Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. Yadgiri | ಶಿಕ್ಷಣ, ಆರೋಗ್ಯ, ಶುದ್ಧ...

Yadgiri | ಶಿಕ್ಷಣ, ಆರೋಗ್ಯ, ಶುದ್ಧ ಕುಡಿಯುವ ನೀರಿಗೆ ಮೊದಲ ಆದ್ಯತೆ : ಶಾಸಕ ಶರಣಗೌಡ ಕಂದಕೂರ

ವಾರ್ತಾಭಾರತಿವಾರ್ತಾಭಾರತಿ29 July 2026 4:56 PM IST
share
Yadgiri | ಶಿಕ್ಷಣ, ಆರೋಗ್ಯ, ಶುದ್ಧ ಕುಡಿಯುವ ನೀರಿಗೆ ಮೊದಲ ಆದ್ಯತೆ : ಶಾಸಕ ಶರಣಗೌಡ ಕಂದಕೂರ
2 ಕೋಟಿ ರೂ. ವೆಚ್ಚದ ವಸತಿ ನಿಲಯ ಕಟ್ಟಡ, ರಸ್ತೆ, ಕಂಪ್ಯೂಟರ್ ಲ್ಯಾಬ್, ಕುಡಿಯುವ ನೀರಿನ ಘಟಕ ಲೋಕಾರ್ಪಣೆ

ಯಾದಗಿರಿ: ಮತಕ್ಷೇತ್ರದಲ್ಲಿ ಶುದ್ಧ ಕುಡಿಯುವ ನೀರು, ಆರೋಗ್ಯ ಹಾಗೂ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಜನರಿಗೆ ಮೂಲಸೌಕರ್ಯ ಒದಗಿಸುವ ಕೆಲಸವನ್ನು ನಿರಂತರವಾಗಿ ಮುಂದುವರಿಸಲಾಗುತ್ತಿದೆ ಎಂದು ಗುರಮಠಕಲ್ ಶಾಸಕ ಶರಣಗೌಡ ಕಂದಕೂರ ಹೇಳಿದರು.

ಬುಧವಾರ ಸೈದಾಪುರ ಗ್ರಾಮದಲ್ಲಿ ಕೆಕೆಆರ್‌ಡಿಬಿ ಯೋಜನೆಯಡಿ ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದ ನಾಲ್ಕು ನೂತನ ಕೊಠಡಿಗಳ ಉದ್ಘಾಟನೆ, ರಾಚನಳ್ಳಿ ಗ್ರಾಮದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗೆ ಸಂಪರ್ಕ ಕಲ್ಪಿಸುವ ರಸ್ತೆ, ಕಂಪ್ಯೂಟರ್ ಲ್ಯಾಬ್ ಹಾಗೂ ಶುದ್ಧ ಕುಡಿಯುವ ನೀರಿನ ಘಟಕವನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನದಲ್ಲಿ ಯಾವುದೇ ವಿಳಂಬ ಸಹಿಸುವುದಿಲ್ಲ. ವೈಯಕ್ತಿಕ ಕೆಲಸಕ್ಕಾಗಿ ಅಧಿಕಾರಿಗಳಿಗೆ ಕರೆ ಮಾಡುವುದಿಲ್ಲ. ಆದರೆ ಸಾರ್ವಜನಿಕ ಅಭಿವೃದ್ಧಿ ಕಾರ್ಯಗಳಲ್ಲಿ ನಿರ್ಲಕ್ಷ್ಯ ತೋರಿದರೆ ಪ್ರಶ್ನಿಸುವುದು ನನ್ನ ಕರ್ತವ್ಯ ಎಂದು ಹೇಳಿದರು.

