Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. Yadgiri | ಸಚಿವ ಸಂಪುಟದಲ್ಲಿ ಮಾದಿಗ...

Yadgiri | ಸಚಿವ ಸಂಪುಟದಲ್ಲಿ ಮಾದಿಗ ಸಮುದಾಯಕ್ಕೆ ಹೆಚ್ಚಿನ ಸ್ಥಾನ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ20 July 2026 5:26 PM IST
share
Yadgiri | ಸಚಿವ ಸಂಪುಟದಲ್ಲಿ ಮಾದಿಗ ಸಮುದಾಯಕ್ಕೆ ಹೆಚ್ಚಿನ ಸ್ಥಾನ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

ಯಾದಗಿರಿ: ಸಚಿವ ಸಂಪುಟದಲ್ಲಿ ಮಾದಿಗ ಸಮುದಾಯದ ಆರ್.ಬಿ. ತಿಮ್ಮಾಪುರ ಅವರಿಗೆ ಸಚಿವ ಸ್ಥಾನ ಹಾಗೂ ಮಾಜಿ ಸಚಿವ ಎಚ್. ಆಂಜನೇಯ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ (ಎಂಎಲ್ಸಿ) ನೇಮಿಸಿ ಸಚಿವರನ್ನಾಗಿ ಮಾಡಬೇಕು ಎಂದು ಒತ್ತಾಯಿಸಿ ಯಾದಗಿರಿ ಜಿಲ್ಲಾ ಮಾದಿಗ ದಂಡೋರ ಸಮಿತಿ ನೇತೃತ್ವದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆ ಬಳಿಕ ಮಾತನಾಡಿದ ರಾಜ್ಯ ಉಪಾಧ್ಯಕ್ಷ ಗಣೇಶ ದುಪ್ಪಲಿ, ಕರ್ನಾಟಕದಲ್ಲಿ ಸುಮಾರು 50 ಲಕ್ಷ ಜನಸಂಖ್ಯೆ ಹೊಂದಿರುವ ಮಾದಿಗ ಸಮುದಾಯವು ಪರಿಶಿಷ್ಟ ಜಾತಿಗಳಲ್ಲಿಯೇ ಅತಿದೊಡ್ಡ ಸಮುದಾಯವಾಗಿದ್ದರೂ ರಾಜಕೀಯವಾಗಿ ನಿರೀಕ್ಷಿತ ಪ್ರಾತಿನಿಧ್ಯ ದೊರೆಯುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಚಿತ್ರದುರ್ಗದಲ್ಲಿ ನಡೆದ ಎಸ್ಸಿ-ಎಸ್ಟಿ ಸಮಾವೇಶದಲ್ಲಿ ಕಾಂಗ್ರೆಸ್ ಪಕ್ಷ ಒಳಮೀಸಲಾತಿಗೆ ಬೆಂಬಲ ಘೋಷಿಸಿದ ಹಿನ್ನೆಲೆಯಲ್ಲಿ ಮಾದಿಗ ಸಮುದಾಯ ಕಾಂಗ್ರೆಸ್ಗೆ ಬೆಂಬಲ ನೀಡಿತ್ತು. ಆದರೆ ಸಚಿವ ಸಂಪುಟದಲ್ಲಿ ಸಮುದಾಯಕ್ಕೆ ಸಮರ್ಪಕ ಸ್ಥಾನಮಾನ ಸಿಕ್ಕಿಲ್ಲ ಎಂದು ಆರೋಪಿಸಿದರು.

ಈ ಬಾರಿ ಸಚಿವ ಸಂಪುಟದಲ್ಲಿ ಮಾದಿಗ ಸಮುದಾಯಕ್ಕೆ ಕನಿಷ್ಠ ನಾಲ್ಕು ಸಚಿವ ಸ್ಥಾನಗಳನ್ನು ನೀಡಬೇಕು. ಕಳೆದ ಬಾರಿ ಬಲಗೈ ಸಮುದಾಯಕ್ಕೆ ಮೂರು ಸಚಿವ ಸ್ಥಾನಗಳೊಂದಿಗೆ ಪ್ರಮುಖ ಖಾತೆಗಳನ್ನು ನೀಡಲಾಗಿತ್ತು. ಆದರೆ ಮಾದಿಗ ಸಮುದಾಯಕ್ಕೆ ಕೇವಲ ಎರಡು ಸಚಿವ ಸ್ಥಾನಗಳು ಮಾತ್ರ ದೊರೆತಿದ್ದು, ಉಪಮುಖ್ಯಮಂತ್ರಿ ಹುದ್ದೆಯೂ ಸಿಕ್ಕಿರಲಿಲ್ಲ ಎಂದು ಅವರು ಹೇಳಿದರು.

