Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. Yadgiri | ವಸತಿ ನಿಲಯಗಳಲ್ಲಿ ಮಕ್ಕಳ...

Yadgiri | ವಸತಿ ನಿಲಯಗಳಲ್ಲಿ ಮಕ್ಕಳ ಸುರಕ್ಷತೆ, ಸ್ವಚ್ಛತೆಗೆ ಆದ್ಯತೆ ನೀಡಿ: ಸಂತೋಷ್ ಕುಮಾರ್ ಪಾಟೀಲ್

ಪ್ರಗತಿ ಪರಿಶೀಲನಾ ಸಭೆ

ವಾರ್ತಾಭಾರತಿವಾರ್ತಾಭಾರತಿ7 Nov 2026 6:28 PM IST
share
Yadgiri | ವಸತಿ ನಿಲಯಗಳಲ್ಲಿ ಮಕ್ಕಳ ಸುರಕ್ಷತೆ, ಸ್ವಚ್ಛತೆಗೆ ಆದ್ಯತೆ ನೀಡಿ: ಸಂತೋಷ್ ಕುಮಾರ್ ಪಾಟೀಲ್

ಯಾದಗಿರಿ: ಜಿಲ್ಲೆಯ ವಿವಿಧ ವಸತಿ ನಿಲಯಗಳಲ್ಲಿ ಸ್ವಚ್ಛತೆ, ಮೂಲಸೌಕರ್ಯಗಳ ಪೂರೈಕೆ ಹಾಗೂ ಮಕ್ಕಳ ಸುರಕ್ಷತೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಸಂತೋಷ್ ಕುಮಾರ್ ಪಾಟೀಲ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಇಂದು ಆರ್‌ಟಿಇ ಕಾಯ್ದೆ-2009, ಪೋಕ್ಸೊ ಕಾಯ್ದೆ-2012, ಬಾಲ್ಯವಿವಾಹ ನಿಷೇಧ ಕಾಯ್ದೆ-2006 (2016ರ ತಿದ್ದುಪಡಿ) ಹಾಗೂ ಬಾಲನ್ಯಾಯ ಕಾಯ್ದೆ-2015ರ ಅನುಷ್ಠಾನ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.

ಜಿಲ್ಲೆಯ ವಸತಿ ನಿಲಯಗಳ ಅಧಿಕಾರಿಗಳು ಮಕ್ಕಳ ಸುರಕ್ಷತೆಗೆ ವಿಶೇಷ ಆದ್ಯತೆ ನೀಡಬೇಕು. ವಿಶೇಷವಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗಳ ವ್ಯಾಪ್ತಿಯ ವಸತಿ ನಿಲಯಗಳಲ್ಲಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು. ಮಕ್ಕಳ ಕಲ್ಯಾಣ ಸಮಿತಿ ರಚಿಸಬೇಕು. 1098 ಮತ್ತು 112 ಸಹಾಯವಾಣಿಗಳ ಕುರಿತು ಮಕ್ಕಳಲ್ಲಿ ಅರಿವು ಮೂಡಿಸಬೇಕು. ಗುಣಮಟ್ಟದ ಆಹಾರ ಒದಗಿಸುವುದರ ಜತೆಗೆ, ಗ್ರಂಥಾಲಯವಿರುವ ಕಡೆ ಪುಸ್ತಕಗಳನ್ನು ಪೂರೈಸಿ ಓದುವ ಹವ್ಯಾಸ ಬೆಳೆಸಲು ಪ್ರೋತ್ಸಾಹಿಸಬೇಕು. ಮಕ್ಕಳಿಗೆ ಅಗತ್ಯ ಆರೋಗ್ಯ ಸೇವೆ ಹಾಗೂ ಆಟೋಟದ ಸಲಕರಣೆಗಳನ್ನು ಒದಗಿಸಿ ದೈಹಿಕ ಸದೃಢತೆಗೆ ಒತ್ತು ನೀಡಬೇಕು ಎಂದು ಸೂಚಿಸಿದರು.