ಕ್ಷೇತ್ರದ ವಸತಿ ಶಾಲೆಗಳಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಲು ತಾವು ಬದ್ಧರಾಗಿದ್ದು, ಅನುದಾನ ಒದಗಿಸುವ ಕೆಲಸವನ್ನು ಜನಪ್ರತಿನಿಧಿಗಳು ಮಾಡಿದರೆ, ಅದನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಜವಾಬ್ದಾರಿ ಅಧಿಕಾರಿಗಳದ್ದಾಗಿದೆ ಎಂದು ತಿಳಿಸಿದರು.

ಸಹಾಯಕ ಆಯುಕ್ತ ಶ್ರೀಧರ ಗೋಟೂರ ಮಾತನಾಡಿ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಶಾಸಕ ಶರಣಗೌಡ ಕಂದಕೂರ ವಿಶೇಷ ಆದ್ಯತೆ ನೀಡುತ್ತಿದ್ದು, ಒಂದೇ ಶಾಲೆಗೆ 2 ಕೋಟಿ ರೂ. ಅನುದಾನ ನೀಡಿರುವುದು ಅವರ ಶಿಕ್ಷಣದ ಮೇಲಿನ ಬದ್ಧತೆಯನ್ನು ತೋರಿಸುತ್ತದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಕಳೆದ ಸಾಲಿನ ನೀಟ್ ಪರೀಕ್ಷೆಯಲ್ಲಿ 1866ನೇ ರ್ಯಾಂಕ್ ಪಡೆದ ವಿದ್ಯಾರ್ಥಿನಿ ಮಾನಸಾ ಹಾಗೂ ಎಸ್ಸೆಸ್ಸೆಲ್ಸಿಯಲ್ಲಿ ಶೇ.93 ಅಂಕ ಗಳಿಸಿದ ಅಫ್ಸಾನಾ ಅವರನ್ನು ಸನ್ಮಾನಿಸಲಾಯಿತು. ಬಳಿಕ ಶಾಸಕರು ಹಾಗೂ ಅಧಿಕಾರಿಗಳು ವಿದ್ಯಾರ್ಥಿಗಳೊಂದಿಗೆ ಕುಳಿತು ಭೋಜನ ಸವಿದರು.

ಗುರು ಪೂರ್ಣಿಮೆ ಅಂಗವಾಗಿ ಮಾತನಾಡಿದ ಶಾಸಕ ಕಂದಕೂರ, ಕೊಪ್ಪಳದ ಶ್ರೀ ಗವಿಮಠದ ಶ್ರೀಗಳು ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ತಮ್ಮ ಜೀವನದ ಮಾರ್ಗದರ್ಶಕರಾಗಿದ್ದು, ಸಂಕಷ್ಟದ ಸಂದರ್ಭದಲ್ಲಿ ಧೈರ್ಯ ತುಂಬಿದ ಅವರ ಮಾರ್ಗದರ್ಶನವನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಹೇಳಿದರು.

ಜನರ ಸಮಸ್ಯೆ ಆಲಿಸುವ ತಾಳ್ಮೆ ಅಧಿಕಾರಿಗಳಲ್ಲಿ ಇರಬೇಕು :

ಗ್ರಾಮ ಪಂಚಾಯಿತಿ ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಗ್ರಾಮಗಳಲ್ಲಿ ಚರಂಡಿ ಸ್ವಚ್ಛತೆ, ಕುಡಿಯುವ ನೀರಿನಂತಹ ಮೂಲಭೂತ ಸಮಸ್ಯೆಗಳಿಗೂ ಜನರು ಶಾಸಕರ ಬಳಿ ಬರಬೇಕಾದ ಪರಿಸ್ಥಿತಿ ಉಂಟಾಗಿರುವುದು ವಿಷಾದನೀಯ. ಅಧಿಕಾರಿಗಳು ಜನರ ಸಮಸ್ಯೆಗಳನ್ನು ತಾಳ್ಮೆಯಿಂದ ಆಲಿಸಿ ಪರಿಹಾರಕ್ಕೆ ಮುಂದಾಗಬೇಕು ಎಂದು ಸೂಚಿಸಿದರು.

