Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. Yadgiri | ಟೇಕ್ವಾಂಡೋ ಕ್ರೀಡಾ...

Yadgiri | ಟೇಕ್ವಾಂಡೋ ಕ್ರೀಡಾ ಕೌಶಲ್ಯವನ್ನು ವೃತ್ತಿಪರವಾಗಿ ಬಳಸಿಕೊಳ್ಳಿ: ಪೃಥ್ವಿಕ್ ಶಂಕರ್

ವಾರ್ತಾಭಾರತಿವಾರ್ತಾಭಾರತಿ8 Oct 2026 5:56 PM IST
share
Yadgiri | ಟೇಕ್ವಾಂಡೋ ಕ್ರೀಡಾ ಕೌಶಲ್ಯವನ್ನು ವೃತ್ತಿಪರವಾಗಿ ಬಳಸಿಕೊಳ್ಳಿ: ಪೃಥ್ವಿಕ್ ಶಂಕರ್

ಯಾದಗಿರಿ: ಟೇಕ್ವಾಂಡೋ ಸೇರಿದಂತೆ ವಿವಿಧ ಕ್ರೀಡೆಗಳಲ್ಲಿ ಯಶಸ್ಸು ಗಳಿಸುವ ಕ್ರೀಡಾಪಟುಗಳು ತಮ್ಮ ಕ್ರೀಡಾ ಕೌಶಲ್ಯವನ್ನು ನಿಜ ಜೀವನದಲ್ಲಿ ವೃತ್ತಿಪರವಾಗಿ ಸದ್ಬಳಕೆ ಮಾಡಿಕೊಳ್ಳಬಹುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್ ಹೇಳಿದರು.

ನಗರದ ಡಾನ್ ಬಾಸ್ಕೋ ಕಾಲೇಜು ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ 14 ಹಾಗೂ 17 ವರ್ಷದೊಳಗಿನ ಬಾಲಕ-ಬಾಲಕಿಯರಿಗಾಗಿ ಆಯೋಜಿಸಿದ್ದ 2026-27ನೇ ಸಾಲಿನ ರಾಜ್ಯ ಮಟ್ಟದ ಟೇಕ್ವಾಂಡೋ ಕ್ರೀಡಾ ಸ್ಪರ್ಧೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇತ್ತೀಚೆಗೆ ನಡೆದ ಏಷ್ಯನ್ ಗೇಮ್ಸ್‌ನಲ್ಲಿ ವಿಜೇತರಾದ ಭಾರತೀಯ ಕ್ರೀಡಾಪಟುಗಳಿಗೆ ಅಪಾರ ಗೌರವದ ಜೊತೆಗೆ ದೊಡ್ಡ ಮೊತ್ತದ ನಗದು ಬಹುಮಾನವನ್ನೂ ಘೋಷಿಸಲಾಗಿದೆ. ಇಂಡಿಗೋ, ಟಾಟಾ ಸೇರಿದಂತೆ ವಿವಿಧ ಸಂಸ್ಥೆಗಳು ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುತ್ತಿವೆ ಎಂದರು.

ಈ ಹಿನ್ನೆಲೆಯಲ್ಲಿ ಪಾಲಕರು ತಮ್ಮ ಮಕ್ಕಳಿಗೆ ಕ್ರೀಡೆಯಲ್ಲಿ ಪ್ರೋತ್ಸಾಹ ನೀಡಬೇಕು ಎಂದು ಸಲಹೆ ನೀಡಿದ ಅವರು, ಕ್ರೀಡಾಪಟುಗಳು ಪಠ್ಯದ ಜೊತೆಗೆ ಟೇಕ್ವಾಂಡೋ ಸೇರಿದಂತೆ ವಿವಿಧ ಕ್ರೀಡೆಗಳಲ್ಲಿ ಯಶಸ್ಸು ಗಳಿಸಿ, ಜೀವನದಲ್ಲಿಯೂ ಕ್ರೀಡಾ ಕೌಶಲ್ಯವನ್ನು ವೃತ್ತಿಪರವಾಗಿ ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.

