Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. Yadgiri | ಕಾಂಗ್ರೆಸ್ ಅಭ್ಯರ್ಥಿ...

Yadgiri | ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರ ಪರ ಶಾಸಕ ಚೆನ್ನಾರೆಡ್ಡಿ ಮತಯಾಚನೆ

ಶರಣಪ್ಪ ಮಟ್ಟೂರ ಅವರಿಗೆ ಮೊದಲ ಪ್ರಾಶಸ್ತ್ಯದ ಮತ ನೀಡಿ : ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು

ವಾರ್ತಾಭಾರತಿವಾರ್ತಾಭಾರತಿ17 Oct 2026 5:42 PM IST
share
Yadgiri |  ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರ ಪರ ಶಾಸಕ ಚೆನ್ನಾರೆಡ್ಡಿ ಮತಯಾಚನೆ

ಯಾದಗಿರಿ: ಈಶಾನ್ಯ ಪದವೀಧರರ ಕ್ಷೇತ್ರದ ಶಿಕ್ಷಕರ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರ ಅವರಿಗೆ ಮೊದಲ ಪ್ರಾಶಸ್ತ್ಯದ ಮತ ನೀಡುವ ಮೂಲಕ ಅತ್ಯಧಿಕ ಮತಗಳ ಅಂತರದಿಂದ ಆಯ್ಕೆ ಮಾಡಬೇಕು ಎಂದು ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಮನವಿ ಮಾಡಿದರು.

ಶನಿವಾರ ನಗರದ ಜವಾಹರ ಶಿಕ್ಷಣ ಸಂಸ್ಥೆ, ಸರ್ಕಾರಿ ಪದವಿ ಕಾಲೇಜು, ಲಿಂಗೇರಿ ಕೊನಪ್ಪ ಮಹಿಳಾ ಮಹಾವಿದ್ಯಾಲಯ ಹಾಗೂ ಸರ್ಕಾರಿ ಪದವಿಪೂರ್ವ ಮಹಿಳಾ ಕಾಲೇಜುಗಳಿಗೆ ಭೇಟಿ ನೀಡಿದ ಅವರು, ಶರಣಪ್ಪ ಮಟ್ಟೂರ ಪರ ಮತಯಾಚಿಸಿ ಮಾತನಾಡಿದರು.

ಅ.23ರಂದು ನಡೆಯಲಿರುವ ಈ ಮಹತ್ವದ ಚುನಾವಣೆಯಲ್ಲಿ ಅನುಭವಿ, ಕ್ರಿಯಾಶೀಲ ಹಾಗೂ ವಕೀಲರೂ ಆಗಿರುವ ಶರಣಪ್ಪ ಮಟ್ಟೂರ ಅವರಿಗೆ ಮತ ನೀಡುವ ಮೂಲಕ ಶಿಕ್ಷಕರು ತಮ್ಮ ಬೇಡಿಕೆಗಳನ್ನು ಈಡೇರಿಸಿಕೊಳ್ಳಬೇಕು ಎಂದು ಹೇಳಿದರು.

ಈಗಾಗಲೇ ಒಂದು ಬಾರಿ ವಿಧಾನ ಪರಿಷತ್ ಸದಸ್ಯರಾಗಿ ಕಾರ್ಯನಿರ್ವಹಿಸಿರುವ ಮಟ್ಟೂರ ಅವರು, ತಮ್ಮ ಆರು ವರ್ಷಗಳ ಅವಧಿಯಲ್ಲಿ ಸಾಕಷ್ಟು ಕೆಲಸಗಳನ್ನು ಮಾಡಿದ್ದಾರೆ. ಪ್ರಸ್ತುತ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದ್ದು, ಶಿಕ್ಷಕರು, ಅತಿಥಿ ಶಿಕ್ಷಕರು, ಉಪನ್ಯಾಸಕರು ಹಾಗೂ ಅತಿಥಿ ಉಪನ್ಯಾಸಕರು ಸೇರಿದಂತೆ ಸಂಬಂಧಿತ ಎಲ್ಲ ಮತದಾರರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಲ್ಪಿಸಲು ಅವರು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಶಾಸಕ ತುನ್ನೂರ ವಿವರಿಸಿದರು.

ಜಿಲ್ಲೆಯ ಮತದಾರರ ಅಹವಾಲುಗಳನ್ನು ಆಲಿಸಲು ತಾವು ಇಲ್ಲಿಯೇ ಲಭ್ಯವಿರುತ್ತೇನೆ. ತಾವೂ ಮತ್ತು ಶರಣಪ್ಪ ಮಟ್ಟೂರ ಅವರೂ ಒಟ್ಟಾಗಿ ಈ ಕ್ಷೇತ್ರದ ಮತದಾರರ ಸಮಸ್ಯೆಗಳಿಗೆ ಸ್ಪಂದಿಸಿ, ಅವರ ಕೆಲಸಗಳನ್ನು ಮಾಡಿಕೊಡುವುದಾಗಿ ತಿಳಿಸಿದರು. ಆದ್ದರಿಂದ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರ ಅವರಿಗೆ ಮತ ನೀಡುವಂತೆ ಮನವಿ ಮಾಡಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ವಕ್ತಾರ ಶ್ಯಾಮಸನ್ ಮಾಳಿಕೇರಿ, ಇದು ಪ್ರಜ್ಞಾವಂತ ಮತದಾರರು ಪಾಲ್ಗೊಳ್ಳುವ ಚುನಾವಣೆಯಾಗಿದೆ. ಅಭ್ಯರ್ಥಿ ಶರಣಪ್ಪ ಮಟ್ಟೂರ ಅವರು ಶಿಕ್ಷಕರ ಸಮಸ್ಯೆಗಳಿಗೆ ಸದಾ ಸ್ಪಂದಿಸುತ್ತಿದ್ದಾರೆ. ಹೀಗಾಗಿ, ಅಕ್ಟೋಬರ್ 23ರಂದು ನಡೆಯಲಿರುವ ಚುನಾವಣೆಯಲ್ಲಿ ಅವರಿಗೆ ಮೊದಲ ಪ್ರಾಶಸ್ತ್ಯದ ಮತ ನೀಡಿ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಸಾಯಿಬಣ್ಣ ಕೆಂಗೂರಿ, ಮರೆಪ್ಪ ಬಿಳ್ಹಾರ, ಮೈನೋದ್ದಿನ್ ಮಿರ್ಚಿ, ಡಾ. ಪರ್ವೇಶ್ ಕಾಡ್ಲೂರು ಹಾಗೂ ಮಲ್ಲಿಕಾರ್ಜುನ ಈಟೆ ಉಪಸ್ಥಿತರಿದ್ದರು.

Tags

CongressChannareddy PatilYadgiri
share
ವಾರ್ತಾಭಾರತಿ
ವಾರ್ತಾಭಾರತಿ
Next Story
X