ಯಾದಗಿರಿ | ಸಂಚಾರಿ ಆರೋಗ್ಯ ಘಟಕದ ಸದುಪಯೋಗ ಪಡೆದುಕೊಳ್ಳಿ : ಶಾಸಕ ಆರ್.ವಿ.ನಾಯಕ

ಸುರಪುರ : ತಾಲೂಕಿನಲ್ಲಿರುವ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಇಲಾಖೆಯಿಂದ ಗುರುತಿನ ಚೀಟಿ ಹೊಂದಿರುವವರಿಗಾಗಿ ನಮ್ಮ ಸರಕಾರ ವಿಶೇಷವಾದ ಸಂಚಾರಿ ಆರೋಗ್ಯ ಘಟಕ ಯೋಜನೆ ಆರಂಭಿಸಿದ್ದು, ನೊಂದಾಯಿತ ಕಟ್ಟಡ ಕಾರ್ಮಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಶಾಸಕ ರಾಜಾ ವೇಣುಗೋಪಾಲ ನಾಯಕ ತಿಳಿಸಿದರು.
ನಗರದ ಶ್ರೀ ವೇಣುಗೋಪಾಲಸ್ವಾಮಿ ದೇವಸ್ಥಾನದ ಆವರಣದಲ್ಲಿ ಕರ್ನಾಟಕ ಕಟ್ಟಡ ನಿರ್ಮಾಣ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ನೂತನವಾಗಿ ಆರಂಭಿಸಲಾಗಿರುವ ಸಂಚಾರಿ ಆರೋಗ್ಯ ಘಟಕದ ವಾಹನಕ್ಕೆ ಹಸಿರು ನಿಶಾನಿ ತೋರುವ ಮೂಲಕ ಚಾಲನೆ ನೀಡಿ ಮಾತನಾಡಿದರು.
ಈ ಸಂದರ್ಭದಲ್ಲಿ ನಗರಸಭೆ ಉಪಾಧ್ಯಕ್ಷ ರಾಜಾ ಪಿಡ್ಡ ನಾಯಕ (ತಾತಾ), ನಯೋಪ್ರಾ ಅಧ್ಯಕ್ಷ ಪ್ರಕಾಶ ಗುತ್ತೇದಾರ, ಶಕೀಲ್ ಅಹ್ಮದ್ ಖುರೇಷಿ, ನಗರಸಭೆ ಸದಸ್ಯರಾದ ನಾಸೀರ್ ಹುಸೇನ್ ಕುಂಡಾಲೆ, ಮೆಹಬೂಬ್ ಖುರೇಷಿ, ನಗರಸಭೆ ನಾಮನಿದೇಶಿತ ಸದಸ್ಯರಾದ ಸೋಮರಾಯ ಶಖಾಪುರ, ಪ್ರಕಾಶ ಅಲಬನೂರ, ಸಾಯಿಬಣ್ಣ ಮಡಿವಾಳ ಹಾಗೂ ಮುಖಂಡರಾದ ಮಲ್ಲಣ್ಣ ಸಾಹುಕಾರ ಮುಧೋಳ ನರಸಿಂಗಪೇಟ, ವೆಂಕಟೇಶ ಹೊಸ್ಮನಿ, ಸಿದ್ರಾಮ ಎಲಿಗಾರ ಹಾಗೂ ಕಾರ್ಮಿಕ ಇಲಾಖೆ ನಿರೀಕ್ಷಕರು, ಸಂಚಾರಿ ಆರೋಗ್ಯ ಘಟಕದ ಸಿಬ್ಬಂದಿಗಳು ಸೇರಿದಂತೆ ಅನೇಕರು ಭಾಗವಹಿಸಿದ್ದರು.







