Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. Yadgiri | ಉಳಿದ ತಾಲೂಕುಗಳನ್ನೂ ಶೀಘ್ರ...

Yadgiri | ಉಳಿದ ತಾಲೂಕುಗಳನ್ನೂ ಶೀಘ್ರ ಬರಪೀಡಿತ ಪಟ್ಟಿಗೆ ಸೇರ್ಪಡೆ: ಶಾಸಕ ಚೆನ್ನಾರೆಡ್ಡಿ ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ5 Sept 2026 5:47 PM IST
share
Yadgiri | ಉಳಿದ ತಾಲೂಕುಗಳನ್ನೂ ಶೀಘ್ರ ಬರಪೀಡಿತ ಪಟ್ಟಿಗೆ ಸೇರ್ಪಡೆ: ಶಾಸಕ ಚೆನ್ನಾರೆಡ್ಡಿ ಪಾಟೀಲ್

ಯಾದಗಿರಿ: ಸರ್ಕಾರದ ಬರ ಘೋಷಣೆಯ ನಿರ್ಧಾರದ ಬಗ್ಗೆ ರೈತರು ಯಾವುದೇ ಆತಂಕಕ್ಕೆ ಒಳಗಾಗಬಾರದು. ಮುಂದಿನ 8–10 ದಿನಗಳಲ್ಲಿ ಹಿಂದಿನ ಪಟ್ಟಿಯಲ್ಲಿ ಕೈಬಿಟ್ಟಿರುವ ಉಳಿದ ತಾಲೂಕುಗಳನ್ನೂ ಬರಪೀಡಿತ ಪಟ್ಟಿಗೆ ಸೇರ್ಪಡೆ ಮಾಡಲಾಗುವುದು ಎಂಬ ಭರವಸೆಯನ್ನು ಕಂದಾಯ ಸಚಿವ ಜಿ. ಪರಮೇಶ್ವರ ನೀಡಿದ್ದಾರೆ ಎಂದು ಯಾದಗಿರಿ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಸೆ.4ರಂದು ಕಂದಾಯ ಸಚಿವ ಜಿ. ಪರಮೇಶ್ವರ ಅವರನ್ನು ತುಮಕೂರಿನಲ್ಲಿ ಖುದ್ದಾಗಿ ಭೇಟಿ ಮಾಡಿ ಯಾದಗಿರಿ ಹಾಗೂ ವಡಗೇರಾ ತಾಲೂಕುಗಳ ವಾಸ್ತವ ಪರಿಸ್ಥಿತಿಯನ್ನು ವಿವರಿಸಿರುವುದಾಗಿ ತಿಳಿಸಿದ್ದಾರೆ. ಜಿಲ್ಲಾಡಳಿತವೂ ಬರ ಘೋಷಣೆಗೆ ಪೂರಕವಾದ ವರದಿ ಸಲ್ಲಿಸಿದ್ದು, ಯಾವುದೇ ಅಡ್ಡಿ ಅಥವಾ ಆತಂಕವಿಲ್ಲ. ಮುಂದಿನ ದಿನಗಳಲ್ಲಿ ಉಳಿದ ತಾಲೂಕುಗಳೂ ಬರಪೀಡಿತ ಎಂದು ಘೋಷಣೆಯಾಗುವುದು ನಿಶ್ಚಿತ ಎಂದು ಸಚಿವರು ಭರವಸೆ ನೀಡಿದ್ದಾರೆ ಎಂದು ಹೇಳಿದ್ದಾರೆ.

ಬರ ಪರಿಸ್ಥಿತಿ ಜಿಲ್ಲೆಯಾದ್ಯಂತ ಆವರಿಸಿದ್ದು, ಪ್ರಸ್ತುತ ಜಿಲ್ಲೆಯ ಒಂದು ತಾಲೂಕನ್ನು ಮಾತ್ರ ಬರಪೀಡಿತ ಎಂದು ಘೋಷಿಸಲಾಗಿದೆ. ಉಳಿದ ತಾಲೂಕುಗಳ ಪರಿಸ್ಥಿತಿಯೂ ಭೀಕರವಾಗಿರುವ ಕುರಿತು ಕಂದಾಯ ಸಚಿವರೊಂದಿಗೆ ಸುದೀರ್ಘವಾಗಿ ಚರ್ಚಿಸಲಾಗಿದೆ. ಸಚಿವರು ಸ್ಥಳದಿಂದಲೇ ಮೊಬೈಲ್ ಮೂಲಕ ಸಂಬಂಧಪಟ್ಟ ಹಿರಿಯ ಅಧಿಕಾರಿಗಳನ್ನು ಸಂಪರ್ಕಿಸಿ ವಾಸ್ತವಾಂಶಗಳ ಕುರಿತು ಚರ್ಚಿಸಿದ್ದಾರೆ. ಶೀಘ್ರದಲ್ಲೇ ಉಳಿದ ತಾಲೂಕುಗಳನ್ನೂ ಬರಪೀಡಿತ ಪ್ರದೇಶಗಳೆಂದು ಘೋಷಿಸುವ ವಿಶ್ವಾಸವಿದೆ ಎಂದು ತುನ್ನೂರ ತಿಳಿಸಿದ್ದಾರೆ.