ಜಾಗತಿಕ ಮಟ್ಟದಲ್ಲಿ ದೇಶದ ಕ್ರೀಡಾಪಟುಗಳು ಅತ್ಯುತ್ತಮ ಸಾಧನೆ ಮಾಡುತ್ತಿದ್ದಾರೆ. ಏಷ್ಯನ್ ಗೇಮ್ಸ್ ಹಾಗೂ ಖೇಲೋ ಇಂಡಿಯಾ ಕ್ರೀಡಾಕೂಟಗಳಲ್ಲಿ ಭಾರತವನ್ನು ಪ್ರತಿನಿಧಿಸಿ ಜಯಶಾಲಿಯಾಗಿದ್ದಾರೆ. ಬಾಕ್ಸಿಂಗ್, ಮಾರ್ಷಿಯಲ್ ಆರ್ಟ್ಸ್‌ನಂತೆ ಟೇಕ್ವಾಂಡೋ ಹಾಗೂ ಅಥ್ಲೆಟಿಕ್ಸ್‌ನಲ್ಲಿಯೂ ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದರೆ, ವೃತ್ತಿ ಜೀವನದಲ್ಲಿಯೂ ಅದರ ಪ್ರಯೋಜನ ಪಡೆದುಕೊಳ್ಳಲು ಸಾಧ್ಯವಿದೆ ಎಂದು ಹೇಳಿದರು.

ಅಪರ ಜಿಲ್ಲಾಧಿಕಾರಿ ರಮೇಶ್ ಕೋಲಾರ ಮಾತನಾಡಿ, ಮಕ್ಕಳು ಕ್ರೀಡಾ ಸ್ಫೂರ್ತಿಯೊಂದಿಗೆ ಟೇಕ್ವಾಂಡೋ ಸೇರಿದಂತೆ ವಿವಿಧ ಪಂದ್ಯಾವಳಿಗಳಲ್ಲಿ ಭಾಗವಹಿಸಿ ಜಯಶಾಲಿಯಾಗಬೇಕು. ಇದೇ ಮೊದಲ ಬಾರಿಗೆ ಯಾದಗಿರಿಯಲ್ಲಿ ಇಂತಹ ವಿಶೇಷ ರಾಜ್ಯ ಮಟ್ಟದ ಪಂದ್ಯಾವಳಿ ಆಯೋಜಿಸಲಾಗಿದ್ದು, ಇದಕ್ಕಾಗಿ ಸಹಕಾರ ನೀಡಿದ ಡಾನ್ ಬಾಸ್ಕೋ ವಿದ್ಯಾಸಂಸ್ಥೆಗೆ ಧನ್ಯವಾದಗಳನ್ನು ಅರ್ಪಿಸಿದರು.

ಕಾರ್ಯಕ್ರಮದಲ್ಲಿ ಪದವಿ ಕಾಲೇಜಿನ ಪ್ರಾಂಶುಪಾಲ ಫಾದರ್ ಡಾ. ಥಾಮಸ್ ಹಾಗೂ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಚನ್ನಬಸಪ್ಪ ಮುಧೋಳ ಮಾತನಾಡಿದರು.

ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಚನ್ನಬಸಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ವೀರಪ್ಪ ಕನ್ನಳ್ಳಿ, ಲಿಂಗರಾಜ, ಶಿವಕುಮಾರ ಪಾರಶೆಟ್ಟಿ, ಪಿಆರ್‌ಇಡಿ ಕಾರ್ಯನಿರ್ವಾಹಕ ಅಭಿಯಂತರ ಗಿರೀಶ್, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಅಶೋಕ್ ಕೆಂಭಾವಿ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರಾಘವೇಂದ್ರ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಹನುಮಂತ, ಲಕ್ಷ್ಮೀಕಾಂತ ರೆಡ್ಡಿ, ಶರಣಗೌಡ, ಮಾನಯ್ಯ, ಭೀಮರಾಯ, ಆಂಜನೇಯ ಹಾಗೂ ಅನಿಲಕುಮಾರ ಉಪಸ್ಥಿತರಿದ್ದರು.

ಚಾಂದಸಾಬ್ ಚೌಕಿ ಸ್ವಾಗತಿಸಿದರು.

Tags

TaekwondoYadgiri
share
ವಾರ್ತಾಭಾರತಿ
ವಾರ್ತಾಭಾರತಿ
Next Story
X