Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. Yadgiri | ಯರಗೋಳ ಗ್ರಾಮದಲ್ಲಿ...

Yadgiri | ಯರಗೋಳ ಗ್ರಾಮದಲ್ಲಿ ಮೂಲಸೌಕರ್ಯ ಕೊರತೆ; ತಮಟೆ ಬಾರಿಸಿ ಉಮೇಶ್ ಮುದ್ನಾಳ್ ನೇತೃತ್ವದಲ್ಲಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ5 Sept 2026 4:43 PM IST
share
Yadgiri | ಯರಗೋಳ ಗ್ರಾಮದಲ್ಲಿ ಮೂಲಸೌಕರ್ಯ ಕೊರತೆ; ತಮಟೆ ಬಾರಿಸಿ ಉಮೇಶ್ ಮುದ್ನಾಳ್ ನೇತೃತ್ವದಲ್ಲಿ ಪ್ರತಿಭಟನೆ

ಯಾದಗಿರಿ: ತಾಲೂಕಿನ ಯರಗೋಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯರಗೋಳ ಗ್ರಾಮದ ವಾರ್ಡ್‌ ನಂ. 2ರಲ್ಲಿ ಶುದ್ಧ ಕುಡಿಯುವ ನೀರು, ಸಿಸಿ ರಸ್ತೆ ಹಾಗೂ ಚರಂಡಿ ಸೇರಿದಂತೆ ಮೂಲಸೌಕರ್ಯಗಳ ಕೊರತೆಯಿಂದ ಗ್ರಾಮಸ್ಥರು ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಸಾಮಾಜಿಕ ಹೋರಾಟಗಾರ ಉಮೇಶ್ ಕೆ. ಮುದ್ನಾಳ್ ಆರೋಪಿಸಿದ್ದಾರೆ.

ಶನಿವಾರ ಬೆಳಿಗ್ಗೆ ಗ್ರಾಮಕ್ಕೆ ಭೇಟಿ ನೀಡಿದ ಉಮೇಶ್ ಮುದ್ನಾಳ್, ವಾರ್ಡ್‌ ನಂ. 2ರಲ್ಲಿ ಕಾಲ್ನಡಿಗೆ ಸಂಚಾರ ನಡೆಸಿ ತಮಟೆ ಬಾರಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು. ಬಳಿಕ ಮಾತನಾಡಿದ ಅವರು, ಗ್ರಾಮದಲ್ಲಿ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ಕಲುಷಿತ ನೀರು ತಗ್ಗು ಗುಂಡಿಗಳಲ್ಲಿ ನಿಂತು ದುರ್ವಾಸನೆ ಬೀರುತ್ತಿದ್ದು, ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದೆ ಎಂದು ಹೇಳಿದರು.

ಗ್ರಾಮದಲ್ಲಿ ಸಿಸಿ ರಸ್ತೆ, ಶುದ್ಧ ಕುಡಿಯುವ ನೀರಿನ ಪೈಪ್‌ಲೈನ್, ಮಹಿಳೆಯರ ಶೌಚಾಲಯ ಹಾಗೂ ಬೀದಿ ದೀಪಗಳ ಸಮರ್ಪಕ ವ್ಯವಸ್ಥೆ ಇಲ್ಲ. ಯರಗೋಳ ಬೈಪಾಸ್‌ನಿಂದ ರೈಲ್ವೆ ಸೇತುವೆವರೆಗೆ ರೈತರ ಜಮೀನುಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಜಾಲಿ ಕಂಟಿಗಳು ಬೆಳೆದಿರುವುದರಿಂದ ರೈತರು ಜಮೀನುಗಳಿಗೆ ತೆರಳಲು ತೊಂದರೆ ಅನುಭವಿಸುತ್ತಿದ್ದಾರೆ ಎಂದು ದೂರಿದರು.

ಕಲುಷಿತ ನೀರು ಮತ್ತು ಸೊಳ್ಳೆಗಳ ಹಾವಳಿಯಿಂದ ಜನರು ಹಾಗೂ ಜಾನುವಾರುಗಳು ತತ್ತರಿಸಿದ್ದು, ಮಕ್ಕಳು ಸಹ ಭಯದ ವಾತಾವರಣದಲ್ಲಿ ಓಡಾಡುವಂತಾಗಿದೆ. ಗ್ರಾಮಾಭಿವೃದ್ಧಿಗೆ ಬಿಡುಗಡೆಯಾದ ಅನುದಾನ ಸಮರ್ಪಕವಾಗಿ ಬಳಕೆಯಾಗಿಲ್ಲ ಎಂದು ಅವರು ಆರೋಪಿಸಿದರು.

ಒಂದು ವಾರದೊಳಗೆ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆಗಳನ್ನು ಪರಿಹರಿಸದಿದ್ದರೆ ಯಾದಗಿರಿ–ಕಲಬುರಗಿ ಮುಖ್ಯರಸ್ತೆಯ ನಿಜಶರಣ ಅಂಬಿಗರ ಚೌಡಯ್ಯ ವೃತ್ತದಲ್ಲಿ ಭಾರಕೋಲ ಹಿಡಿದು ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಉಮೇಶ್ ಕೆ. ಮುದ್ನಾಳ್ ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಭೀಮಾಶಂಕರ, ಮಲ್ಲೇಶಿ, ಸೂರ್ಯಕಾಂತ, ಶರಣಪ್ಪ, ಚಂದ್ರಪ್ಪ, ಸಾಬಣ್ಣ, ಶರಣಪ್ಪ, ಬಸವರಾಜ, ಈಶಪ್ಪ, ದೇವಪ್ಪ, ನೀಲಕಂಠ, ಭೀಮಾ, ಲಕ್ಷ್ಮಣ, ಮೌನೇಶ, ಅಶೋಕ,. ರೇಡ್ಡೆಪ್ಪ, ಮಲ್ಲಪ್ಪ, ಕಲ್ಲಪ್ಪ, ಕರ್ಣಪ್ಪ, ಮಹಾದೇವಪ್ಪ, ರಾಮಪ್ಪ, ಸೂರ್ಯ, ಮೋನಮ್ಮ, ನಿಂಗಮ್ಮ, ಮಲ್ಲಮ್ಮ, ಚಂದ್ರಮ್ಮ, ಬಸಮ್ಮ, ಸಾಬವ್ವ, ಮಹಾದೇವಿ, ಮಶೆಮ್ಮ, ಈಶಮ್ಮ, ಶರಣಮ್ಮ, ಭೀಮವ್ವ, ಕಾಂತಮ್ಮ, ಈರಮ್ಮ, ವಿಜ್ಜಮ್ಮ, ಗಂಗಮ್ಮ, ರೇಣಮ್ಮ, ಮರಮ್ಮ, ಸಾಬವ್ವ, ಗೌರಮ್ಮ, ಶೀವಲೀಲಾ, ಸೇರಿದಂತೆ ಅನೇಕ ಗ್ರಾಮದ ಮುಖಂಡರು ಯುವಕರು ಈ ವಿನೂತನ ಪ್ರತಿಭಟನೆಯಲ್ಲಿ ಭಾಗವಹಿಸಿದರು .

Tags

ProtestsYaragolaYadgiri
share
ವಾರ್ತಾಭಾರತಿ
ವಾರ್ತಾಭಾರತಿ
Next Story
X