ಜಿಲ್ಲಾಧ್ಯಕ್ಷ ಕಾಶಪ್ಪ ಹೆಗ್ಗಣಗೇರಾ ಮಾತನಾಡಿ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಮಾದಿಗ ಸಮುದಾಯಕ್ಕೆ ಸೂಕ್ತ ರಾಜಕೀಯ ಸ್ಥಾನಮಾನ ಸಿಕ್ಕಿಲ್ಲ. ಯಾದಗಿರಿ ಜಿಲ್ಲೆಯಲ್ಲಿ ಸುಮಾರು ಎರಡು ಲಕ್ಷ ಮಾದಿಗ ಜನಸಂಖ್ಯೆ ಇದ್ದರೂ ಸಮುದಾಯದ ಪ್ರತಿನಿಧಿಗಳಿಗೆ ಅವಕಾಶ ಕಲ್ಪಿಸಿಲ್ಲ ಎಂದು ದೂರಿದರು.

ಹಿಂದಿನ ಬಿಜೆಪಿ ಸರ್ಕಾರದಲ್ಲಿ ಗೋವಿಂದ ಕಾರಜೋಳ ಅವರಿಗೆ ಉಪಮುಖ್ಯಮಂತ್ರಿ ಹುದ್ದೆಯೊಂದಿಗೆ ಪ್ರಮುಖ ಖಾತೆಗಳನ್ನು ನೀಡಲಾಗಿತ್ತು. ಅದೇ ರೀತಿಯಲ್ಲಿ ಕಾಂಗ್ರೆಸ್ ಸರ್ಕಾರವೂ ಮಾದಿಗ ಸಮುದಾಯಕ್ಕೆ ಪ್ರಭಾವಿ ಖಾತೆಗಳೊಂದಿಗೆ ಉನ್ನತ ಸ್ಥಾನಮಾನ ನೀಡಬೇಕು ಎಂದು ಆಗ್ರಹಿಸಿದರು.

ಕೆ.ಹೆಚ್. ಮುನಿಯಪ್ಪ ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ನೇಮಿಸುವುದರೊಂದಿಗೆ ಆರ್.ಬಿ. ತಿಮ್ಮಾಪುರ ಸೇರಿದಂತೆ ಮಾದಿಗ ಸಮುದಾಯದ ಇನ್ನೂ ಮೂವರು ಶಾಸಕರಿಗೆ ಸಚಿವ ಸ್ಥಾನ ನೀಡುವ ಮೂಲಕ ನ್ಯಾಯಸಮ್ಮತ ರಾಜಕೀಯ ಪ್ರಾತಿನಿಧ್ಯ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.

ಮಾದಿಗ ಸಮುದಾಯದ ಬೇಡಿಕೆಗಳನ್ನು ಸರ್ಕಾರ ಪರಿಗಣಿಸಿ ಸೂಕ್ತ ನಿರ್ಧಾರ ಕೈಗೊಳ್ಳಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಸಮಿತಿ ಎಚ್ಚರಿಕೆ ನೀಡಿತು.

ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ಮಲ್ಲು ಬೆಳಗೇರಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನಡುಮನಿ, ರಾಜು ಕಡೇಚೂರ್, ರವಿ ಬುರನೋರ್, ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಕಾರ್ಮಿಕ ಸೇನೆ ಯಾದಗಿರಿ ಜಿಲ್ಲಾಧ್ಯಕ್ಷ ಪೋಲಪ್ಪ ಎಂ ನಾರಾಯಣಣ್ಣೋರ್, ಭೀಮರಾಯ ಸಾತನೂರ್, ತಿಪ್ಪಣ್ಣ ಗೊಂದೆನೂರ್, ವಿಲ್ಸೇನ್ ಹಾಲಗೇರಾ, ಮಲ್ಲು ಕುಮನೂರ್, ಶರಣಪ್ಪ ವಡಗೇರಾ, ಶರಣಪ್ಪ ಹಚ್ಚೋಲಾ, ದೇವರಾಜ ಚೇಲೇರಿ, ಬಸವರಾಜ ವನಿಕೇರಿ, ಬಸಲಿಂಗ ಬಾಡಿಯಾಳ್, ದೇವಪ್ಪ ಲಿಂಗೇರಿ, ಭೀಮರಾಯ ಕೋನಳಿ, ಮಲ್ಲು ಅಚ್ಚಿಕೇರಿ, ಮಲ್ಲಿಕಾರ್ಜುನ ಮುಂಡರಗಿ, ಸಾಬಣ್ಣ ಕುರಿಯಾಳ, ಸಾಬಣ್ಣ ಹುಲಕಲ್, ದುರ್ಗಪ್ಪ ಒರುಂಚಿ, ಮರಿಲಿಂಗ ಕೌಲಿ, ಪ್ರಭು, ಹಾಲಗೇರಾ, ಅಂಜಪ್ಪ ಸೈದಾಪೂರ್, ಮರೆಪ್ಪ ಬಿಳ್ಹಾರ್, ಸೇರಿದಂತೆ ಇತರರು ಇದ್ದರು.

Tags

YadgiriprotestMadiga community
share
ವಾರ್ತಾಭಾರತಿ
ವಾರ್ತಾಭಾರತಿ
Next Story
X