Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. Yadgiri | ಜು.28ರಿಂದ ಪಲ್ಸ್ ಪೋಲಿಯೋ...

Yadgiri | ಜು.28ರಿಂದ ಪಲ್ಸ್ ಪೋಲಿಯೋ ಅಭಿಯಾನ : ಜಿಲ್ಲೆಯ 1.66 ಲಕ್ಷ ಮಕ್ಕಳಿಗೆ ಲಸಿಕೆ

ವಾರ್ತಾಭಾರತಿವಾರ್ತಾಭಾರತಿ26 Jun 2026 4:51 PM IST
share
Yadgiri | ಜು.28ರಿಂದ ಪಲ್ಸ್ ಪೋಲಿಯೋ ಅಭಿಯಾನ : ಜಿಲ್ಲೆಯ 1.66 ಲಕ್ಷ ಮಕ್ಕಳಿಗೆ ಲಸಿಕೆ

ಯಾದಗಿರಿ: ಪೋಲಿಯೋ ಮುಕ್ತ ಜಿಲ್ಲೆಯನ್ನಾಗಿಸುವ ಉದ್ದೇಶದಿಂದ ಆರೋಗ್ಯ ಇಲಾಖೆ ಜುಲೈ 28ರಿಂದ ನಾಲ್ಕು ದಿನಗಳ ಕಾಲ ಎರಡು ಹಂತಗಳಲ್ಲಿ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನ ಹಮ್ಮಿಕೊಂಡಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಹೇಶ ಬಿರಾದಾರ ತಿಳಿಸಿದರು.

ನಗರದ ಡಿಎಚ್‌ಒ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜು.28ರಂದು ಜಿಲ್ಲೆಯಾದ್ಯಂತ ಸ್ಥಾಪಿಸಲಾದ 665 ಕೇಂದ್ರಗಳಲ್ಲಿ ಐದು ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕಲಾಗುವುದು. ಬಳಿಕ ಜು.29ರಿಂದ ಜು.1ರವರೆಗೆ ಮನೆ-ಮನೆಗೆ ತೆರಳಿ ಮಕ್ಕಳಿಗೆ ಲಸಿಕೆ ನೀಡಲಾಗುವುದು ಎಂದು ಹೇಳಿದರು.

ಜಿಲ್ಲೆಯಲ್ಲಿ ಒಟ್ಟು 2,47,507 ಮನೆಗಳಿದ್ದು, 13,75,679 ಜನಸಂಖ್ಯೆ ಇದೆ. ಇದರಲ್ಲಿ 1,66,928 ಐದು ವರ್ಷದೊಳಗಿನ ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.

ಈ ಅಭಿಯಾನಕ್ಕಾಗಿ ಮನೆ ಭೇಟಿ ತಂಡ, ಟ್ರಾನ್ಸಿಟ್ ತಂಡ ಹಾಗೂ ಸಂಚಾರಿ ತಂಡ ಸೇರಿ ವಿವಿಧ ರೀತಿಯ ತಂಡಗಳನ್ನು ರಚಿಸಲಾಗಿದ್ದು, ಒಟ್ಟು 704 ಸಿಬ್ಬಂದಿ ಕಾರ್ಯನಿರ್ವಹಿಸಲಿದ್ದಾರೆ. ಇವರೊಂದಿಗೆ 134 ಮೇಲ್ವಿಚಾರಕರು ಹಾಗೂ 1,391 ಲಸಿಕೆದಾರರು ಭಾಗವಹಿಸಲಿದ್ದು, ಯಾವುದೇ ಮಗು ಲಸಿಕೆಯಿಂದ ವಂಚಿತವಾಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಆರ್‌ಸಿಎಚ್ ಅಧಿಕಾರಿ ಡಾ. ಮಲ್ಲಪ್ಪ ನಾಯ್ಕಲ್ ಮಾತನಾಡಿ, ಕಳೆದ 14 ವರ್ಷಗಳಿಂದ ಭಾರತ ಪೋಲಿಯೋ ಮುಕ್ತ ರಾಷ್ಟ್ರವಾಗಿದ್ದರೂ, ಪಾಕಿಸ್ತಾನ ಹಾಗೂ ಬಾಂಗ್ಲಾದೇಶಗಳಲ್ಲಿ ಇನ್ನೂ ಪೋಲಿಯೋ ಪ್ರಕರಣಗಳು ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಈ ಅಭಿಯಾನ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ತಾಲೂಕುವಾರು ವಿವರ :

ಶಹಾಪುರ ತಾಲೂಕು: 4,17,953 ಜನಸಂಖ್ಯೆ, 77,911 ಮನೆಗಳು, 47,915 ಮಕ್ಕಳು

ಸುರಪುರ ತಾಲೂಕು: 4,70,609 ಜನಸಂಖ್ಯೆ, 87,195 ಮನೆಗಳು, 57,944 ಮಕ್ಕಳು

ಯಾದಗಿರಿ ತಾಲೂಕು: 4,85,941 ಜನಸಂಖ್ಯೆ, 82,401 ಮನೆಗಳು, 61,069 ಮಕ್ಕಳು

ಸುದ್ದಿಗೋಷ್ಠಿಯಲ್ಲಿ ಆರೋಗ್ಯ ಶಿಕ್ಷಣಾಧಿಕಾರಿ ಜಗನ್ನಾಥ ಕೋಟೆ, ಆರ್‌ಸಿಎಚ್ ಕಚೇರಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

Tags

Yadgiri
share
ವಾರ್ತಾಭಾರತಿ
ವಾರ್ತಾಭಾರತಿ
Next Story
X