಣು, ಶುದ್ಧ ಕುಡಿಯುವ ನೀರು ಎಲ್ಲವನ್ನೂ ಕೊಡುತ್ತಿದ್ದೇವೆ. ಆದರೆ ಫಲಿತಾಂಶ ಮಾತ್ರ ತೀರಾ ಕಳಪೆ ಮಟ್ಟದ್ದಾಗಿದ್ದು, ಅದಕ್ಕೆ ಕಾರಣ ತಿಳಿದು ಸುಧಾರಣೆ ತರುವ ನಿಟ್ಟಿನಲ್ಲಿ ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಶಾಲೆಗಳಿಗೆ ಭೇಟಿ ನೀಡುತ್ತಿದ್ದೇನೆ.

- ಶರಣಗೌಡ ಕಂದಕೂರ ಶಾಸಕರು, ಗುರುಮಠಕಲ್.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X