ಕಳೆದ ಎರಡು ದಿನಗಳಿಂದ ಜಿಲ್ಲೆಯ ವಿವಿಧ ವಸತಿ ನಿಲಯಗಳಿಗೆ ಭೇಟಿ ನೀಡಿದ್ದು, ಯರಗೋಳ ಹಾಗೂ ನಗರದ ಐ.ಬಿ. ಪಕ್ಕದಲ್ಲಿರುವ ವಸತಿ ನಿಲಯಗಳನ್ನೂ ಪರಿಶೀಲಿಸಲಾಗಿದೆ. ನಿಯಮಾವಳಿಗಳ ಪ್ರಕಾರ ಬೇಳೆಕಾಳು ಸೇರಿದಂತೆ ಅಗತ್ಯ ಆಹಾರ ಪದಾರ್ಥಗಳನ್ನು ಪೂರೈಸಬೇಕು. ಗುಣಮಟ್ಟದ ಆಹಾರ ನೀಡಬೇಕು. ಸ್ಟಾಕ್ ರಿಜಿಸ್ಟರ್ ಹಾಗೂ ಸಿಬ್ಬಂದಿ ಹಾಜರಾತಿ ರಿಜಿಸ್ಟರ್‌ಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಸಕಾಲದಲ್ಲಿ ಬಸ್ ಸೌಲಭ್ಯ ದೊರೆಯುವಂತೆ ಬಸ್ ಸಂಚಾರದ ವೇಳಾಪಟ್ಟಿ ಸಿದ್ಧಪಡಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಪೊಲೀಸ್ ಇಲಾಖೆಯ ಕಾರ್ಯವೈಖರಿಯನ್ನು ಮೆಚ್ಚಿದ ಅವರು, ಪ್ರತಿ ಗುರುವಾರ ತೆರೆದ ಮನೆ ಕಾರ್ಯಕ್ರಮದ ಮೂಲಕ ಆಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಕ್ಕಳಿಗೆ ಅಗತ್ಯ ತಿಳಿವಳಿಕೆ ನೀಡುತ್ತಿರುವುದು ಸಂತಸದ ಸಂಗತಿ ಎಂದರು. ವಿವಿಧ ಶಾಲಾ-ಕಾಲೇಜುಗಳ ಶಿಕ್ಷಕರು ಹಾಗೂ ಪ್ರಾಂಶುಪಾಲರೊಂದಿಗೆ ಸಮನ್ವಯ ಸಾಧಿಸಿ ಮಕ್ಕಳ ಸುರಕ್ಷತೆಗೆ ಕ್ರಮ ಕೈಗೊಳ್ಳಬೇಕು. ಸಂಜೆ ಮತ್ತು ಮಧ್ಯಾಹ್ನದ ವೇಳೆ ಪೊಲೀಸ್ ಗಸ್ತು ಹೆಚ್ಚಿಸಬೇಕು ಎಂದು ಸಲಹೆ ನೀಡಿದರು.

ಮಕ್ಕಳು ಬಾಲಕಾರ್ಮಿಕರಾಗದಂತೆ ನಿಗಾ ವಹಿಸಬೇಕು. ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮರಳಿ ಶಾಲೆಗೆ ಸೇರಿಸಬೇಕು. ಎಲ್ಲ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ಒದಗಿಸಲು ಕ್ರಮ ಕೈಗೊಳ್ಳಬೇಕು. ಜಿಲ್ಲೆಯಾದ್ಯಂತ ಮಕ್ಕಳ ಗ್ರಾಮಸಭೆಗಳನ್ನು ಆಯೋಜಿಸುವಂತೆ ಆಯಾ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಕ್ರಮ ವಹಿಸಬೇಕು. ಪದೇಪದೇ ಬಾಲ್ಯವಿವಾಹ ಪ್ರಕರಣಗಳು ನಡೆಯದಂತೆ ತಡೆಯಲು ಆಯಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು (ಪಿಡಿಒ) ಜವಾಬ್ದಾರರನ್ನಾಗಿ ಮಾಡಬೇಕು. ಮಕ್ಕಳ ಸಹಾಯವಾಣಿ ಕಾರ್ಯಕರ್ತರನ್ನು ಪ್ರೋತ್ಸಾಹಿಸಬೇಕು. ಮಕ್ಕಳ ಅಪೌಷ್ಟಿಕತೆ ನಿವಾರಣೆಗೆ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.