ರಸ್ತೆ ನಿರ್ಮಾಣಕ್ಕೆ ಸಹಕರಿಸಿದ ರೈತರಿಗೆ ಅಭಿನಂದನೆ :

ರಾಚನಳ್ಳಿ ವಸತಿ ಶಾಲೆಗೆ ಸಂಪರ್ಕಿಸುವ ರಸ್ತೆ ನಿರ್ಮಾಣ ಬಹುಕಾಲದ ಬೇಡಿಕೆಯಾಗಿತ್ತು. ಸ್ಥಳೀಯ ರೈತರ ಸಹಕಾರದಿಂದ ರಸ್ತೆ ನಿರ್ಮಿಸಲು ಸಾಧ್ಯವಾಗಿದ್ದು, ಸಹಕರಿಸಿದ ಎಲ್ಲ ರೈತರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ವಿದ್ಯಾರ್ಥಿಗಳು ಉತ್ತಮವಾಗಿ ವಿದ್ಯಾಭ್ಯಾಸ ಮಾಡಿ ಶಾಲೆ, ಕ್ಷೇತ್ರ ಹಾಗೂ ಜಿಲ್ಲೆಗೆ ಕೀರ್ತಿ ತರಬೇಕು ಎಂದು ಕರೆ ನೀಡಿದರು.

ಶಾಸಕರಿಗೆ ಪಾಲಕರ ಮೆಚ್ಚುಗೆ :

ಶಾಲೆಗೆ ರಸ್ತೆ ನಿರ್ಮಿಸುವ ಭರವಸೆಯನ್ನು ನೀಡಿದ್ದ ಶಾಸಕ ಶರಣಗೌಡ ಕಂದಕೂರ ಅವರು ಕೊಟ್ಟ ಮಾತಿನಂತೆ ರಸ್ತೆ ಹಾಗೂ ಶುದ್ಧ ಕುಡಿಯುವ ನೀರಿನ ಘಟಕವನ್ನು ನಿರ್ಮಿಸಿ ಉದ್ಘಾಟಿಸಿದ್ದಾರೆ. ಮಕ್ಕಳ ಶಿಕ್ಷಣದ ಬಗ್ಗೆ ಅವರಿಗಿರುವ ಕಾಳಜಿ ಶ್ಲಾಘನೀಯ ಎಂದು ಪಾಲಕರು ಅಭಿನಂದಿಸಿದರು.

ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಸಿದ್ದಣ್ಣ ಅಣಬಿ, ತಾಪಂ ಇಒ ಮಹಾದೇವ, ಎಇಇ ಟಿ.ಬನ್ನಪ್ಪ, ಚಂದ್ರಶೇಖರ, ಸಿಪಿಐ ಶಿವಪ್ಪ, ಜೆಸ್ಕಾ ಎಇಇ ಮಾರ್ಕಂಡಯ್ಯಾ, ಪ್ರಮುಖರಾದ ಚಂದ್ರಗೌಡ, ಅಜಯರಡ್ಡಿ ಯಲ್ಹೇರಿ, ಬಸವರಾಜಪ್ಪ ಗೌಡ, ಗುರುನಾಥರಡ್ಡಿ, ಜೆಡಿಎಸ್ ಜಿಲ್ಲಾಧ್ಯಕ್ಷ ಸುಭಾಶ್ಚಂದ್ರ ಕಟಕಟಿ, ಪ್ರಾಚಾರ್ಯೆ ಶಿವಲೀಲಾ, ಸ್ವಾಗತಿಸಿದರು. ಚಂದ್ರಶೇಖರ ಗೋಗಿ ಅವರ ತಂಡದಿಂದ ಪ್ರಾರ್ಥನೆ ಗೀತೆ ನಡೆಯಿತು.

Tags

Sharanagouda KandakurYadgiri
share
ವಾರ್ತಾಭಾರತಿ
ವಾರ್ತಾಭಾರತಿ
Next Story
X