Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. Yadgiri | ಅಭಿವೃದ್ಧಿ ಕಾಮಗಾರಿಗಳ...

Yadgiri | ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ: ಗುಣಮಟ್ಟಕ್ಕೆ ಆದ್ಯತೆ ನೀಡುವಂತೆ ಡಿಸಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ29 Jun 2026 5:17 PM IST
share
Yadgiri | ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ: ಗುಣಮಟ್ಟಕ್ಕೆ ಆದ್ಯತೆ ನೀಡುವಂತೆ ಡಿಸಿ ಸೂಚನೆ

ಯಾದಗಿರಿ: ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಜಿಲ್ಲಾಧಿಕಾರಿ ರಾಹುಲ್ ಪಾಂಡ್ವೆ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಯಾದಗಿರಿ–ಸೈದಾಪುರ ಜಿಲ್ಲಾ ಮುಖ್ಯ ರಸ್ತೆಯ ಮರುಡಾಂಬರೀಕರಣ ಕಾಮಗಾರಿಯನ್ನು ಗುಣಮಟ್ಟದಿಂದ ಹಾಗೂ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

2025-26ನೇ ಸಾಲಿನ ಮುಖ್ಯಮಂತ್ರಿ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ 7 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿರುವ ಯಾದಗಿರಿ–ಸೈದಾಪುರ ಜಿಲ್ಲಾ ಮುಖ್ಯ ರಸ್ತೆಯ 0.00ರಿಂದ 7.20 ಕಿ.ಮೀ.ವರೆಗಿನ ಆಯ್ದ ಭಾಗಗಳ ಮರುಡಾಂಬರೀಕರಣ ಕಾಮಗಾರಿಯನ್ನು ಪರಿಶೀಲಿಸಿದ ಜಿಲ್ಲಾಧಿಕಾರಿಗಳು, ಸಾರ್ವಜನಿಕರು ಹಾಗೂ ವಾಹನ ಸಂಚಾರಕ್ಕೆ ಯಾವುದೇ ತೊಂದರೆಯಾಗದಂತೆ ಕಾಮಗಾರಿ ನಿರ್ವಹಿಸುವಂತೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಬಳಿಕ ನಗರದ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಭೇಟಿ ನೀಡಿ ನೀರು ಶುದ್ಧೀಕರಣ ಪ್ರಕ್ರಿಯೆಯನ್ನು ಅವಲೋಕಿಸಿದರು. ನೀರಿನ ಗುಣಮಟ್ಟವನ್ನು ನಿಯಮಿತವಾಗಿ ಪರೀಕ್ಷಿಸಿ, ವರದಿಯ ಆಧಾರದ ಮೇಲೆ ಸಾರ್ವಜನಿಕರಿಗೆ ಶುದ್ಧ ಹಾಗೂ ಸುರಕ್ಷಿತ ಕುಡಿಯುವ ನೀರು ಪೂರೈಸುವಂತೆ ನಗರಸಭೆ ಅಧಿಕಾರಿಗಳಿಗೆ ಸೂಚಿಸಿದರು.

ಡೆಂಗ್ಯೂ, ಮಲೇರಿಯಾ ಹಾಗೂ ಗ್ಯಾಸ್ಟ್ರೋಎಂಟರೈಟಿಸ್ (ಜಿ.ಇ.) ಸೇರಿದಂತೆ ನೀರಿನಿಂದ ಹರಡುವ ರೋಗಗಳ ತಡೆಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆಯೂ ಅವರು ಸೂಚನೆ ನೀಡಿದರು.

ಕರ್ನಾಟಕ ನಗರ ನೀರು ಸರಬರಾಜು ಮಂಡಳಿಯಿಂದ ನಿರ್ಮಿಸಲಾಗುತ್ತಿರುವ 7 ಎಂಎಲ್‌ಡಿ ಸಾಮರ್ಥ್ಯದ ಶುದ್ಧ ಕುಡಿಯುವ ನೀರಿನ ಘಟಕದ ಕಾಮಗಾರಿ ಎಂಟು ತಿಂಗಳಾದರೂ ಆರಂಭವಾಗದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಜಿಲ್ಲಾಧಿಕಾರಿಗಳು, ಉಳಿದ ಅವಧಿಯೊಳಗೆ ಕಾಮಗಾರಿ ಆರಂಭಿಸಿ ಶೀಘ್ರ ಪೂರ್ಣಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಕಮಲಾ ನೆಹರು ಉದ್ಯಾನವನದಲ್ಲಿನ ಓವರ್‌ಹೆಡ್ ಟ್ಯಾಂಕ್ ಕಾಮಗಾರಿಯನ್ನೂ ಪರಿಶೀಲಿಸಿದ ಅವರು, ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ ಸಾರ್ವಜನಿಕ ಬಳಕೆಗೆ ಮುಕ್ತಗೊಳಿಸುವಂತೆ ಸೂಚಿಸಿದರು.

ಪರಿಶೀಲನೆ ವೇಳೆ ಲೋಕೋಪಯೋಗಿ ಇಲಾಖೆ, ಕರ್ನಾಟಕ ನಗರ ನೀರು ಸರಬರಾಜು ಮಂಡಳಿ, ಜಿಲ್ಲಾ ನಗರಾಭಿವೃದ್ಧಿ ಕೋಶ ಹಾಗೂ ನಗರಸಭೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Tags

Yadgiri
share
ವಾರ್ತಾಭಾರತಿ
ವಾರ್ತಾಭಾರತಿ
Next Story
X