ತಾಯಿ ಮತ್ತು ಮಕ್ಕಳ ಆಸ್ಪತ್ರೆಗಳಲ್ಲಿ ಸ್ವಚ್ಛತೆ ಕಾಪಾಡಬೇಕು. ಉತ್ತಮ ಆಹಾರ ಪದ್ಧತಿ ಕುರಿತು ತಾಯಂದಿರಿಗೆ ಅರಿವು ಮೂಡಿಸಬೇಕು. ತಾಯಂದಿರಿಗೆ ಉತ್ತಮ ಕೊಠಡಿ ಹಾಗೂ ಚಿಕಿತ್ಸಾ ಸೌಲಭ್ಯ ಕಲ್ಪಿಸಬೇಕು. ಚಿಕ್ಕ ಮಕ್ಕಳಿಗೆ ಆಟೋಟದ ಸಲಕರಣೆಗಳನ್ನು ಒದಗಿಸುವುದರ ಮೂಲಕ ಆಸ್ಪತ್ರೆಗಳಲ್ಲಿ ಉತ್ತಮ ವಾತಾವರಣ ನಿರ್ಮಿಸಬೇಕು ಎಂದು ಸೂಚನೆ ನೀಡಿದರು.

ಜಿಲ್ಲಾಧಿಕಾರಿ ರಾಹುಲ್ ಪಾಂಡ್ವೆ ಮಾತನಾಡಿ, ಮಕ್ಕಳ ಹಕ್ಕುಗಳನ್ನು ರಕ್ಷಿಸಿ ಅವರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ವಸತಿ ನಿಲಯಗಳು, ಆಸ್ಪತ್ರೆಗಳು ಹಾಗೂ ಅಂಗನವಾಡಿ ಕೇಂದ್ರಗಳಲ್ಲಿ ಕಲ್ಪಿಸಬೇಕಾದ ಸೌಲಭ್ಯಗಳ ಕುರಿತು ಕ್ರಿಯಾ ಯೋಜನೆ ರೂಪಿಸಿ ಅನುಷ್ಠಾನಗೊಳಿಸಬೇಕು ಎಂದು ಸೂಚಿಸಿದರು.

ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಸತ್ಯನಾರಾಯಣ ಶೆಟ್ಟಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್, ಅಪರ ಜಿಲ್ಲಾಧಿಕಾರಿ ರಮೇಶ್ ಕೋಲಾರ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರತಿಜ್ಞಾ ವಿಧಿ ಬೋಧನೆ :

ಮಕ್ಕಳ ರಕ್ಷಣಾಧಿಕಾರಿ ದಶರಥ ಅವರು ಕಾನೂನುಬದ್ಧ ದತ್ತು ಸ್ವೀಕಾರದ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿದರು. ಬಾಲನ್ಯಾಯ ಕಾಯ್ದೆ-2015ರ ಸೆಕ್ಷನ್ 81ರ ಅನ್ವಯ ಮಕ್ಕಳನ್ನು ಮಾರಾಟ ಮಾಡುವವರಿಗೆ ಹಾಗೂ ಖರೀದಿಸುವವರಿಗೆ ಐದು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು ಒಂದು ಲಕ್ಷ ರೂ. ದಂಡ ವಿಧಿಸಲು ಅವಕಾಶವಿದೆ. ಇಂತಹ ಪ್ರಕರಣಗಳಲ್ಲಿ ಆಸ್ಪತ್ರೆ ಸಿಬ್ಬಂದಿ ಶಾಮೀಲಾಗಿದ್ದರೆ ಏಳು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಲು ಅವಕಾಶವಿದೆ ಎಂದು ತಿಳಿಸಿದರು.

ಕುಟುಂಬವಿಲ್ಲದ ಮಕ್ಕಳಿಗೆ ಕಾನೂನುಬದ್ಧವಾಗಿ ಕುಟುಂಬ ಕಲ್ಪಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಅನಾಥ, ಒಪ್ಪಿಸಲ್ಪಟ್ಟ, ನಿರ್ಗತಿಕ ಹಾಗೂ ಪರಿತ್ಯಕ್ತ ಮಕ್ಕಳು ಕಂಡುಬಂದಲ್ಲಿ ಮಕ್ಕಳ ಸಹಾಯವಾಣಿ 1098 ಅಥವಾ 112ಕ್ಕೆ ಕರೆ ಮಾಡಿ, ಮಕ್ಕಳ ಭವಿಷ್ಯದ ಹಿತಾಸಕ್ತಿ ಕಾಪಾಡಲು ಕೈಜೋಡಿಸುವಂತೆ ಪ್ರತಿಜ್ಞಾ ವಿಧಿ ಬೋಧಿಸಿದರು.

Tags

childYadgiri
share
ವಾರ್ತಾಭಾರತಿ
ವಾರ್ತಾಭಾರತಿ
Next Story
X