Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. Yadgiri | ಮುಷ್ಠೂರಿನಲ್ಲಿ ಭಾವೈಕ್ಯತೆಯ...

Yadgiri | ಮುಷ್ಠೂರಿನಲ್ಲಿ ಭಾವೈಕ್ಯತೆಯ ಮೊಹರಂ ಸಡಗರ : ವೈಭವದ ಸವಾರಿ

ವಾರ್ತಾಭಾರತಿವಾರ್ತಾಭಾರತಿ26 Jun 2026 7:37 PM IST
share
Yadgiri | ಮುಷ್ಠೂರಿನಲ್ಲಿ ಭಾವೈಕ್ಯತೆಯ ಮೊಹರಂ ಸಡಗರ : ವೈಭವದ ಸವಾರಿ

ಯಾದಗಿರಿ: ತಾಲೂಕಿನ ಮುಷ್ಠೂರು ಗ್ರಾಮದಲ್ಲಿ ಮೊಹರಂ ಹಬ್ಬವನ್ನು ಅತ್ಯಂತ ಭಕ್ತಿಭಾವ ಹಾಗೂ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಹಬ್ಬದ ಅಂಗವಾಗಿ ನಡೆದ ಅಕ್ಬರ್ ಅಲಿ ಹಾಗೂ ಚಾಂದ್ ಸಾಬ್ ಸವಾರಿಯು ಗ್ರಾಮದಲ್ಲಿ ವೈಭವದಿಂದ ಸಂಚರಿಸಿ ಸಾವಿರಾರು ಭಕ್ತರ ಗಮನ ಸೆಳೆಯಿತು.

ನೂರಕ್ಕೂ ಹೆಚ್ಚು ವರ್ಷಗಳ ಇತಿಹಾಸ ಹೊಂದಿರುವ ಮುಷ್ಠೂರು ಗ್ರಾಮದ ಮೊಹರಂ ಹಬ್ಬವು ಸರ್ವಧರ್ಮೀಯರ ಸಮ್ಮುಖದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿತು. ಹತ್ತು ದಿನಗಳ ಕಾಲ ವಿವಿಧ ಧಾರ್ಮಿಕ ಆಚರಣೆಗಳೊಂದಿಗೆ ನಡೆದ ಹಬ್ಬದಲ್ಲಿ ಮುಸ್ಲಿಂ ಸಮುದಾಯದವರ ಜೊತೆಗೆ ಹಿಂದೂ ಸಮುದಾಯದವರೂ ಉತ್ಸಾಹದಿಂದ ಭಾಗವಹಿಸಿ ಸೌಹಾರ್ದತೆಯ ಸಂದೇಶ ಸಾರಿದರು.

ಹಿರಿಯರ ಕಾಲದಿಂದಲೂ ನಡೆದುಕೊಂಡು ಬಂದಿರುವ ಈ ಪರಂಪರೆಯಲ್ಲಿ ಗ್ರಾಮಸ್ಥರು ಭಕ್ತಿಭಾವದಿಂದ ಪಾಲ್ಗೊಳ್ಳುತ್ತಿದ್ದು, ಧರ್ಮಗಳ ನಡುವೆ ಪ್ರೀತಿ, ನಂಬಿಕೆ ಮತ್ತು ಸಹೋದರತ್ವವನ್ನು ಸಾರುವ ಮೊಹರಂ ಹಬ್ಬ ಮತ್ತೊಮ್ಮೆ ಎಲ್ಲರ ಗಮನ ಸೆಳೆಯಿತು.

ಗ್ರಾಮದ ದರ್ಗಾದಲ್ಲಿ ಅಕ್ಬರ್ ಅಲಿ ಹಾಗೂ ಚಾಂದ್ ಸಾಬ್ ಅವರ ಸವಾರಿಯ ವೈಭವವನ್ನು ಕಣ್ತುಂಬಿಕೊಳ್ಳಲು ನೂರಾರು ಭಕ್ತರು ಆಗಮಿಸಿದ್ದರು. ಈ ಹಬ್ಬವು ಕೇವಲ ಒಂದು ಧರ್ಮಕ್ಕೆ ಸೀಮಿತವಾಗಿರದೆ, ಹಿಂದೂ ಮತ್ತು ಮುಸ್ಲಿಂ ಸಮುದಾಯಗಳ ನಡುವಿನ ಅಪೂರ್ವ ಭಾವೈಕ್ಯತೆ ಹಾಗೂ ಸಹೋದರತೆಗೆ ಸಾಕ್ಷಿಯಾಗಿದೆ.

ಶ್ರೀಮಂತ-ಬಡವ, ಮೇಲು-ಕೀಳು ಎಂಬ ಯಾವುದೇ ಭೇದಭಾವವಿಲ್ಲದೆ ಸರ್ವಧರ್ಮೀಯರು ಹಬ್ಬದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವುದು ಇಲ್ಲಿನ ವಿಶೇಷತೆಯಾಗಿದೆ. ಹಬ್ಬದ ಅಂಗವಾಗಿ ಗ್ರಾಮಸ್ಥರು ತಮ್ಮ ಮನೆಗಳನ್ನು ಸುಣ್ಣ-ಬಣ್ಣಗಳಿಂದ ಅಲಂಕರಿಸಿ, ತಳಿರು ತೋರಣಗಳಿಂದ ಸಿಂಗರಿಸಿ ಸಂಭ್ರಮದಿಂದ ಆಚರಿಸಿದರು.

ಸವಾರಿಯ ಸಂದರ್ಭದಲ್ಲಿ ಭಕ್ತರು ಉತ್ತಮ ಮಳೆ-ಬೆಳೆ, ಅತಿವೃಷ್ಟಿ ಹಾಗೂ ಅನಾವೃಷ್ಟಿ ನಿವಾರಣೆ, ಸಂತಾನ ಪ್ರಾಪ್ತಿ ಹಾಗೂ ಕುಟುಂಬದ ಆರ್ಥಿಕ ಮತ್ತು ಸಾಮಾಜಿಕ ಸಮಸ್ಯೆಗಳ ಪರಿಹಾರಕ್ಕಾಗಿ ಹರಕೆಗಳನ್ನು ಸಲ್ಲಿಸಿದರು. ಜಯಘೋಷಗಳ ನಡುವೆ ಭಕ್ತರು ತಮ್ಮ ಭಕ್ತಿಯನ್ನು ಸಮರ್ಪಿಸಿದರು.

ಈ ಸಂದರ್ಭದಲ್ಲಿ ಗ್ರಾಮಸ್ಥರು ಹಾಗೂ ಸುತ್ತಮುತ್ತಲಿನ ಗ್ರಾಮಗಳ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Tags

Yadgiri
share
ವಾರ್ತಾಭಾರತಿ
ವಾರ್ತಾಭಾರತಿ
Next Story
X