ರೈತರ ಸಂಕಷ್ಟ ನಿವಾರಣೆಗೆ ಸರ್ಕಾರ ಹಾಗೂ ಅಧಿಕಾರಿಗಳು ಒಗ್ಗಟ್ಟಾಗಿ ಕಾರ್ಯನಿರ್ವಹಿಸಬೇಕು. ಬರದ ನೈಜ ಪರಿಸ್ಥಿತಿಯನ್ನು ಕೇಂದ್ರ ಅಧ್ಯಯನ ತಂಡದ ಗಮನಕ್ಕೆ ತರುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವರು ತಿಳಿಸಿದ್ದಾರೆ. ಮಳೆ ಕೊರತೆಯಿಂದ ರಾಜ್ಯದಲ್ಲಿ ಭೀಕರ ಬರ ಪರಿಸ್ಥಿತಿ ಎದುರಾಗಿದೆ ಎಂದೂ ಸಚಿವರು ಹೇಳಿದ್ದಾರೆ ಎಂದು ಶಾಸಕರು ತಿಳಿಸಿದ್ದಾರೆ.

ಬರದ ವಿಚಾರದಲ್ಲೂ ರಾಜಕೀಯ ಮಾಡುವ ಪ್ರತಿಪಕ್ಷಗಳ ಟೀಕೆಗಳಿಗೆ ಯಾರೂ ಕಿವಿಗೊಡಬಾರದು. ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ರೈತರ ಪರವಾಗಿದ್ದು, ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ಕೆಲವು ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ್ದು, ಶೀಘ್ರದಲ್ಲೇ ತಮ್ಮ ನಿರ್ಧಾರ ಪ್ರಕಟಿಸಲಿದ್ದಾರೆ ಎಂದು ಚೆನ್ನಾರೆಡ್ಡಿ ಪಾಟೀಲ್ ತುನ್ನೂರ ಹೇಳಿದ್ದಾರೆ.

ಸೆ.21ರಿಂದ ವಿಶೇಷ ಅಧಿವೇಶನ :

ರಾಜ್ಯದ ರೈತರು ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಬರ ಸೇರಿದಂತೆ ಜ್ವಲಂತ ಸಮಸ್ಯೆಗಳ ಕುರಿತು ಚರ್ಚಿಸಲು ಕಳೆದ ಅಧಿವೇಶನದಲ್ಲಿ ಅವಕಾಶ ಸಿಗಲಿಲ್ಲ. ಈ ಹಿನ್ನೆಲೆಯಲ್ಲಿ ಸೆ.21, 22 ಹಾಗೂ 23ರಂದು ವಿಶೇಷ ಅಧಿವೇಶನ ಕರೆಯಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ರಾಜ್ಯದ ಅಭಿವೃದ್ಧಿಗಾಗಿ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲು ನಮ್ಮ ಸರ್ಕಾರ ಸದಾ ಬದ್ಧವಾಗಿದೆ ಎಂದು ಶಾಸಕ ತುನ್ನೂರ ತಿಳಿಸಿದ್ದಾರೆ.

ವೈರಲ್ ಸೋಂಕಿನಿಂದ ಕಾರ್ಯಕ್ರಮಕ್ಕೆ ಗೈರು :

ವೈರಲ್ ಸೋಂಕಿನ ಕಾರಣದಿಂದ ಸಾರ್ವಜನಿಕ ಸಮಾರಂಭದಲ್ಲಿ ಪಾಲ್ಗೊಂಡಿಲ್ಲ ಎಂದು ಸ್ಪಷ್ಟಪಡಿಸಿರುವ ಶಾಸಕ ತುನ್ನೂರ, ಜನಪರ ಕಾರ್ಯಕ್ರಮಗಳನ್ನು ರೂಪಿಸುತ್ತಾ ಬಂದಿರುವ ಸರ್ಕಾರ ಇದೀಗ ನೂತನ ‘ಪ್ರಜಾ ಸೇವೆ’ ಇಲಾಖೆಯನ್ನು ಆರಂಭಿಸಿದೆ ಎಂದು ತಿಳಿಸಿದ್ದಾರೆ.

ಪ್ರತಿ ತಿಂಗಳ ಮೊದಲ ಹಾಗೂ ಮೂರನೇ ಶನಿವಾರ ರಾಜ್ಯದ ಎಲ್ಲಾ ಜಿಲ್ಲೆ, ತಾಲೂಕು ಹಾಗೂ ಹೋಬಳಿ ಮಟ್ಟದಲ್ಲಿ ಆಯಾ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಸಕರ ಅಧ್ಯಕ್ಷತೆಯಲ್ಲಿ ‘ಪ್ರಜಾ ಸೇವೆ’ ಆಂದೋಲನ ಸಭೆಗಳು ನಡೆಯಲಿವೆ. ಈ ಸಭೆಗಳಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ, ಅರ್ಹ ಅರ್ಜಿಗಳಿಗೆ ಪರಿಹಾರ ಒದಗಿಸುವ ಮೂಲಕ ಜನಸೇವೆಯ ಹೊಸ ಅಧ್ಯಾಯ ಆರಂಭವಾಗಲಿದೆ. ಇದಕ್ಕೆ ಸಾರ್ವಜನಿಕರ ಸಹಕಾರ ಅತ್ಯಗತ್ಯ ಎಂದು ಅವರು ಮನವಿ ಮಾಡಿದ್ದಾರೆ.

Tags

Chennareddy PatilYadgiri
share
ವಾರ್ತಾಭಾರತಿ
ವಾರ್ತಾಭಾರತಿ
Next Story
X