Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. Yadgiri | ಸಂಗೊಳ್ಳಿ ರಾಯಣ್ಣ ಅವರ ಶೌರ್ಯ...

Yadgiri | ಸಂಗೊಳ್ಳಿ ರಾಯಣ್ಣ ಅವರ ಶೌರ್ಯ ಯುವಕರಿಗೆ ಸ್ಫೂರ್ತಿ : ಶರಣಬಸಪ್ಪಗೌಡ ದರ್ಶನಾಪುರ

ದೋರನಹಳ್ಳಿಯಲ್ಲಿ ಸಂಗೋಳ್ಳಿ ರಾಯಣ್ಣನವರ ಮೂರ್ತಿ ಲೋಕಾರ್ಪಣೆ ಸಮಾರಂಭ

ವಾರ್ತಾಭಾರತಿವಾರ್ತಾಭಾರತಿ13 Sept 2026 7:11 PM IST
share
Yadgiri | ಸಂಗೊಳ್ಳಿ ರಾಯಣ್ಣ ಅವರ ಶೌರ್ಯ ಯುವಕರಿಗೆ ಸ್ಫೂರ್ತಿ : ಶರಣಬಸಪ್ಪಗೌಡ ದರ್ಶನಾಪುರ

ಯಾದಗಿರಿ: ನಾಡಿಗೆ ಹಾಲುಮತ ಸಮಾಜದ ಕೊಡುಗೆ ಅಪಾರವಾಗಿದೆ. ಭಕ್ತ ಕನಕದಾಸರು, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನಂತಹ ಧೀಮಂತ ವ್ಯಕ್ತಿಗಳನ್ನು ನೀಡಿದ ಶ್ರೇಷ್ಠ ಸಮಾಜ ಹಾಲುಮತ ಸಮುದಾಯ ಎಂದು ಶಾಸಕ ಹಾಗೂ ಮಾಜಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಹೇಳಿದರು.

ಶಹಾಪುರ ತಾಲೂಕಿನ ದೋರನಹಳ್ಳಿ ಪಟ್ಟಣದಲ್ಲಿ ನಡೆದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆ ಲೋಕಾರ್ಪಣೆ ಸಮಾರಂಭದಲ್ಲಿ ಅವರು ಮಾತನಾಡಿದರು.

ಸಂಗೊಳ್ಳಿ ರಾಯಣ್ಣ ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ ಮಹಾನ್ ದೇಶಭಕ್ತರು. ಕಿತ್ತೂರು ಸಂಸ್ಥಾನದ ರಕ್ಷಣೆಗೆ ಬ್ರಿಟಿಷರ ವಿರುದ್ಧ ಹೋರಾಡಿ ಹುತಾತ್ಮರಾದ ಅವರ ಕೊಡುಗೆ ದೇಶದ ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿ ಅಜರಾಮರವಾಗಿದೆ ಎಂದು ಹೇಳಿದರು.

ದೋರನಹಳ್ಳಿಯ ಹಾಲುಮತ ಸಮುದಾಯ ಸರ್ವಧರ್ಮಗಳನ್ನು ಗೌರವಿಸುವ ಹೃದಯವಂತ ಸಮಾಜವಾಗಿದೆ. ಸಮುದಾಯದ ಬೇಡಿಕೆಯಂತೆ ದೋರನಹಳ್ಳಿಯಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಅಗತ್ಯ ಅನುದಾನ ನೀಡಲಾಗುವುದು ಎಂದು ಭರವಸೆ ನೀಡಿದರು.

ಅಗತೀರ್ಥ ರೇವಣಸಿದ್ದೇಶ್ವರ ಮಠದ ಪೂಜ್ಯ ಶಾಂತಮಯ ಸ್ವಾಮೀಜಿ ಮಾತನಾಡಿ, ಹಾಲುಮತ ಸಮುದಾಯ ದೈವತ್ವದ ನೆಲೆಗಟ್ಟಿನಲ್ಲಿ ಬದುಕಿದ ಸಮಾಜವಾಗಿದ್ದು, ಮನುಷ್ಯ ಮಹಾದೇವನಾಗಬಹುದು, ನರ ನಾರಾಯಣನಾಗಬಹುದು ಎಂಬ ಸಂದೇಶವನ್ನು ಹಿಂದೂ ಸಂಸ್ಕೃತಿಯ ಮೂಲಕ ಸಾರಿದೆ ಎಂದು ಹೇಳಿದರು.

ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರು ಮಾತನಾಡಿ, ಸಂಗೊಳ್ಳಿ ರಾಯಣ್ಣ ಅವರ ಶೌರ್ಯ, ತ್ಯಾಗ ಮತ್ತು ಆದರ್ಶದ ಬದುಕು ಇಂದಿನ ಯುವ ಸಮುದಾಯಕ್ಕೆ ದಾರಿದೀಪವಾಗಬೇಕು. ಹಾಲುಮತ ಸಮಾಜವು ತನ್ನದೇ ಆದ ಇತಿಹಾಸ ಮತ್ತು ಪರಂಪರೆಯನ್ನು ಹೊಂದಿರುವ ಸಮುದಾಯ ಎಂದು ಹೇಳಿದರು.

ಕಾಂಗ್ರೆಸ್ ಮುಖಂಡ ಮಹಾರಾಜ ದಿಗ್ಗಿ ಮಾತನಾಡಿ, ದೋರನಹಳ್ಳಿಯಲ್ಲಿ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆ ಲೋಕಾರ್ಪಣೆ ಮಾಡಿರುವುದು ಶ್ಲಾಘನೀಯ. ಜಿಲ್ಲೆಯ ವಿವಿಧ ಕಡೆಗಳಲ್ಲೂ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆ ಸ್ಥಾಪನೆಗೆ ಅಗತ್ಯ ನೆರವು ನೀಡುವುದಾಗಿ ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ವಿಶಾಲ್ ಶಿಂಧೆ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿನೋದಗೌಡ ಮಾಲಿಪಾಟೀಲ್, ಹಣಮೇಗೌಡ ಬಿರನಕಲ್, ಮಲ್ಲಣ್ಣಗೌಡ ಐಕೂರು ಸೇರಿದಂತೆ ಹಲವು ಗಣ್ಯರು ಮಾತನಾಡಿದರು.

ಈ ಸಂದರ್ಭದಲ್ಲಿ ಗೋಲ್ಲಾಳಪ್ಪ ಗೋಲಗೇರಿ, ನಿಂಗಣ್ಣಗೌಡ ಮುರಲದೊಡ್ಡಿ, ಗಜೇಂದ್ರ ದೇಸಾಯಿ, ರಾಜಕುಮಾರ ಗಣೇರ್, ಬಸ್ಸುಗೌಡ ಬಿಳಾರ, ತಮ್ಮಣ್ಣಗೌಡ ಜೋಳದ, ದೇವಪ್ಪ ಮಾರಡಗಿ, ಬಸವರಾಜ ಕರೇಗಾರ ಸೇರಿದಂತೆ ಹಲವು ಗಣ್ಯರನ್ನು ಸನ್ಮಾನಿಸಲಾಯಿತು.

ಬೆಳಿಗ್ಗೆ ಸಿದ್ಧಾರೂಢ ಮಠದಿಂದ ಕಳಸ, ಡೊಳ್ಳು, ಭಜಂತ್ರಿ ಹಾಗೂ ಮಂಗಳವಾದ್ಯಗಳೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಗೊಳ್ಳಿ ರಾಯಣ್ಣ ಅವರ ಭಾವಚಿತ್ರದ ಅದ್ದೂರಿ ಮೆರವಣಿಗೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಕನಕ ಗುರುಪೀಠ ತಿಂಥಣಿ ಬ್ರಿಡ್ಜ ಪೂಜ್ಯ ಲಿಂಗ ಭೀರದೇವರು,ಶಿವಲಿಂಗ ರಾಜೇಂದ್ರ ಶಿವಾಚಾರ್ಯರು, ಪೂಜ್ಯ ಅಭಿನವ ಮಹಾಂತೇಶ್ವರ ಶಿವಾಚಾರ್ಯರು,ಪೂಜ್ಯ ಭೀಮಾಶಂಕರಾನಂದ ಅವಧೂತರು, ಮಹೇಶರೆಡ್ಡಿಗೌಡ ಮುದ್ನಾಳ, ಜಟ್ಟೆಪ್ಪ ಹಿರೆಪೂಜಾರಿ, ಸಾಬಣ್ಣ ಮಲ್ಲಪ್ಪ ಟೋಕಾಪುರ, ಈಶ್ವರಪ್ಪಗೌಡ ಲಕ್ಕಶೇಟ್ಟಿ, ಸಾಬಣ್ಣ ಗೋಶಿ, ರಾಜುಗಣೇರ್, ನಿಜಗುಣಪೂಜಾರಿ, ಮೌನೇಶ ಕೊಂತಲ್, ಮಲ್ಲಿಕಾರ್ಜುನ ಪೂಜಾರಿ, ಮುಂತಾದವರು ಇದ್ದರು. ಯಮನಪ್ಪ ಮುಕುಡಿ ಸ್ವಾಗತಿಸಿದರು,ಮಲ್ಲು ಒಕಳೇರ್ ವಂದಿಸಿದರು.

Tags

Sangolli RayannaYadgiri
share
ವಾರ್ತಾಭಾರತಿ
ವಾರ್ತಾಭಾರತಿ
Next Story
X